ಮೈಸೂರು : ಅನಧಿಕೃತವಾಗಿ ದಾಸ್ತಾನು ಮಾಡಿದ್ದ ಪಟಾಕಿ ವಶ

By Kannadaprabha NewsFirst Published Oct 15, 2023, 9:41 AM IST
Highlights

ಅನಧಿಕೃತವಾಗಿ ಪಟಾಕಿ ದಾಸ್ತಾನು ಮಾಡಲಾಗಿದ್ದ ಮನೆಯೊಂದರ ಮೇಲೆ ದಾಳಿ ಮಾಡಿದ ಪಟ್ಟಣದ ಪೊಲೀಸರು ಲಕ್ಷಾಂತರ ರು. ಬೆಲೆ ಬಾಳುವ ಪಟಾಕಿ ವಶಕ್ಕೆ ಪಡೆದಿದ್ದಾರೆ.

 ಕೆ.ಆರ್. ನಗರ :  ಅನಧಿಕೃತವಾಗಿ ಪಟಾಕಿ ದಾಸ್ತಾನು ಮಾಡಲಾಗಿದ್ದ ಮನೆಯೊಂದರ ಮೇಲೆ ದಾಳಿ ಮಾಡಿದ ಪಟ್ಟಣದ ಪೊಲೀಸರು ಲಕ್ಷಾಂತರ ರು. ಬೆಲೆ ಬಾಳುವ ಪಟಾಕಿ ವಶಕ್ಕೆ ಪಡೆದಿದ್ದಾರೆ.

ತಮಗೆ ದೊರೆತ ಖಚಿತ ಮಾಹಿತಿ ಆಧರಿಸಿ ಜನ ವಸತಿ ಪ್ರದೇಶದಲ್ಲಿರುವ ಲಕ್ಷಾಂತರ ರೂಪಾಯಿ ಬೆಲೆಬಾಳುವ 20ಕ್ಕೂ ಹೆಚ್ಚು ಪಟಾಕಿ ಬಾಕ್ಸ್ ಗಳನ್ನು ವಶಕ್ಕೆ ಪಡೆದು ತಾಲೂಕು ಆಡಳಿತದ ವತಿಯಿಂದ ತೆರೆಯಲಾಗಿರುವ ಗೋಡೌನ್ ಗೆ ಸಾಗಿಸಿದ್ದಾರೆ.

ಅನಧಿಕೃತವಾಗಿ ಪಟಾಕಿ ದಾಸ್ತಾನು ಮಾಡಿದ್ದ ಲೋಕೇಶ್ ಮತ್ತು ರವಿನಂದನ್ ಎಂಬುವರ ವಿರುದ್ದ ದೂರು ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ಧಾರೆ.

ಸಿಪಿಐ ಪಿ.ಪಿ. ಸಂತೋಷ್, ಎಸ್ಐ ಧನರಾಜ್ ಮತ್ತು ಸಿಬ್ಬಂದಿ ಹಾಗೂ ಅಗ್ನಿಶಾಮಕ ಠಾಣಾಧಿಕಾರಿ, ಕಂದಾಯ ಇಲಾಖೆ ಅಧಿಕಾರಿಗಳು, ಪುರಸಭೆ ಅಧಿಕಾರಿಗಳು ಇದ್ದರು.

ಪಟಾಕಿ ಬ್ಯಾನ್

ಬೆಂಗಳೂರು (ಅ.10): ರಾಜ್ಯದಲ್ಲಿ ಇನ್ನುಮುಂದೆ ಮದುವೆ, ಗಣೇಶ ಉತ್ಸವ ಹಾಗೂ ರಾಜಕೀಯ ಸಂಬಂಧಿತ ಕಾರ್ಯಕ್ರಮಗಳಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅತ್ತಿಬೆಲೆ ಪಟಾಕಿ ಮಳಿಗೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಭೆ ಮಾಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸುಪ್ರೀಂಕೋರ್ಟ್ ಆದೇಶದ ಪ್ರಕಾರ, ಹಸಿರು ಪಟಾಕಿ ನಿಯಾಮವಳಿಗಳಿಗೆ ವಿರುದ್ಧವಾಗಿ ಅಂಗಡಿಗಳು ಇದ್ದರೆ ಕ್ರಮ ಕೈಗೊಳ್ಳಬೇಕು. ಇನ್ನುಮುಂದೆ ಅನಧಿಕೃತ ಮಳಿಗೆಗಳು ಕಂಡುಬಂದಲ್ಲಿ ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳಲು ಸೂಚಿಸಿದ್ದೇವೆ. ಇನ್ಮುಂದೆ ಪಟಾಕಿ ಅಂಗಡಿಗಳಿಗೆ ಲೆಸೆನ್ಸ್ ಗಳಿಗೆ ಸುಪ್ರೀಂಕೋರ್ಟ್ ಆದೇಶದ ಪ್ರಕಾರವೇ ಲೆಸೆನ್ಸ್ ಕಡ್ಡಾಯ ನೀಡುವಂತೆ ಸೂಚಿಸಲಾಗಿದೆ ಎಂದರು.

ಬೆಂಗಳೂರು ಹಿಂದೂಗಳಿಗೆ ಶಾಕಿಂಗ್‌ ನ್ಯೂಸ್‌: ಗಣೇಶ ಮೆರವಣಿಗೆ ನಿಷೇಧಿಸಿದ ಪೊಲೀಸ್‌ ಇಲಾಖೆ

ಇನ್ನುಮುಂದೆ ರಾಜಕೀಯ ಕಾರ್ಯಕ್ರಮ , ಮದುವೆ ಕಾರ್ಯಕ್ರಮ, ಗಣೇಶ ಉತ್ಸವ ಸೇರಿದಂತೆ ವಿವಿಧ ಸಂಭ್ರಮಾಚರಣೆಗಳ ವೇಳೆ ಪಟಾಕಿ ಸಿಡಿಸುವುದನ್ನು ಬ್ಯಾನ್‌ ಮಾಡಲಾಗುತ್ತಿದೆ. ದೀಪಾವಳಿ ವೇಳೆ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಲಾಗುವುದು. ಪಟಾಕಿ ಮಾರಾಟ ಹಾಗೂ ಸಂಗ್ರಹಣೆ ಪರವಾನಗಿ ಪರಿಷ್ಕರಿಣೆ ಮಾಡಲು ಸೂಚನೆ ನೀಡಲಾಗಿದೆ. ಪ್ರಸ್ತುತ 5 ವರ್ಷಗಳವರೆಗೆ ಇದ್ದ ಪರವಾನಗಿ ಅವಧಿಯನ್ನು1 ವರ್ಷಕ್ಕೆ ತಗ್ಗಿಸಿ ಪರಿಷ್ಕೃರಣೆ ಮಾಡಲು ತೀರ್ಮಾನಿಸಲಾಗಿದೆ. ಪ್ರತಿ ವರ್ಷವೂ ಪರಿಷ್ಕರಣೆ ಮಾಡಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಎಕ್ಸ್‌ಪ್ಲೋಸಿವ್‌ ಆಕ್ಟ್‌ ಲೈಸೆನ್ಸ್‌ ನೀಡುವ ಡಿಸಿ ಪರಿಶೀಲಿಸಬೇಕು: ಎಕ್ಸ್‌ಪ್ಲೋಸಿವ್‌ ಆಕ್ಟ್‌ ನಲ್ಲಿ ಲೈಸೆನ್ಸ್‌ ಕೊಡುವಾಗ ನೀವು ಎಚ್ಚರಿಕೆ ವಹಿಸಬೇಕು. 14 ಜನರ ಜೀವಕ್ಕೆ ಯಾರು ಹೊಣೆಗಾರರು. ಕಾಯ್ದೆ ಓದಿದ್ದೀರಾ? ಅವರು ಅದರಲ್ಲಿರುವ ಎಲ್ಲ ಮಾನದಂಡಗಳನ್ನು ಪೂರೈಸಿದ್ದಾರೆಯೇ ಎಂದು ನೋಡಬೇಕು. ತಳಹಂತದ ಅಧಿಕಾರಿಗಳು ಸಲ್ಲಿಸಿದ ವರದಿ ಸರಿಯಿದೆಯೇ ಎಂದು ಜಿಲ್ಲಾಧಿಕಾರಿ ಪರಿಶೀಲಿಸುವಂತೆ ಸೂಚಿಸಲಾಗಿದೆ. ಅಲ್ಲಿರುವ ಎಲ್ಲ ಮಳಿಗೆಗಳ ಸುರಕ್ಷತೆಯನ್ನೂ ತಪಾಸಣೆ ಮಾಡಬೇಕು. ಇನ್ನು ಮುಂದೆ ಲೈಸನ್ಸ್‌ ನೀಡುವಾಗ ಜಿಲ್ಲಾಧಿಕಾರಿಗಳು, ಪೊಲೀಸ್‌ ಅಧೀಕ್ಷಕರು ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.

click me!