12 ಜಿಲ್ಲೆಗಳಲ್ಲಿ ನೂತನ ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕ

Kannadaprabha News   | Asianet News
Published : Jan 30, 2020, 08:58 AM IST
12 ಜಿಲ್ಲೆಗಳಲ್ಲಿ ನೂತನ ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕ

ಸಾರಾಂಶ

ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸಾರಿಗೆ ಉದ್ಯಮಿ ಕುಯಿಲಾಡಿ ಸುರೇಶ್‌ ನಾಯಕ್‌ ಆಯ್ಕೆಯಾಗಿದ್ದಾರೆ. ಮಂಗಳವಾರ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಅವರು ಉಡುಪಿಯೂ ಸೇರಿದಂತೆ 12 ಜಿಲ್ಲೆಗಳ ಜಿಲ್ಲಾಧ್ಯಕ್ಷರು ಹೆಸರನ್ನು ಘೋಷಿಸಿದ್ದಾರೆ.

ಉಡುಪಿ(ಜ.30): ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸಾರಿಗೆ ಉದ್ಯಮಿ ಕುಯಿಲಾಡಿ ಸುರೇಶ್‌ ನಾಯಕ್‌ ಆಯ್ಕೆಯಾಗಿದ್ದಾರೆ. ಮಂಗಳವಾರ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಅವರು ಉಡುಪಿಯೂ ಸೇರಿದಂತೆ 12 ಜಿಲ್ಲೆಗಳ ಜಿಲ್ಲಾಧ್ಯಕ್ಷರು ಹೆಸರನ್ನು ಘೋಷಿಸಿದ್ದಾರೆ. ಸುರೇಶ್‌ ನಾಯಕ್‌ ಅವರು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಅದಕ್ಕೂ ಮೊದಲು ಕಾಪು ಕ್ಷೇತ್ರಾಧ್ಯಕ್ಷರಾಗಿಯೂ ಪಕ್ಷಕ್ಕೆ ಸೇವೆ ಸಲ್ಲಿಸಿದ್ದರು.

ಮಂಗಳವಾರ ಪಕ್ಷದ ಕಾರ್ಯಕರ್ತರು ಆತ್ರಾಡಿ ಬಸ್ಸು ನಿಲ್ದಾಣದ ಬಳಿ ಸ್ವಾಗತಿಸಿ, ಬೈಕು ರಾರ‍ಯಲಿ ಮೂಲಕ ಹಿರಿಯಡ್ಕದವರೆಗೆ ಕರೆದೊಯ್ದರು. ಅಲ್ಲಿ ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಿ ಅಭಿನಂದಿಸಲಾಯಿತು.

13ಕ್ಕೆ 13 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಭರ್ಜರಿ ಜಯ!

ಈ ಸಂದರ್ಭ ಮಾಜಿ ತಾ.ಪಂ. ಅಧ್ಯಕ್ಷೆ ಸುನಿತಾ ನಾಯ್‌್ಕ, ಮಾಜಿ ಸದಸ್ಯ ಸತ್ಯಾನಂದ ನಾಯಕ್‌, ಅಲೆವೂರು ಗ್ರಾ.ಪಂ. ಅಧ್ಯಕ್ಷ ಶ್ರೀಕಾಂತ್‌ ನಾಯಕ್‌, ಜಿಲ್ಲಾ ಮಹಿಳಾ ಮೋರ್ಚಾದ ಪೂರ್ಣಿಮಾ ಸುರೇಶ್‌ ಮುಂತಾದವರು ಉಪಸ್ಥಿತರಿದ್ದರು.

'ಆದಿತ್ಯರಾವ್‌ಗೆ ಟಿಕೆಟ್, ಬಿಜೆಪಿ ಅಭ್ಯರ್ಥಿಯಾಗ್ತಾನಾ ಬಾಂಬರ್..'?

PREV
click me!

Recommended Stories

ಸದ್ದಿಲ್ಲದೇ ಓಪನ್ ಆದ 'ಬಿಗ್ ಬಾಸ್' ನಡೆಯುವ ಜಾಲಿವುಡ್ ಸ್ಟುಡಿಯೋ! KSPCB ಅನುಮತಿ
ವಿಧಾನಸಭೆಯಲ್ಲಿ ಸಿಎಂ ಕುರ್ಚಿಯದ್ದೇ ಗುದ್ದಾಟ: ಬೈರತಿ 'ಕಿಂಗ್ ಅಲೈವ್' ಅಂದಿದ್ದು ಯಾಕೆ? ಆರ್ ಅಶೋಕ್, ಬೈರತಿ ವಾಕ್ಸಮರ!