Mysuru : ರಾಷ್ಟ್ರೀಯ ಮಲೇರಿಯಾ ವಿರೋಧಿ ಮಾಸಾಚರಣೆ

By Kannadaprabha News  |  First Published Jul 5, 2023, 8:24 AM IST

ಪಟ್ಟಣದ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ತಾಲೂಕು ಮಟ್ಟದ ರಾಷ್ಟ್ರೀಯ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮ ನಡೆಯಿತು.


 ಎಚ್‌.ಡಿ. ಕೋಟೆ :  ಪಟ್ಟಣದ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ತಾಲೂಕು ಮಟ್ಟದ ರಾಷ್ಟ್ರೀಯ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮ ನಡೆಯಿತು.

ತಾಲೂಕು ಆರೋಗ್ಯಾಧಿಕಾರಿ ಡಾ. ಟಿ.ರವಿಕುಮಾರ್‌ ಮತ್ತು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಸೋಮಣ್ಣ ಅವರು ಹಸಿರು ನಿಶಾನೆ ತೋರುವುದರ ಮೂಲಕ ಜಾಥಾಗೆ ಚಾಲನೆ ನೀಡಿದರು.

Latest Videos

undefined

ಟಿಎಚ್‌ಒ ಡಾ. ರವಿಕುಮಾರ್‌ ಮಾತನಾಡಿ, ನವೀನ ವಿಧಾನಗಳನ್ನು ಅಳವಡಿಸಿ ಅನುಷ್ಠಾನಗೊಳಿಸೋಣ, ಮಲೇರಿಯ ಜ್ವರ ಒಂದು ಮಾರಣಾಂತಿಕ ಕಾಯಿಲೆ, ಈ ಜ್ವರ ಸೋಂಕು ಹೊಂದಿದ ಅನಾಫಿಲೀಸ್‌ ಎಂಬ ಹೆಣ್ಣು ಕಚ್ಚುವುದರಿಂದ ಒಬ್ಬರಿಂದ ಮತ್ತೊಬ್ಬರಿಗೆ ಈ ರೋಗ ಹರಡುತ್ತದೆ. ಸೊಳ್ಳೆಯು ಸಾಮಾನ್ಯವಾಗಿ ಮುಸ್ಸಂಜೆ ಹೊತ್ತಿನಲ್ಲಿ ಕಚ್ಚುತ್ತದೆ. ಈ ಮಲೇರಿಯಾ ರೋಗವನ್ನು ರಕ್ತಲೇಪನ ತೆಗೆದು ಪರೀಕ್ಷೆ ಮಾಡಿಸುವುದರಿಂದ ರೋಗವನ್ನು ಪತ್ತೆ ಹಚ್ಚಬಹುದು, ಈ ಜ್ವರಕ್ಕೆ ನಿರ್ಧಿಷ್ಟವಾದ ಔಷಧಿ ಇದೆ. ಆದರೆ ಸರಿಯಾದ ಸಮಯಕ್ಕೆ ಔಷಧಿ ಪಡೆದರೆ ರೋಗವನ್ನು ಬೇಗ ಗುಣಪಡಿಸಬಹುದು ಎಂದರು.

ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ. ಆಶ್ರಿತ್‌ಶೆಟ್ಟಿ, ಡಾ. ಚಂದ್ರಕಲಾ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ನಾಗೇಂದ್ರ, ರವಿರಾಜ…, ಅಶೋಕ್‌, ಹನುಮಂತು, ಕೃಷ್ಣ, ಪಾಲಾಕ್ಷ, ಲಕ್ಷ್ಮಿಭಚ್‌, ಆರೋಗ್ಯ ಸುರಕ್ಷಣಾಧಿಕಾರಿಗಳು, ಸಮುದಾಯ ಆರೋಗ್ಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ಇದ್ದರು.

click me!