300 ಕಾರ್ಯಕರ್ತರೊಂದಿಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿರುವ ಮುಖಂಡ

Kannadaprabha News   | Asianet News
Published : Aug 18, 2021, 11:29 AM ISTUpdated : Aug 18, 2021, 11:36 AM IST
300 ಕಾರ್ಯಕರ್ತರೊಂದಿಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿರುವ ಮುಖಂಡ

ಸಾರಾಂಶ

ಬಿಜೆಪಿ ಆಡಳಿತದಿಂದ ಬೇಸತ್ತು ಆ.19ರಂದು ಕಾಂಗ್ರೆಸ್ ಸೇರುತ್ತಿದ್ದೇನೆ 300 ಬೆಂಗಲಿಗರು ಕಾರ್ಯಕರ್ತರೊಂದಿಗೆ ಕಾಂಗ್ರೆಸ್ ಸೇರುತ್ತಿರುವ ಮುಖಂಡ

ಮೈಸೂರು (ಆ.18): ಬಿಜೆಪಿ ಆಡಳಿತದಿಂದ ಬೇಸತ್ತು ಆ.19ರಂದು ಮೈಸೂರು ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿರುವುದಾಗಿ ತಾಪಂ  ಮಾಜಿ ಉಪಾಧ್ಯಕ್ಷ ಮಲ್ಲೇಶ್ ತಿಳಿಸಿದರು. 

ಬಿಜೆಪಿ ಆಡಳಿತದ ವೇಳೆ ಅಗತ್ಯ ವಸ್ತುಗಳ ಬೆಲೆ ಏರಿದೆ. ಇದರಿಂದ ಸಾಮಾನ್ಯ ಜನರು  ಜೀವನ ನಡೆಸುವುದು ಕಷ್ಟಕರವಾಗಿದೆ. ನಿರುದ್ಯೋಗ ಪರಿಸ್ಥಿತಿ ಉಲ್ಬಣಿಸಿದೆ.

'ಬಿಜೆಪಿ ಕಲ್ಯಾಣ ಕರ್ನಾಟಕದ ವಿರೋಧಿ, 371 ಅಡಿಯಲ್ಲಿ ನೇಮಕಾತಿಯೂ ಸಹ ಮಾಡ್ತಿಲ್ಲ'

ಹೀಗಾಗಿ ಸಣ್ಣಪುಟ್ಟ ಚುನಾವಣೆಗಳಿಗೂ ತಾವು ಮತ ಕೇಳಲು ಹೋದಲ್ಲಿ ಜನರು ಛೀಮಾರಿ ಹಾಕುತ್ತಿದ್ದಾರೆ.  ಹೀಗಾಗಿ ತಾವು ಬೇಸತ್ತು ಬಿಜೆಪಿ ತೊರೆಯುತ್ತಿರುವುದಾಗಿ ಅವರು ಹೇಳಿದರು. 

ಬಿಜೆಪಿ ಜಾರಿ ಜಾತಿಗಳ ನಡುವೆ ಸಂಘರ್ಷಕ್ಕೆ  ಕಾರಣವಾಗಿದೆ. ಜಿಪಂ ಮಾಜಿ ಉಪಾಧ್ಯಕ್ಷೆ ಎಚ್.ಆರ್ ಭಾಗ್ಯಲಕ್ಷ್ಮೀ ಸೇರಿದಂತೆ 300ಕ್ಕೂ ಅಧಿಕ ಬೆಂಗಲಿಗರು, ಕಾರ್ಯಕರ್ತರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿದ್ದಾರೆ ಎಂದು ಅವರು ತಿಳಿಸಿದರು. ಮುಖಂಡರಾದ ದಕ್ಷಿಣಾಮೂರ್ತಿ, ಪ್ರಭುಸ್ವಾಮಿ ಇದ್ದರು.

PREV
click me!

Recommended Stories

ಬೆಂಗಳೂರು : ಹೊಸ ವರ್ಷಾಚರಣೆಗೆ ಹೊಸ ಮಾರ್ಗಸೂಚಿಗೆ ಸಿದ್ಧತೆ
ನಗರ ವಿವಿ ಎಡವಟ್ಟು: 400 ಎಂಕಾಂ ಸ್ಟೂಡೆಂಟ್ಸ್ ಫೇಲ್‌!