BSYರಿಂದ ಮಾತ್ರವೇ ಕೆಲಸ : ಎನ್‌.ಚಲುವರಾಯಸ್ವಾಮಿ ಬಾಂಬ್

By Kannadaprabha NewsFirst Published Sep 4, 2020, 3:34 PM IST
Highlights

ರಾಜ್ಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಒಬ್ಬರೇ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಎನ್ ಚೆಲುವರಾಯಸ್ವಾಮಿ ಹೇಳಿದ್ದಾರೆ. ಇದೇ ವೇಳೆ ಆರೋಪಗಳ ಸುರಿಮಲೆಯನ್ನೂ ಸುರಿಸಿದ್ದಾರೆ.

 ನಾಗಮಂಗಲ (ಸೆ.04):  ದೇಶದಲ್ಲಿ ಕೊರೋನಾ ಪ್ರಮಾಣದಲ್ಲಿ ಏರಿಕೆಯಾಗಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದುರಾಡಳಿತವೇ ಕಾರಣ ಎಂದು ಮಾಜಿ ಸಚಿವ ಎನ್‌.ಚಲುವರಾಯಸ್ವಾಮಿ ಆರೋಪಿಸಿದರು.

ಪಟ್ಟಣದ ಬ್ಲಾಕ್‌ ಕಾಂಗ್ರೆಸ್‌ ಕಚೇರಿಯಲ್ಲಿ ಕೆಪಿಸಿಸಿ ವತಿಯಿಂದ ಆಯೋಜಿಸಿದ್ದ ಕೋವಿಡ್‌-19 ನಿಯಂತ್ರಿಸುವ ಆರೋಗ್ಯ ಹಸ್ತ ಕಾರ್ಯಕ್ರಮದಲ್ಲಿ ಮಾತನಾಡಿ, ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಒಬ್ಬರನ್ನು ಬಿಟ್ವರೆ ಯಾವೊಬ್ಬ ಸಚಿವರೂ ಕೊರೋನಾ ನಿಯಂತ್ರಣದಲ್ಲಿ ಸಕ್ರಿಯವಾಗಿ ಭಾಗಿಯಾಗುತ್ತಿಲ್ಲ. ಉಳಿದ ಕೆಲ ಸಚಿವರು ತಮ್ಮ ಆರ್ಥಿಕ ಮೂಲವನ್ನು ವೃದ್ಧಿಸಿಕೊಳ್ಳುತ್ತಿದ್ದಾರೆ ಎಂದು ಬಾಂಬ್ ಸಿಡಿಸಿದ್ದಾರೆ.

ಬಿಜೆಪಿ ಸರ್ಕಾರ ಬರೀ ಸುಳ್ಳು ಭರವಸೆಗಳನ್ನು ಕೊಡುತ್ತಾ ಕಾಲ ಕಳೆಯುತ್ತಿದೆ. ಮಾತುಗಾರಿಕೆಯಲ್ಲಿ ನಿಪುಣರಾಗಿರುವ ಇವರು, ಸುಳ್ಳುಗಳನ್ನೇ ಸತ್ಯವೆಂಬಂತೆ ನಿರೂಪಿಸುವ ಕಲೆಯನ್ನು ಕರಗತ ಮಾಡಿಕೊಂಡಿದ್ದಾರೆ. ಜನಸಾಮಾನ್ಯರ ಬಗ್ಗೆ ಸ್ವಲ್ಪವೂ ಕಾಳಜಿಯನ್ನಿಟ್ಟುಕೊಳ್ಳದ ಇವರು ಅಪ್ರಯೋಜಕರು ಎಂದ ಟೀಕಿಸಿದರು.

ಮುಂದಿನ ವಾರ ಮುಖ್ಯಮಂತ್ರಿ ಯಡಿಯೂರಪ್ಪ ದೆಹಲಿಗೆ? ..

ಕಾಂಗ್ರೆಸ್‌ ಪಕ್ಷ ಕೊರೋನಾ ನಿಯಂತ್ರಣದಲ್ಲಿ ತಮ್ಮದೇ ಆದ ರೀತಿಯಲ್ಲಿ ಕೆಲಸ ಮಾಡಿಕೊಂಡು ಬರುತ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಕೊರೋನಾ ವಾರಿಯರ್ಸ್‌ ರೀತಿಯಲ್ಲೇ ಕೆಲಸ ಮಾಡಿದ್ದಾರೆ. ಇಬ್ಬರೂ ನಾಯಕರು ಸೋಂಕಿಗೆ ಒಳಗಾಗಿದ್ದರೂ ಸಹ, ರಾಜ್ಯದ ಜನ ಮುಖ್ಯವೆಂದು ಆಸ್ಪತ್ರೆಯಿಂದಲೇ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

ಗಲಭೆ ನಡೆದಿದ್ದ ಡಿ.ಜೆ.ಹಳ್ಳಿ, ಕೆ.ಜೆ.ಹಳ್ಳಿಯಲ್ಲಿ ಸಿದ್ದರಾಮಯ್ಯ ರೌಂಡ್ಸ್: ಬಳಿಕ ಹೇಳಿದ್ದು ಹೀಗೆ

ಪಕ್ಷದ ಲಕ್ಷಾಂತರ ಕಾರ್ಯಕರ್ತರ ಮೂಲಕ ಕೊರೋನಾ ನಿಯಂತ್ರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಕಾರ್ಯಕರ್ತರು ಕೋವಿಡ… ನಿಯಂತ್ರಣ ಮಾಡುವ ನಿಟ್ಟಿನಲ್ಲಿ ವಾರಿಯರ್ಸ್‌ ಆಗಿ ಕೆಲಸ ಮಾಡಬೇಕು. ಪ್ರತೀ ಗ್ರಾಮಕ್ಕೆ ತೆರಳಿ ಪರೀಕ್ಷೆ ಮಾಡಿಸಬೇಕು. ಅನುಮಾನ ಬಂದವರನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು.

ಇದೇ ವೇಳೆ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಕೋವಿಡ್-19ರ ನಿಯಂತ್ರಣಕ್ಕಾಗಿ ಶ್ರಮಿಸುವ ಕೈ ಪಕ್ಷದ ಕಾರ್ಯಕರ್ತರಿಗೆ ಆರೋಗ್ಯ ಹಸ್ತದ ಕಿಟ್‌ಗಳನ್ನು ವಿತರಿಸಲಾಯಿತು. ಕಾರ್ಯಕ್ರಮ ಕುರಿತು ಮಾಜಿ ಸಂಸದ ಆರ್‌ .ಧ್ರುವನಾರಾಯಣ್‌ , ಡಾ.ಮಧುಸೂಧನ್ ಮಾತನಾಡಿದರು. ಗ್ರಾಮಾಂತರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ದಿವಾಕರ್‌ , ಕೆಪಿಸಿಸಿ ಸಂಯೋಜಕಿ ರಶ್ಮಿ, ಮುಖಂಡರಾದ ಎಚ್‌.ಟಿ.ಕೃಷ್ಣೇಗೌಡ,  ಜೆ.ರಾಜೇಶ…, ಶರತ್‌ ರಾಮಣ್ಣ, ಆರ್‌ .ಕೃಷ್ಣೇಗೌಡ, ಕೊಣನೂರು ಹನುಮಂತು ಇದ್ದರು.

click me!