ಎಚ್‌ಡಿಕೆಗಿಂತ ರೇವಣ್ಣಗೆ ಈ ಕ್ಷೇತ್ರದ ಬಗ್ಗೆ ಗೊತ್ತು : ಎಸ್‌ಟಿಎಸ್‌ ಟಾಂಗ್

Kannadaprabha News   | Asianet News
Published : Mar 13, 2021, 03:02 PM IST
ಎಚ್‌ಡಿಕೆಗಿಂತ ರೇವಣ್ಣಗೆ ಈ ಕ್ಷೇತ್ರದ ಬಗ್ಗೆ ಗೊತ್ತು : ಎಸ್‌ಟಿಎಸ್‌ ಟಾಂಗ್

ಸಾರಾಂಶ

ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿಗೆ ಸಚಿವ ಎಸ್‌ ಟಿ ಸೋಮಶೇಖರ್‌ ಅವರಿಗೆ ಟಾಂಗ್ ನೀಡಿದ್ದಾರೆ. ಚುನಾವಣಾ ವಿಚಾರವಾಗಿ ಕುಮಾರಸ್ವಾಮಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. 

ಚಾಮರಾಜನಗರ (ಮಾ.13):  ಮೈಮುಲ್ ಚುನಾವಣೆಗೆ ಮಾಜಿ ಸಿಎಂ ಹೆಚ್.ಡಿ.ಕೆ. ಎಂಟ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಸಹಕಾರಿ ಸಂಸ್ಥೆಗಳಲ್ಲಿ ರಾಜಕೀಯ ಇರಬಾರದು ಎಂದು ಸಚಿವ ಎಸ್‌ ಟಿ ಸೋಮಶೇಖರ್ ಹೇಳಿದ್ದಾರೆ. 

ಚಾಮರಾಜನಗರ ದಲ್ಲಿ ಮಾತನಾಡಿದ ಸಹಕಾರ ಸಚಿವ ಎಸ್ ಟಿ.ಸೋಮಶೇಖರ್  ಯಾರೋ ಪುಣ್ಯಾತ್ಮರು ಸಹಕಾರಿ ಚಳವಳಿ ಕಟ್ಟಿದ್ದಾರೆ.   ಇದರಲ್ಲಿ ರಾಜಕೀಯ ಬೆರೆಸಿ ಹಾಳುಮಾಡುವುದು ಸರಿಯಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕೆ.ಗೆ  ಟಾಂಗ್ ನೀಡಿದ್ದಾರೆ. 

‌ ಚುನಾವಣೆ ಪ್ರತಿಷ್ಠೆ : ಮತ್ತೊಮ್ಮೆ ಮೈತ್ರಿಯತ್ತ ಮುಖ ಮಾಡುತ್ತಿದ್ದಾರೆ ಎಚ್‌ಡಿಕೆ ..

ಸಹಕಾರಿ ಚುನಾವಣೆಯ ವಿಚಾರವನ್ನು ಸ್ಥಳೀಯರಿಗೆ ಬಿಟ್ಟುಬಿಡಬೇಕು. ಹಾಲು ಒಕ್ಕೂಟಗಳಲ್ಲಿ ಭ್ರಷ್ಟಾಚಾರ ಎಂಬ ಹೆಚ್.ಡಿ.ಕೆ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಎಸ್‌ಟಿಎಸ್ ಅವರು ಮಾಜಿ ಸಿಎಂ ಆಗಿದ್ದವರು. ಸಹಕಾರಿ ಕ್ಷೇತ್ರದ ಬಗ್ಗೆ ಅವರಿಗಿಂತ ಅವರ ಅಣ್ಣ ಹೆಚ್.ಡಿ.ರೇವಣ್ಣ ಅವರಿಗೆ ಗೊತ್ತಿದೆ ಎಂದರು.

ಎಚ್‌ಡಿಕೆ  ಅವರು ಹೇಳುವ ರೀತಿ ಯಾವ ಭ್ರಷ್ಟಾಚಾರವೂ ನಡೆಯುತ್ತಿಲ್ಲ. ಹಾಲು ಒಕ್ಕೂಟಗಳು ಲಕ್ಷಾಂತರ ರೈತರಿಗೆ ಅನುಕೂಲ ಮಾಡಿಕೊಡುತ್ತಿವೆ. ಇಲ್ಲಿ ಭ್ರಷ್ಟಾಚಾರ ಹೇಗೆ ಸಾಧ್ಯ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

PREV
click me!

Recommended Stories

ಬೆಂಗಳೂರಿನ 2ನೇ ಏರ್‌ಪೋರ್ಟ್‌, ಗುರುತಿಸಿರೋ ಈ 3 ಸ್ಥಳಗಳಲ್ಲಿ ಯಾವುದು ಬೆಸ್ಟ್? ಅಧ್ಯಯನಕ್ಕೆ ಟೆಂಡರ್ ಕರೆದ ಸರ್ಕಾರ!
ನವೋದಯ ಪರೀಕ್ಷೆಯಲ್ಲಿ ಅಕ್ರಮ ಆರೋಪ; ಬೀದರ್‌ನಲ್ಲಿ ಬಿಇಓಗೆ ವಿದ್ಯಾರ್ಥಿ ಪೋಷಕರಿಂದ ತರಾಟೆ