ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಬಿ. ಕೃಷ್ಣಪ್ಪ ಬಣ) ನಿರ್ಧರಿಸಿದೆ ಎಂದು ಜಿಲ್ಲಾ ಸಂಚಾಲಕ ಎಸ್.ಜೆ. ದೊಡ್ಡ ಉಗ್ರಯ್ಯ ತಿಳಿಸಿದರು.
ಮೈಸೂರು : ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಬಿ. ಕೃಷ್ಣಪ್ಪ ಬಣ) ನಿರ್ಧರಿಸಿದೆ ಎಂದು ಜಿಲ್ಲಾ ಸಂಚಾಲಕ ಎಸ್.ಜೆ. ದೊಡ್ಡ ಉಗ್ರಯ್ಯ ತಿಳಿಸಿದರು.
ಸಂವಿಧಾನಬಾಹಿರ ಮತ್ತು ಶ್ರೀಮಂತ ಪರವಾದ ಬಿಜೆಪಿ ಸರ್ಕಾರವು ದೇಶದ ಬಡ ಜನರ ಹಣ, ಬದುಕನ್ನು ಕಸಿದುಕೊಳ್ಳುತ್ತಿದೆ. ಇವರನ್ನು ಅಧಿಕಾರದಿಂದ ದೂರ ಇರಿಸುವುದು ನಮ್ಮ ಗುರಿ. ಹೀಗಾಗಿ, ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುತ್ತಿರುವುದಾಗಿ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಕಾಂಗ್ರೆಸ್ ಪಕ್ಷ ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತು ಸಂವಿಧಾನದ ಬಗ್ಗೆ ಅಪಾರ ಗೌರವ ಹೊಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗ್ಯಾರಂಟಿ ಯೋಜನೆಗಳ ಮೂಲಕ ಜನತೆಗೆ ಶಕ್ತಿ ನೀಡುತ್ತಿದ್ದಾರೆ. ಈ ಭಾಗದ ಅಭ್ಯರ್ಥಿಗಳಾದ ಎಂ. ಲಕ್ಷ್ಮಣ ಮತ್ತು ಸುನಿಲ್ ಬೋಸ್ ಅವರಿಗೆ ಸಹಕಾರ ನೀಡುವಂತೆ ಸದಸ್ಯರಿಗೆ ಮನವಿ ಮಾಡುತ್ತೇವೆ ಎಂದರು.
undefined
ದಸಂಸ ಜಿಲ್ಲಾ ಸಂಘಟನಾ ಸಂಚಾಲಕರಾದ ಎಚ್.ಎಸ್. ಗೋಪಾಲಕೃಷ್ಣಸ್ವಾಮಿ, ಆರ್. ಮಹೇಶ್, ಪಿರಿಯಾಪಟ್ಟಣ ತಾಲೂಕು ಸಂಚಾಲಕ ಆರ್. ವೆಂಕಟೇಶ್ ಉತ್ತೇನಹಳ್ಳಿ ಇದ್ದರು.
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು
ನವದೆಹಲಿ(ಏ.17): ಕಾಂಗ್ರೆಸ್ ಪಕ್ಷದ ಘರ್ ಘರ್ ಗ್ಯಾರಂಟಿ ಕಾರ್ಡ್ ಅಭಿಯಾನವು ಲಂಚಭರಿತವಾಗಿದ್ದು, ಅದನ್ನು ನಿಲ್ಲಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.
ಇತ್ತೀಚೆಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಿಡುಗಡೆ ಮಾಡಿದ ಗ್ಯಾರಂಟಿ ಕಾರ್ಡ್‌ಗಳನ್ನು ಮನೆ ಮನೆಗೆ ವಿತರಣೆ ಮಾಡುತ್ತಿದ್ದು, ಚುನಾವಣಾ ಲಂಚ ನೀಡುವ ಮೂಲಕ ಮತದಾರರಿಗೆ ಲಂಚತನದ ಅಭ್ಯಾಸ ಮಾಡುತ್ತಿದ್ದಾರೆ. ನೀತಿ ಸಂಹಿತೆ ಜಾರಿಯಾಗಿದ್ದರೂ ಗ್ಯಾರಂಟಿ ಕಾರ್ಡ್ ಯೋಜನೆ ಮೂಲಕ ಜನರನ್ನು ಗೊಂದಲಕ್ಕೆ ದೂಡುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದೆ ಎಂದು ಬಿಜೆಪಿ ನಾಯಕರು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ದೂರಿನಲ್ಲಿ ಆರೋಪ ಮಾಡಿದ್ದಾರೆ.
Lok Sabha Election 2024: ದೇಶಾದ್ಯಂತ ‘ಮನೆ ಮನೆಗೆ ಕಾಂಗ್ರೆಸ್ ಗ್ಯಾರಂಟಿ’ ಕಾರ್ಡ್: ಅಭಿಯಾನ ಶುರು
ಅಲ್ಲದೆ ಗ್ಯಾರಂಟಿ ಕಾರ್ಡಿನಲ್ಲಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮೊದಲಾದವರ ಸಹಿ ಇದ್ದು, ಇದು ಪಕ್ಷದ ಗ್ಯಾರಂಟಿಗೆ ಖಾತರಿ ನೀಡುತ್ತದೆ. ಇಂಥ ಗ್ಯಾರಂಟಿ ಕಾರ್ಡ್ ಮುದ್ರಿಸಿ ಹಂಚುವ ಮೂಲಕ ಅದನ್ನು ನ್ಯಾಯಬದ್ಧ ಖಾತರಿ ಎನ್ನುವ ರೀತಿಯಲ್ಲಿ ಬಿಂಬಿಸಲಾಗುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.