ಮೈಸೂರು : ಅರಣ್ಯ ಭವನದ ಆವರಣದಲ್ಲಿ ಆನೆಗಳ ವಿಶ್ರಾಂತಿ

Published : Sep 03, 2023, 08:05 AM IST
ಮೈಸೂರು :  ಅರಣ್ಯ ಭವನದ ಆವರಣದಲ್ಲಿ ಆನೆಗಳ ವಿಶ್ರಾಂತಿ

ಸಾರಾಂಶ

ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಕಾಡಿನಿಂದ ನಾಡಿಗೆ ಆಗಮಿಸಿರುವ ಗಜಪಡೆಯು ಮೈಸೂರಿನ ಅಶೋಕಪುರಂನಲ್ಲಿರುವ ಅರಣ್ಯ ಭವನದ ಆವರಣದಲ್ಲಿ ವಿಶ್ರಾಂತಿ ಪಡೆಯುತ್ತಿವೆ.

  ಮೈಸೂರು :  ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಕಾಡಿನಿಂದ ನಾಡಿಗೆ ಆಗಮಿಸಿರುವ ಗಜಪಡೆಯು ಮೈಸೂರಿನ ಅಶೋಕಪುರಂನಲ್ಲಿರುವ ಅರಣ್ಯ ಭವನದ ಆವರಣದಲ್ಲಿ ವಿಶ್ರಾಂತಿ ಪಡೆಯುತ್ತಿವೆ.

ಅಂಬಾರಿ ಆನೆ ಅಭಿಮನ್ಯು ನೇತೃತ್ವದಲ್ಲಿ ಅರ್ಜುನ, ಭೀಮ, ಗೋಪಿ, ಧನಂಜಯ, ವರಲಕ್ಷೀ್ಮ, ವಿಜಯ, ಮಹೇಂದ್ರ ಮತ್ತು ಕಂಜನ್‌ ಸೇರಿದಂತೆ 9 ಆನೆಗಳು ದಸರೆಯಲ್ಲಿ ಭಾಗವಹಿಸಲು ಮೊದಲ ತಂಡದಲ್ಲಿ ಆಗಮಿಸಿದ್ದು, ಇವರೊಂದಿಗೆ ಮಾವುತರು ಮತ್ತು ಕಾವಾಡಿಗಳು ಸಹ ಆಗಮಿಸಿದ್ದು, ಆನೆಗಳ ಆರೈಕೆಯಲ್ಲಿ ತೊಡಗಿದ್ದಾರೆ.

5 ರಂದು ಅರಮನೆ ಪ್ರವೇಶ: ಮೈಸೂರು ಅರಮನೆ ಮಂಡಳಿ ವತಿಯಿಂದ ದಸರಾ ಗಜಪಡೆಗೆ ಸುಸ್ವಾಗತ ಕಾರ್ಯಕ್ರಮವನ್ನು ಸೆ.5ರ ಮಧ್ಯಾಹ್ನ 12.01 ರಿಂದ 12.51ರ ಅಭಿಜಿನ್‌ ಲಗ್ನದಲ್ಲಿ ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ಹಮ್ಮಿಕೊಳ್ಳಾಲಾಗಿದೆ. ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತವಾರಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಅವರು ಆನೆಗಳನ್ನು ಸ್ವಾಗತಿಸಲಿದ್ದು, ಶಾಸಕ ಟಿ.ಎಸ್‌. ಶ್ರೀವತ್ಸ ಅಧ್ಯಕ್ಷತೆ ವಹಿಸುವರು. ಮೇಯರ್‌ ಶಿವಕುಮಾರ್‌, ಸಂಸದ ಪ್ರತಾಪ್‌ ಸಿಂಹ ಸೇರಿದಂತೆ ಶಾಸಕರು, ವಿಧಾನಪರಿಷತ್ತು ಸದಸ್ಯರು, ಪಾಲಿಕೆ ಸದಸ್ಯರು ಭಾಗವಹಿಸಲಿದ್ದಾರೆ.

PREV
Read more Articles on
click me!

Recommended Stories

ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ಕಾಂಗ್ರೆಸ್ ಮುಖಂಡ ಗಣೇಶ್ ಗೌಡ ಕೊಲೆ ರಹಸ್ಯ ರಿವೀಲ್: ಪೊಲೀಸರ ಬಲೆಗೆ ಬಿದ್ದ ಮೂವರು!