ಮೈಸೂರು (ಆ.08): ಪಿಹೆಚ್.ಡಿ. ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಧ್ಯಾಪಕ ದಂಪತಿಗೆ ನೋಟಿಸ್ ಜಾರಿ ಮಾಡಲಾಗಿದೆ.
ಮಾಧ್ಯಮಗಳಲ್ಲಿ ಪ್ರಕಟವಾದ ವರದಿ ಆಧರಿಸಿ ದಂಪತಿಗೆ ಮೈಸೂರು ವಿವಿ ಕುಲಸಚಿವ ಪ್ರೊ.ಶಿವಪ್ಪರಿಂದ ನೋಟೀಸ್ ಜಾರಿಗೊಳಿಸಲಾಗಿದೆ.
ಮಾನಸಗಂಗೋತ್ರಿಯ ರಾಜ್ಯಶಾಸ್ತ್ರ ಅಧ್ಯಾಯನ ವಿಭಾಗದ ಪ್ರಾಧ್ಯಾಪಕ ಡಾ.ಜಿ.ಟಿ.ರಾಮಚಂದ್ರಪ್ಪ. ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಪ್ರಾಧ್ಯಾಪಕಿ ಡಾ.ಎನ್.ಕೆ.ಲೋಲಾಕ್ಷಿಗೆ ನೋಟಿಸ್ ನೀಡಲಾಗಿದೆ.
ಮೈಸೂರು: ಪ್ರಾಧ್ಯಾಪಕನಿಂದಲೇ ವಿದ್ಯಾರ್ಥಿನಿ ಮೇಲೆ ರೇಪ್ ಪ್ರಕರಣಕ್ಕೆ ರೋಚಕ ಟ್ವಿಸ್ಟ್..!
ಘಟನೆ ಸಂಬಂಧ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದು, ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅವರ ನಿರ್ದೇಶನದ ಮೇರೆಗೆ ನೋಟಿಸ್ ಕೊಡಲಾಗಿದೆ.
ಸಂಶೋಧನಾ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ರಾಮಚಂದ್ರಪ್ಪ ವಿರುದ್ಧ ಆರೋಪ ಕೇಳಿ ಬಂದಿತ್ತು. ಅಲ್ಲದೇ ಅವರ ಪತ್ನಿಯೂ ಕೂಡ ಪತಿ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಇದೀಗ ಇಬ್ಬರಿಗೂ ನೋಟಿಸ್ ನೀಡಲಾಗಿದೆ.