Mysuru : 22 ರಿಂದ ಸಿಎಂ ಮನೆ ಮುಂದೆ ನಿರಂತರ ಧರಣಿ

By Kannadaprabha NewsFirst Published Nov 19, 2022, 5:57 AM IST
Highlights

ಕಬ್ಬು ಎಫ್‌ಆರ್‌ಪಿ ದರ ಏರಿಕೆ, ಮತ್ತಿತರ ಸಮಸ್ಯೆಗಳನ್ನು ಪರಿಹರಿಸಲು ಆಗ್ರಹಿಸಿ ಕಬ್ಬು ಬೆಳೆಗಾರ ರೈತರಿಂದ ನ.22 ರಿಂದ ಬೆಂಗಳೂರಿನ ಮುಖ್ಯಮಂತ್ರಿ ಮನೆ ಮುಂದೆ ನಿರಂತರ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್‌ ತಿಳಿಸಿದರು.

 ಮೈಸೂರು (ನ.19): ಕಬ್ಬು ಎಫ್‌ಆರ್‌ಪಿ ದರ ಏರಿಕೆ, ಮತ್ತಿತರ ಸಮಸ್ಯೆಗಳನ್ನು ಪರಿಹರಿಸಲು ಆಗ್ರಹಿಸಿ ಕಬ್ಬು ಬೆಳೆಗಾರ ರೈತರಿಂದ ನ.22 ರಿಂದ ಬೆಂಗಳೂರಿನ ಮುಖ್ಯಮಂತ್ರಿ ಮನೆ ಮುಂದೆ ನಿರಂತರ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್‌ ತಿಳಿಸಿದರು.

ಕಬ್ಬಿನ ಎಫ್‌ಆರ್‌ಪಿ (FRP)  ಹೆಚ್ಚುವರಿ ದರ ನಿಗದಿಗೆ ಒತ್ತಾಯಿಸಿ,ದ (Karnataka Govt)  ವಿಳಂಬ ನೀತಿ ಖಂಡಿಸಿ ಕಬ್ಬು ಬೆಳೆಗಾರಮುಖ್ಯಮಂತ್ರಿ ಮನೆ ಮುಂದೆ ನ್ಯಾಯ ಸಿಗುವ ತನಕ ನಿರಂತರ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ವಿಳಂಬ ನೀತಿ ಸಲ್ಲ:

ಕಬ್ಬು ಹೆಚ್ಚುವರಿ ದರ ನಿಗದಿ ಬಗ್ಗೆ ರಾಜ್ಯ ಸರ್ಕಾರ ನಾಲ್ಕಾರು ಸಭೆಗಳನ್ನು ನಡೆಸಿ, ತಜ್ಞರ ಸಮಿತಿ ರಚಿಸಿ ಐದು ದಿನದಲ್ಲಿ ವರದಿ ಪಡೆದು, ನ.20ರ ಒಳಗಾಗಿ ರೈತರಿಗೆ ಸಿಹಿ ಸುದ್ದಿ ನೀಡುವುದಾಗಿ ಹೇಳಿ ಸಕ್ಕರೆ ಸಚಿವರು ಈತನಕ ಯಾವುದೇ ನಿರ್ಧಾರ ಪ್ರಕಟಿಸಿದೆ ಇರುವುದು ಖಂಡನಿಯ. ಮುಖ್ಯಮಂತ್ರಿಗಳನ್ನು ಎರಡು ಬಾರಿ ಭೇಟಿ ಮಾಡಿದಾಗಲೂ ರೈತರಿಗೆ ನ್ಯಾಯ ನೀಡುವುದಾಗಿ ಭರವಸೆ ನೀಡಿ, ವಿಳಂಬ ನೀತಿ ಅನುಸರಿಸುತ್ತಿರುವುದು ಸರಿಯಲ್ಲ. ಹೀಗಾಗಿ, ತುರ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದರು.

ಕಬ್ಬು ಬೆಳೆಗಾರ ರೈತರು ನಾಲ್ಕು ತಿಂಗಳಿಂದಲೂ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಸಬೂಬು ಹೇಳುತ್ತಾ ತ್ಯಾಪೆ ಹಾಕುತ್ತಿರುವುದು ಸರಿಯಲ್ಲ. ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ರಾಜ್ಯದ ಎಲ್ಲಾ ರಸ್ತೆಗಳನ್ನು ಬಂದ್‌ ಮಾಡಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.

ಎಫ್‌ಆರ್‌ಪಿ ಬೆಲೆಯನ್ನ ಕನಿಷ್ಠ ಇಳುವರಿಗೆ ಟನ್‌ಗೆ . 3500 ನಿಗದಿ ಮಾಡಬೇಕು. ಕಬ್ಬು ಕಟಾವು16-18 ತಿಂಗಳು ವಿಳಂಬವಾಗುತ್ತಿದೆ ಇದರಿಂದ ರೈತರಿಗೆ ತುಂಬಾ ನಷ್ಟವಾಗುತ್ತಿದೆ, ಈ ರೀತಿ ವಿಳಂಬವಾಗಿ ಕಟಾವು ಮಾಡಿದ ಕಬ್ಬಿಗೆ ವಿಳಂಬದ ಅವಧಿಗೆ ಶೇ.15 ಬಡ್ಡಿ ಸೇರಿಸಿ ಹೆಚ್ಚುವರಿ ಹಣ ಕಾರ್ಖಾನೆಗಳು ನೀಡುವಂತಾಗಬೇಕು. ಕಬ್ಬು ಕಟಾವು ಸಾಗಾಣಿಕೆ ವೆಚ್ಚವನ್ನು ಸರ್ಕಾರ ನಿಗದಿ ಮಾಡಿರುವ ಮಾರ್ಗಸೂಚಿಯಂತೆ ಕಡಿತಗೊಳಿಸಬೇಕು ಎಂದು ಅವರು ಆಗ್ರಹಿಸಿದರು.

ಅತಿವೃಷ್ಟಿಮಳೆಹಾನಿ ಕಾರಣ ಭತ್ತದ ಬೆಳೆ ಸ್ವಲ್ಪಮಟ್ಟಿಗೆ ಇಳುವರಿ ಕಡಿಮೆಯಾಗುತ್ತಿದೆ. ಬೆಲೆ ಕಡಿಮೆಯಾಗುವ ಕಾರಣ ಕೂಡಲೇ ಭತ್ತ ಕಟಾವು ಆರಂಭಕೆ ಮುನ್ನ ಖರೀದಿ ಕೇಂದ್ರಗಳನ್ನು ತಕ್ಷಣ ತೆರೆಯಬೇಕು. ವಿದ್ಯುತ್‌ ಖಾಸಗಿಕರಣ ಕೈಬಿಡಬೇಕು ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್‌ ಅಳವಡಿಸುವುದು ಬೇಡ. ಬ್ಯಾಂಕುಗಳು ರೈತರಿಗೆ ಸಾಲ ನೀಡುವಾಗ ಸಿಬಿಲ್‌ ಸ್ಕೋರ್‌ ಪದ್ಧತಿಯನ್ನು ಪರಿಗಣಿಸಿ ಸಾಲ ನೀಡುವ ಪದ್ಧತಿ ಕೈಬಿಡಬೇಕು. ಆರ್‌ಬಿಐ ಮುಖ್ಯಸ್ಥರು ಸಭೆ ಕರೆಯುವ ಭರವಸೆ ನೀಡಿದಂತೆ ತಕ್ಷಣವೇ ಸಭೆ ಕರೆದು ಸಮಸ್ಯೆ ಬಗೆಹರಿಸಬೇಕು ಎಂದು ಅವರು ಒತ್ತಾಯಿಸಿದರು.

ಬಗರ್‌ ಹುಕುಂ ಸಾಗುವಳಿ ಹತ್ತಾರು ವರ್ಷಗಳಿಂದ ಕೃಷಿ ಮಾಡುತ್ತಿರುವ ರೈತರಿಗೆ ಸಾಗುವಳಿ ಪತ್ರ, ಅರಣ್ಯ ಭೂಮಿಯನ್ನು ವ್ಯವಸಾಯ ಮಾಡುತ್ತಿರುವ ರೈತರಿಗೆ ಸಾಗುವಳಿ ಪಟ್ಟಾವನ್ನು ನೀಡಬೇಕು. ಕಾಡಂಚಿನಲ್ಲಿ ಕಾಡು ಪ್ರಾಣಿಗಳಿಂದ ಆಗುವ ಬೆಳೆ ಹಾನಿ ಪರಿಹಾರ ವೈಜ್ಞಾನಿಕವಾಗಿ ನಷ್ಟವನ್ನು ಭರಿಸಬೇಕು. ಈ ಎಲ್ಲಾ ಒತ್ತಾಯಗಳ ಬಗ್ಗೆ ರಾಜ್ಯ ಸರ್ಕಾರ ಕ್ರಮ ಕೈಕೈಗೊಳ್ಳುವವರೆಗೆ ನಿರಂತರ ಆಹೋರಾತ್ರಿ ಹೋರಾಟ ನಡೆಸಲಾಗುವುದು ಎಂದು ಅವರು ತಿಳಿಸಿದರು.

ಸಂಘದ ಜಿಲ್ಲಾಧ್ಯಕ್ಷ ಪಿ. ಸೋಮಶೇಖರ್‌, ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್‌, ವೆಂಕಟೇಶ್‌, ಮಹದೇವಸ್ವಾಮಿ ಇದ್ದರು.

ಕಬ್ಬು ಎಫ್‌ಆರ್‌ಪಿ ದರ ಏರಿಕೆ, ಮತ್ತಿತರ ಸಮಸ್ಯೆಗಳನ್ನು ಪರಿಹರಿಸಲು ಆಗ್ರಹ

ಕಬ್ಬು ಬೆಳೆಗಾರ ರೈತರಿಂದ ನ.22 ರಿಂದ ಬೆಂಗಳೂರಿನ ಮುಖ್ಯಮಂತ್ರಿ ಮನೆ ಮುಂದೆ ನಿರಂತರ ಧರಣಿ

click me!