ಮೈಸೂರು ಜಿಲ್ಲೆಯಲ್ಲಿ ಬಡ ಕುಟುಂಬಕ್ಕೆ ಗ್ರಾಮದಿಂದ ಬಹಿಷ್ಕಾರ; ಅಂಗವಿಕಲ ಮಗನ ಅಂತ್ಯಕ್ರಿಯೆಗೂ ಅವಕಾಶವಿಲ್ಲ!

By Sathish Kumar KH  |  First Published Apr 21, 2024, 12:55 PM IST

ಮೈಸೂರು ಜಿಲ್ಲೆಯ ನಂಜನಗೂಡು ಬಳಿಯ ಗ್ರಾಮವೊಂದರಲ್ಲಿ ಬಡ ಕುಟುಂಬವನ್ನು ಬಹಿಷ್ಕಾರ ಮಾಡಲಾಗಿದೆ. ಮೂಲ ಸೌಕರ್ಯಗಳಿಲ್ಲದೆ ಮೃತಪಟ್ಟ 15 ವರ್ಷದ ಮಗನ ಅಂತ್ಯಕ್ರಿಯೆಯೂ ಅವಕಾಶ ಕೊಡದ ಅಮಾನವೀಯ ಘಟನೆ ನಡೆದಿದೆ.


ಮೈಸೂರು (ಏ.21): ಬಹಿಷ್ಕಾರಕ್ಕೆ ಒಳಗಾದ ಕುಟುಂಬದಲ್ಲಿ ಸಾವನ್ನಪ್ಪಿದ ಅಂಗವಿಕಲ ಯುವಕನ ಅಂತ್ಯಸಂಸ್ಕಾರಕ್ಕೆ ಪೋಷಕರು ಪರದಾಡಿದ ಅಮಾನವೀಯ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕು  ತರಗನಹಳ್ಳಿ ಗ್ರಾಮದಲ್ಲಿ ನಡೆದಿದೆ.

ನೊಂದ ತಂದೆ ಮಗನ ಮೃತದೇಹವನ್ನು ಮೈಸೂರು ಜಿಲ್ಲಾಧಿಕಾರಿ ಕಚೇರಿಗೆ ತಂದು ಪ್ರತಿಭಟಿಸಲು ಮುಂದಾಗಿದ್ದರು. ಯುವಕನ ಅಂತ್ಯಸಂಸ್ಕಾರಕ್ಕೆ ಗ್ರಾಮದಲ್ಲಿ ಅವಕಾಶ ನೀಡದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸಿ ಮೃತದೇಹಕ್ಕೆ ಮುಕ್ತಿ ದೊರಕಿಸಿದ್ದಾರೆ. ಜಿಲ್ಲಾಧಿಕಾರಿಗಳ ಮೌಖಿಕ ಆದೇಶಕ್ಕೆ ತಹಸೀಲ್ದಾರ್ ಶಿವಕುಮಾರ್ ಕಾಸ್ನೋರು ಹಾಗೂ ರೆವೆನ್ಯೂ  ಪ್ರಕಾಶ್ ಗ್ರಾಮಕ್ಕೆ ಭೇಟಿ ನೀಡಿ ಮುಖಂಡರ ಮನ ಒಲಿಸಿ ನಂತರ ಅಂತ್ಯಸಂಸ್ಕಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. 
ಹುಲ್ಲಹಳ್ಳಿ ಸಮೀಪದ ತರಗನಹಳ್ಳಿಯ ನಿವಾಸಿ ಕುಳ್ಳನಾಯಕನ ಕುಟುಂಬದ ಮೇಲೆ ನಾಲ್ಕು ವರ್ಷಗಳ ಹಿಂದೆ ಗ್ರಾಮದ ಮುಖಂಡರು ಬಹಿಷ್ಕಾರ ಹೇರಿದ್ದರು.

ಪ್ರತಿಷ್ಠಿತ ಕಂಪೆನಿಗಳಾದ ಟಿಸಿಎಸ್‌, ಇನ್ಫಿ, ವಿಪ್ರೋದಿಂದ 64000 ಉದ್ಯೋಗಿಗಳ ಕಡಿತ!

Latest Videos

undefined

ಬಹಿಷ್ಕಾರವನ್ನ ತೆರುವುಗೊಳಿಸಲು ಕುಳ್ಳನಾಯಕ ಹುಲ್ಲಹಳ್ಳಿಯ ಪೊಲೀಸ್ ಠಾಣೆ ಸೇರಿದಂತೆ ಸರ್ಕಾರಿ ಕಚೇರಿಗೆ ಸಾಕಷ್ಟು ಅಲೆದಾಡಿದ್ದನು. ತಾಲೂಕು ಆಡಳಿತ ಸೂಕ್ತವಾಗಿ ಸ್ಪಂದಿಸಿರಲಿಲ್ಲ. ನಿನ್ನೆ ಕುಳ್ಳನಾಯಕನ ಮಗ 15 ವರ್ಷದ ಮಾದೇಶ ಮೃತಪಟ್ಟಿದ್ದಾನೆ. ಅಂತ್ಯಸಂಸ್ಕಾರ ಮಾಡಲು ಗ್ರಾಮದಲ್ಲಿ ಅವಕಾಶ ನೀಡಿಲ್ಲ ಹಾಗೂ ಯಾರೂ ಸಹ ಮುಂದೆ ಬಂದಿಲ್ಲ.

ಇದರಿಂದ ನೊಂದ ಕುಳ್ಳನಾಯಕ ಮಗನ ಮೃತದೇಹವನ್ನ ಜಿಲ್ಲಾಧಿಕಾರಿಗಳ ಕಚೇರಿಗೆ ಕೊಂಡೊಯ್ಯಲು ಮುಂದಾಗಿದ್ದಾನೆ. ಈ ಮಾಹಿತಿ ಅರಿತ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಕುಳ್ಳನಾಯಕನ ಪರಿಸ್ಥಿತಿ ಅರಿತು ಕೂಡಲೇ ತಹಸೀಲ್ದಾರ್‌ಗೆ ಸೂಚನೆ ನೀಡಿ ಅಂತ್ಯಕ್ರಿಯೆಗೆ ವ್ಯವಸ್ಥೆ ಮಾಡುವಂತೆ ತಿಳಿಸಿದ್ದಾರೆ.

click me!