ಮೈಸೂರು : 8.29 ಕೋಟಿ ರು. ವೆಚ್ಚದ ಕಾಮಗಾರಿಗಳಿಗೆ ದರ್ಶನ್ ಭೂಮಿ ಪೂಜೆ

Published : Feb 01, 2024, 11:40 AM IST
ಮೈಸೂರು :  8.29 ಕೋಟಿ ರು. ವೆಚ್ಚದ ಕಾಮಗಾರಿಗಳಿಗೆ ದರ್ಶನ್  ಭೂಮಿ ಪೂಜೆ

ಸಾರಾಂಶ

ಪಟ್ಟಣದಲ್ಲಿ ಒಟ್ಟು 8.29 ಕೋಟಿ ವೆಚ್ಚದ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.

  ನಂಜನಗೂಡು :  ಪಟ್ಟಣದಲ್ಲಿ ಒಟ್ಟು 8.29 ಕೋಟಿ ವೆಚ್ಚದ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.

ಪಟ್ಟಣದ ಕೆಂಪೇಗೌಡ ಬಡಾವಣೆಯಲ್ಲಿರುವ ಪ. ಜಾತಿ ಮೆಟ್ರಿಕ್ ನಂತರದ ಬಾಲಕಿಯ ವಿದ್ಯಾರ್ಥಿನಿಲಯದ ಆವರಣದಲ್ಲಿ ನೂತನವಾಗಿ 6.50 ಕೋಟಿ ವೆಚ್ಚದಲ್ಲಿ ಹೆಚ್ಚುವರಿ ವಿದ್ಯಾರ್ಥಿನಿಯ ಮತ್ತು ತಾಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ 1.50 ಕೋಟಿ ವೆಚ್ಚದಲ್ಲಿ ಪದವಿ ಪೂರ್ವ ಕಾಲೇಜು ಕಟ್ಟಡಗಳಿಗೆ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಪಟ್ಟಣದ ಶಂಕರಾನಂದ ವಿದ್ಯಾರ್ಥಿನಿಲಯದ ಹಿಂಭಾಗದಲ್ಲಿ ಈಗಾಗಲೇ 210 ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಹೊಸದಾಗಿ ಹೆಚ್ಚಿನ ವಿದ್ಯಾರ್ಥಿನಿಯರಿಗೆ ಅವಕಾಶ ಕಲ್ಪಿಸುವಂತೆ ಬೇಡಿಕೆ ಹೆಚ್ಚಾಗಿದ್ದ ಕಾರಣದಿಂದಾಗಿ ಸುಮಾರು 4 ಕೋಟಿ ವೆಚ್ಚದಲ್ಲಿ 102 ವಿದ್ಯಾರ್ಥಿಗಳು ತಂಗಲು ಸಾಧ್ಯವಾಗುವಂತಹ ಮೂರು ಹಂತಸ್ತಿನ ಸುಸಜ್ಜಿತ ವಿದ್ಯಾರ್ಥಿನಿಲಯದ ಕಟ್ಟಡವನ್ನು ಮತ್ತು 2.5 ಕೋಟಿ ರು. ವೆಚ್ಚದಲ್ಲಿ ಹಾಸ್ಟೆಲ್ಗೆ ಬೇಕಾದ ಸಾಮಾಗ್ರಿಗಳನ್ನು ಖರೀದಿಸಲಾಗುವುದು ಇದರಿಂದ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿನಿಯರ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲಿದೆ ಎಂದರು.

ವಿದ್ಯಾರ್ಥಿ ನಿಲಯದ ಪರಿಶೀಲನೆ ನಡೆಸಿದ ಅವರು, ಹಾಸಿಗೆಗಳಿಗೆ ಬೆಡ್ ಶೀಟ್ ಇಲ್ಲದೆ ಜಮಖಾನವನ್ನು ಹಾಸಿಕೊಂಡು ಮಲಗುತ್ತಿರುವುದನ್ನು ಕಂಡು 210 ಬೆಡ್ ಶೀಟ್ ಗಳನ್ನು ಖರೀದಿಸಲು ಅಂದಾಜು ಪಟ್ಟಿ ತಯಾರಿಸುವಂತೆ ಸೂಚನೆ ನೀಡಿದರು.

ತಾಲೂಕಿನ ದೊಡ್ಡ ಕವಲಂದೆ ಭಾಗದಲ್ಲಿ ಬಡವರ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ಸಲುವಾಗಿ ಕವಲಂದೆ ಗ್ರಾಮದಲ್ಲಿ ಪದವಿ ಪೂರ್ವ ಕಾಲೇಜು ಕಟ್ಟಡದ ಹೆಚ್ಚುವರಿ ಕಟ್ಟಡಕ್ಕೆ 1.58 ಕೋಟಿ ವೆಚ್ಚದಲ್ಲಿ ಗುದ್ದಲಿಪೂಜೆ ನೆರವೇರಿಸಿ ಚಾಲನೆ ನೀಡಲಾಗಿದೆ. 2 ಸುಸಜ್ಜಿತ ಲ್ಯಾಬ್, 2 ಹೆಚ್ಚುವರಿ ಕೊಠಡಿಗಳು ಮತ್ತು ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯವನ್ನು ನಿರ್ಮಿಸಲಾಗುವುದು ಅಲ್ಲದೆ ಇದೇ ಗ್ರಾಮದಲ್ಲಿ 21 ಲಕ್ಷ ವೆಚ್ಚದಲ್ಲಿ ನೂತನ ಅಂಗನವಾಡಿ ಕಟ್ಟಡಕ್ಕೆ ಗುದ್ದಲಿಪೂಜೆ ನೆರವೇರಿಸಲಾಗಿದೆ, ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಂಡು ನಿಗದಿತ ಸಮಯದಲ್ಲಿ ಮುಕ್ತಾಯಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ ಎಂದರು.

ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹೇಶ್, ಸಿ.ಎಂ. ಶಂಕರ್, ನಗರಸಭಾ ಸದಸ್ಯರಾದ ಪ್ರದೀಪ್, ಗಾಯತ್ರಿ, ಎಸ್.ಪಿ. ಮಹೇಶ್, ಎನ್.ಎಸ್. ಯೋಗೀಶ್, ಮುಖಂಡರಾದ ಎಂ.ಎನ್. ಮಂಜುನಾಥ್, ಗ್ರಾಪಂ ಅಧ್ಯಕ್ಷೆ ಜ್ಯೋತಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಭೀಮರಾವ್ ವಡ್ಡಾರ್, ಲೋಕೋಪ ಇಲಾಖೆಯ ಎಇಇ ಸತ್ಯನಾರಾಯಣ, ಎಇಗಳಾದ ಬಸವರಾಜು, ಮಾರ್ಕಂಡೇಯ, ರೇವಣ್ಣ ಇದ್ದರು.

PREV
Read more Articles on
click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
4,808 ಕೋಟಿ ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿ