ಮೈಸೂರು ಎಸ್‌ಪಿ ರಿಷ್ಯಂತ್‌ಗೆ ಕೊರೋನಾ ಸೋಂಕು

By Kannadaprabha NewsFirst Published Aug 19, 2020, 10:36 AM IST
Highlights

ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್ ಅವರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ. ಅವರಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ.

ಮೈಸೂರು (ಆ.19): ಮೈಸೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್‌ ಅವರಿಗೆ ಕೊರೋನಾ ವೈರಸ್‌ ಸೋಂಕು ತಗುಲಿದೆ.

ಎಸ್ಪಿ ಕಚೇರಿಯ ಸಿಬ್ಬಂದಿಯೊಬ್ಬರಿಗೆ ಈಚೆಗೆ ಕೊರೋನಾ ಪಾಸಿಟಿವ್‌ ಬಂದಿತ್ತು. ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಎಸ್ಪಿ ಸಿ.ಬಿ. ರಿಷ್ಯಂತ್‌ ಅವರು ಸಹ ಕೋವಿಡ್‌ ಪರೀಕ್ಷೆಗೆ ಒಳಗಾದಾಗ ಸೋಮವಾರ ಸಂಜೆ ಪಾಸಿಟಿವ್‌ ಎಂಬ ವರದಿ ಬಂದಿದೆ. 

ರಾಜ್ಯದಲ್ಲಿ ಒಂದೇದಿನ ಕೊರೋನಾಕ್ಕೆ 139 ಬಲಿ: 7665 ಕೇಸ್!..

ಎಸ್ಪಿ ಸಿ.ಬಿ. ರಿಷ್ಯಂತ್‌ ಅವರಿಗೆ ಕೊರೋನಾ ರೋಗ ಲಕ್ಷಣಗಳು ಇಲ್ಲದ ಕಾರಣ ವೈದ್ಯರು ಮನೆಯಲ್ಲಿದ್ದು ಚಿಕಿತ್ಸೆ ಪಡೆಯಲು ಸೂಚಿಸಿದ್ದಾರೆ. ಹೀಗಾಗಿ, ರಿಷ್ಯಂತ್‌ ಅವರು ಮನೆಯಿಂದಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.

ಐಐಎಸ್ಸಿ ವಿದ್ಯಾರ್ಥಿ ಆತ್ಮಹತ್ಯೆ: ಕೊರೋನಾ ಭೀತಿ ಕಾರಣ?...

 ಈ ನಡುವೆ ಜಲಪುರಿಯಲ್ಲಿರುವ ಮೈಸೂರು ಎಸ್ಪಿ ಕಚೇರಿ ಹಾಗೂ ದಕ್ಷಿಣ ವಲಯ ಐಜಿಪಿ ಕಚೇರಿಯಲ್ಲಿ ಮಂಗಳವಾರ ಸಂಪೂರ್ಣ ಸ್ಯಾನಿಟೈಸ್‌ ಮಾಡಿ, ಒಂದು ದಿನದ ಮಟ್ಟಿಗೆ ಬಂದ್‌ ಮಾಡಲಾಗಿದೆ.

click me!