ನನ್ನ ಅರೆಸ್ಟ್ ಹಿಂದೆ ವ್ಯವಸ್ಥಿತ ಪಿತೂರಿ.. ಟೈಮ್ ಬಂದಾಗ ಎಲ್ಲವನ್ನೂ ಹೇಳ್ತೇನೆ. ರಾಜಕೀಯಕ್ಕೆ ಬರಲು ನನ್ನ ವಿರುದ್ಧ ಪಿತೂರಿ ಮಾಡುತ್ತಿರುವವರ ಬಗ್ಗೆ ಬಹಿರಂಗವಾಗಿಯೇ ಹೇಳುತ್ತೇನೆ.
ಹಾಸನ (ಡಿ.31): ನನ್ನ ಬಂಧನ ಬಗ್ಗೆ ಮುಂದಿನ ದಿನಗಳಲ್ಲಿ ಎಲ್ಲ ಹೇಳುತ್ತೇನೆ, ನನ್ನನ್ನು ಅನವಶ್ಯಕವಾಗಿ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹ ಪ್ರತಿಕ್ರಿಯೆ ನೀಡಿದ್ದಾರೆ.
ಹಾಸನ ಪೊಲೀಸ್ ಠಾಣೆಯಲ್ಲಿ ಇಂದು ಹೆಚ್ಚಿನ ವಿಚಾರಣೆಗೆಂದು ಅರಣ್ಯ ಇಲಾಖೆ ಅಧಿಕಾರಿಗಳು ಕರೆತರುತ್ತಿದ್ದ ವೇಳೆ ಮಾಧ್ಯಮ ಪ್ರತಿನಿಧಿಗಳ ಮುಂದೆ ಆಕ್ರೋಶಭರಿತರಾಗಿ ಮಾತನಾಡಿದ ಅವರು, ನನ್ನ ಅರೆಸ್ಟ್ ಹಿಂದೆ ವ್ಯವಸ್ಥಿತ ಪಿತೂರಿ.. ಟೈಮ್ ಬಂದಾಗ ಎಲ್ಲವನ್ನೂ ಹೇಳ್ತೇನೆ. ರಾಜಕೀಯಕ್ಕೆ ಬರಲು ನನ್ನ ವಿರುದ್ಧ ಪಿತೂರಿ ಮಾಡುತ್ತಿರುವವರ ಬಗ್ಗೆ ಬಹಿರಂಗವಾಗಿಯೇ ಹೇಳುತ್ತೇನೆ. ನಿಷ್ಠಾವಂತ ಅಧಿಕಾರಿ ಎಂದು ಹೇಳ್ತಾ ಇದ್ದೀರಿ, ಅವರ ನಿಷ್ಠೆ ಯಾರಿಗೆ ಅನ್ನೋದನ್ನು ಹೇಳ್ತೀನಿ ಎಂದು ಹೇಳಿದರು.
ಹಾಸನ ಮರ ಕಡಿತಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಬಂದ ವಿಕ್ರಂ ಸಿಂಹ!
ನ್ಯಾಯಾಲಯದಲ್ಲಿ ಸತ್ಯಕ್ಕೆ ಜಯ ಸಿಕ್ಕಿದೆ. ತುಂಬಾ ಖುಷಿಯಾಗಿದೆ. ನಾನು ಬರೀ ಶುಂಠಿ ಬೆಳೆ ಬೆಳೆಯಲು ಹೋಗಿದ್ದವನು. ಬೆಳೆ ಬೆಳೆಯಲು ಹೋದವನಿಗೆ ಈ ರೀತಿ ಆಪಾದನೆಗಳೆಲ್ಲವನ್ನು ಎದುರಿಸಬೇಕಾಗಿ ಬಂತು. ಇದೊಂದು ರೀತಿ ರಾಜಕೀಯ ಪಿತೂರಿಯಾಗಿದೆ. ನ್ಯಾಯಾಲಯದಲ್ಲಿ ಸತ್ಯಕ್ಕೆ ಜಯ ಸಿಕ್ಕಿದೆ. ಇನ್ನೇನು ಹೇಳುವುದಿಲ್ಲ. ನನ್ನನ್ನು ವ್ಯವಸ್ಥಿತವಾಗಿ ಮುಗಿಸೋಕೆ ಪ್ರಯತ್ನ ಮಾಡುತ್ತಿದ್ದಾರೆ. ಇದಕ್ಕೆ ಉತ್ತರ ಕೊಡುತ್ತೇನೆ. ಅಣ್ಣನನ್ನು ಟಾರ್ಗೆಟ್ ಮಾಡ್ತಿದ್ದಾರೆ ಎಂದು ಆರೋಪಿಸಿದರು.
ಜಾಮೀನಿನ ಮೇಲೆ ಹೊರಬಂದ ವಿಕ್ರಂ ಸಿಂಹ: ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಂದಗೋಡನಹಳ್ಳಿಯಲ್ಲಿ ಅರಣ್ಯ ಇಲಾಖೆಗೆ ಸೇರಿದ 126 ಮರಗಳನ್ನು ಕಡಿದ ಪ್ರಕರಣದಲ್ಲಿ ಬಂಧಿತವಾಗಿದ್ದ ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹ ಅವರಿಗೆ ಜಾಮೀನು ಲಭ್ಯವಾಗಿದ್ದು, ಅರಣ್ಯ ಇಲಾಖೆಯಿಂದ ಅವರನ್ನು ಬಿಡುಗಡೆ ಮಾಡಲಾಗಿದೆ. ಅರಣ್ಯ ಇಲಾಖೆ ತನಿಖಾ ತಂಡದಿಂದ ಬೇಲೂರಿನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರಕಾಶ್ ನಾಯ್ಕ್ ಎದುರು ಹಾಜರು ಪಡಿಸಿದ್ದರು. ವಿಕ್ರಂ ಸಿಂಹ ಪರವಾಗಿ ಹಾಜರಾಗಿ ಜಾಮೀನು ಅರ್ಜಿ ಹಾಕಿದ್ದ ವಕೀಲ ಚಂದ್ರೇಗೌಡ, ಧರ್ಮೇಗೌಡ ಅವರು ನ್ಯಾಯಾಲಯದಲ್ಲಿ ವಾದ ಮಮಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿದ್ದಾರೆ.
ಡಿ.ಕೆ.ಶಿವಕುಮಾರ್ ಚಿಕ್ಕವನಾದ್ರೂ ಸಂಘಟನೆಯಲ್ಲಿ ನನಗಿಂತಲೂ ಮುಂದಿದ್ದಾರೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು ಸಿಸಿಬಿ ಪೊಲೀಸರಿಂದ ಬಂಧನ: ಹಾಸನ ಭಾಗದಲ್ಲಿ 126 ಮರಗಳನ್ನ ಕಡಿದು ಅಕ್ರಮವಾಗಿ ಸಾಗಾಟ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಕ್ರಂ ಸಿಂಹ ವಿರುದ್ಧ ದೂರು ದಾಖಲಾಗಿತ್ತು. ಪ್ರಕರಣ ಸಂಬಂಧ ಹೇಳಿಕೆ ಪಡೆಯಲು ವಿಕ್ರಂ ಸಿಂಹರನ್ನು ಸಂಪರ್ಕಿಸಲು ಅರಣ್ಯಾಧಿಕಾರಿಗಳು ಯತ್ನಿಸಿದರೂ, ತನಿಖಾಧಿಕಾರಿಗಳಿಗೆ ಸಂಪರ್ಕಕ್ಕೆ ವಿಕ್ರಂ ಸಿಂಹ ಸಿಕ್ಕಿರಲಿಲ್ಲ. ಹೀಗಾಗಿ ಅರಣ್ಯಾಧಿಕಾರಿಗಳು ವಿಕ್ರಂ ಸಿಂಹ ಅವರನ್ನು ಪತ್ತೆ ಮಾಡಲು ಸಿಸಿಬಿ ಅಧಿಕಾರಿಗಳ ಸಹಕಾರ ಕೇಳಿದ್ದರು. ಅದರಂತೆ ಕಾರ್ಯಾಚರಣೆಗೆ ಇಳಿದಿದ್ದ ಸಿಸಿಬಿ, ಪೊಲೀಸ್ ಸಿಬ್ಬಂದಿ ಸಹಾಯ ಪಡೆದು ವಿಕ್ರಂ ಸಿಂಹ ಅವರನ್ನು ಬೆಂಗಳೂರಿನ ಮಾಲ್ ಒಂದರಲ್ಲಿ ಬಂಧಿಸಿ ನಂತರ ಹಾಸನ ಅರಣ್ಯಾಧಿಕಾರಿಗಳಿಗೆ ಒಪ್ಪಿಸಿದ್ದರು. ಹಾಸನ ಅರಣ್ಯಾಧಿಕಾರಿಗಳ ಬಂಧನದಲ್ಲಿದ್ದ ವಿಕ್ರಂ ಸಿಂಹ ಈಗ ಜಾಮೀನಿನ ಮೇಲೆ ಹೊರ ಬಂದಿದ್ದಾರೆ.