ಗುಡಿಸಲು ಮುಕ್ತ ತಾಲೂಕು ಮಾಡುವುದೇ ನನ್ನ ಗುರಿ : ಟಿ.ಬಿ.ಜಯಚಂದ್ರ

By Kannadaprabha News  |  First Published Sep 17, 2023, 10:08 AM IST

ಶಿರಾ ತಾಲೂಕಿನಲ್ಲಿ ಸುಮಾರು 70 ಸಾವಿರ ಕುಟುಂಬಗಳು ವಸತಿ ರಹಿತರಿದ್ದಾರೆ. ಗುಡಿಸಲು ರಹಿತ ತಾಲೂಕು ಮಾಡಬೇಕು ಎಂಬುದು ನನ್ನ ಉದ್ದೇಶವಾಗಿದ್ದು, ಹಂತ ಹಂತವಾಗಿ ಮನೆಗಳನ್ನು ಮಂಜೂರು ಮಾಡಿಸಲಾಗುವುದು ಎಂದು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಗಳಾದ ಟಿ.ಬಿ.ಜಯಚಂದ್ರ ಹೇಳಿದರು.


  ಶಿರಾ : ಶಿರಾ ತಾಲೂಕಿನಲ್ಲಿ ಸುಮಾರು 70 ಸಾವಿರ ಕುಟುಂಬಗಳು ವಸತಿ ರಹಿತರಿದ್ದಾರೆ. ಗುಡಿಸಲು ರಹಿತ ತಾಲೂಕು ಮಾಡಬೇಕು ಎಂಬುದು ನನ್ನ ಉದ್ದೇಶವಾಗಿದ್ದು, ಹಂತ ಹಂತವಾಗಿ ಮನೆಗಳನ್ನು ಮಂಜೂರು ಮಾಡಿಸಲಾಗುವುದು ಎಂದು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಗಳಾದ ಟಿ.ಬಿ.ಜಯಚಂದ್ರ ಹೇಳಿದರು.

ಶುಕ್ರವಾರ ನಗರದ ತಾಲೂಕು ಪಂಚಾಯಿತಿ ಆವರಣದಲ್ಲಿ ಪಿಎಂಎವೈ ಯೋಜನೆಯಡಿ ಸುಮಾರು 817 ಫಲಾನುಭವಿಗಳಿಗೆ ಕಾರ್ಯಾದೇಶ ಪತ್ರ ನೀಡಿ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್ ಸರ್ಕಾರ ಅನೇಕ ರೀತಿಯ ವಸತಿ ಯೋಜನೆಗಳನು ಜಾರಿಗೆ ತಂದಿತ್ತು. ಇಂದಿರಾ ವಸತಿ ಯೋಜನೆ, ಬಸವ ವಸತಿ ಯೋಜನೆ, ಅಂಬೇಡ್ಕರ್ ವಸತಿ ಯೋಜನೆ, ಈ ಯೋಜನೆಗಳ ಮುಖಾಂತರ ಎಲ್ಲಾ ವರ್ಗದ ವಸತಿ ರಹಿತರಿಗೂ ಮನೆಯನ್ನು ಮಂಜೂರು ಮಾಡಲಾಗುತ್ತಿತ್ತು. ಕಳೆದ ಬಾರಿ ನಾನು ಸಚಿವನಾಗಿದ್ದ ಸಂದರ್ಭದಲ್ಲಿ ತಾಲೂಕಿಗೆ ಸುಮಾರು 25 ಸಾವಿರ ಮನೆಗಳನ್ನು ನೀಡಿದ್ದೆವು. ಆದರೆ ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಐದು ವರ್ಷಗಳಲ್ಲಿ ಕೇವಲ  ಮೂರು ಸಾವಿರ ಮನೆಗಳನ್ನು ಮಂಜೂರು ಮಾಡಲಾಗಿದೆ. ಅದಕ್ಕೂ ಸರಿಯಾದ ಹಣ ಬಿಡುಗಡೆಯಾಗಿಲ್ಲ ಎಂದರು.

Tap to resize

Latest Videos

ಈ ಬಾರಿ ಜನರು ಜನಪರ ಸರ್ಕಾರವನ್ನು ಆಯ್ಕೆ ಮಾಡಿದ್ದೀರಿ. ರಾಜ್ಯವನ್ನು ಗುಡಿಸಲು ಮುಕ್ತ ರಾಜ್ಯವನ್ನಾಗಿಸಬೇಕೆಂಬುದು ಕಾಂಗ್ರೆಸ್ ಪಕ್ಷದ ಸಂಕಲ್ಪವಾಗಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶೇಷವಾದ ಕಾಳಜಿಯನ್ನು ತೆಗೆದುಕೊಂಡಿದ್ದು, ಹೆಚ್ಚು ಮನೆಗಳನ್ನು ಮಂಜೂರು ಮಾಡುವ ಕಾರ್ಯ ಮಾಡುತ್ತಿದ್ದು, ಹಂತ ಹಂತವಾಗಿ ಮನೆಗಳು ಮಂಜೂರಾಗಲಿವೆ ಎಂದರು.

ಕಾರ್ಯಕ್ರಮದಲ್ಲಿ ನಾದೂರು ಗ್ರಾ.ಪಂ. ಅಧ್ಯಕ್ಷೆ ರಕ್ಷಿತ, ಮಾಜಿ ಜಿ.ಪಂ. ಸದಸ್ಯ ಅರೆಹಳ್ಳಿ ರಮೇಶ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಅನಂತರಾಜು, ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ರಾಜ್ಯ ಉಪಾಧ್ಯಕ್ಷ ಅಬ್ದುಲ್ಲಾ ಖಾನ್ ಸೇರಿದಂತೆ ಹಲವರು ಹಾಜರಿದ್ದರು.

click me!