ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಇಷ್ಟವಿಲ್ಲ-2 ವಾರ ಕೊಡಿ : ರೋಹಿಣಿ ಸಿಂಧೂರಿ

Kannadaprabha News   | Asianet News
Published : Oct 06, 2020, 08:16 AM IST
ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಇಷ್ಟವಿಲ್ಲ-2 ವಾರ ಕೊಡಿ : ರೋಹಿಣಿ ಸಿಂಧೂರಿ

ಸಾರಾಂಶ

ರಾಜ್ಯ ಸರ್ಕಾರಕ್ಕೆ ನನಗೆ ಕೆಟ್ಟ ಹೆಸರು ತರಲು ಇಷ್ಟವಿಲ್ಲ. ನನಗೆ ಎರಡು ವಾರಗಳ ಕಾಲ ಸಮಯಾವಕಾಶ ನೀಡಿ ಎಂದು ರೋಹಿಣಿ ಸಿಂಧೂರಿ ಹೇಳಿದ್ದಾರೆ

ಮೈಸೂರು (ಅ.06): ಮೈಸೂರಿನಲ್ಲಿ ಕೊರೋನಾ ಹೆಚ್ಚಳ ಹಿನ್ನೆಲೆಯಲ್ಲಿ ನಮಗೆ ಎರಡು ವಾರ ಸಮಯ ಕೊಡಿ, ಕೊರೋನಾವನ್ನು ನಿಯಂತ್ರಣಕ್ಕೆ ತರುವುದಾಗಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕಾಲಾವಕಾಶ ಕೋರಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು. 

ಮೈಸೂರು ಜಿಪಂ ಸಭಾಂಗಣದಲ್ಲಿ ಸೋಮವಾರ ಕೊರೋನಾ ನಿಯಂತ್ರಣ ಸಭೆ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳು ಬಹಳ ವಿಶ್ವಾಸದಿಂದ ಕಾಲಾವಕಾಶ ಕೇಳಿದ್ದಾರೆ, ನಾವು ಕೊಟ್ಟಿದ್ದೇವೆ ಎಂದರು.

ಬಿಎಸ್‌ವೈ ಸಂಪುಟದ ಮತ್ತೋರ್ವ ಸಚಿವರೊಬ್ಬರಿಗೆ ಕೊರೋನಾ..!

ದಸರಾ ವಿಚಾರದಲ್ಲಿ ಇನ್ನು ಹಲವು ಮಾರ್ಪಾಡುಗಳನ್ನು ಮಾಡಲು ಚರ್ಚೆ ನಡೆದಿದೆ. ದಸರಾವನ್ನು ತೀರ ಸರಳವಾಗಿ ಮಾಡುವ ಅವಶ್ಯಕತೆ ಇದೆ. ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಸಭೆ ನಡೆಸಿ ತೀರ್ಮಾನ ಮಾಡುತ್ತೇವೆ. ದಸರಾದಿಂದ ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಇಷ್ಟಇಲ್ಲ ಎಂದರು.

-ಇನ್ನು ಮುಂದೆ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಆಕ್ಸಿಜನ್‌ ಬೆಡ್‌ ಲಭ್ಯವಾಗಲಿದೆ ಎಂದು ತಿಳಿಸಿದರು.

PREV
click me!

Recommended Stories

BREAKING: ದಾವಣಗೆರೆ ಗಡಿ ಭಾಗದಲ್ಲಿ ಭಾರೀ ಸ್ಫೋಟದ ಸದ್ದು; ಭೂಮಿ ಕಂಪಿಸಿದ ಅನುಭವ, ಚಿಕ್ಕಮಲ್ಲನಹೊಳೆ ಗ್ರಾಮಸ್ಥರಲ್ಲಿ ಆತಂಕ
20 ವರ್ಷಗಳ ಹಿಂದೆ ವಿಚ್ಛೇದನಕ್ಕೆ ಅರ್ಜಿ ಹಾಕಿದ್ದ ವೃದ್ಧ ದಂಪತಿಯನ್ನ ಒಂದುಗೂಡಿಸಿದ ಲೋಕ ಅದಾಲತ್!