ಮಹಾಬಲೇಶ್ವರ ದೇವಾಲಯಕ್ಕೆ ತೆರಳಿ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಿ, ಜಲಾಭಿಷೇಕ, ಅರ್ಚನೆ ನೆರವೇರಿಸಿ ಲೋಕ ಕಲ್ಯಾಣಕ್ಕೆ ಪ್ರಾರ್ಥಿಸಿದ ನಳೀನ್ ಕುಮಾರ್ ಕಟೀಲ್
ಕಾರವಾರ(ಡಿ.09): ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ್ ಮಂಗಳವಾರ ಗೋಕರ್ಣ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಿ, ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳ ಆಶೀರ್ವಾದ ಪಡೆದುಕೊಂಡಿದ್ದಾರೆ.
ಗೋಕರ್ಣದಲ್ಲಿ ಮಹಾಶಕ್ತಿ ಕೇಂದ್ರದ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಕಟೀಲ್, ಮಹಾಬಲೇಶ್ವರ ದೇವಾಲಯಕ್ಕೆ ತೆರಳಿ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಿದರು. ಜಲಾಭಿಷೇಕ, ಅರ್ಚನೆ ನೆರವೇರಿಸಿ ಲೋಕ ಕಲ್ಯಾಣಕ್ಕೆ ಪ್ರಾರ್ಥಿಸಿದ್ದಾರೆ.
ದೇವಾಲಯದ ಆಡಳಿತಾಧಿಕಾರಿ ಜಿ.ಕೆ. ಹೆಗಡೆ ಸ್ವಾಗತಿಸಿದರು. ವೇ. ಅಮೃತೇಶ ಭಟ್ ಹಿರೇ ಮತ್ತು ಉಪಾಧಿವಂತ ಮಂಡಳದವರು ಪೂಜೆ ನೆರವೇರಿಸಿದರು. ದೇವಾಲಯದಿಂದ ಕಟೀಲ್ ಅವರನ್ನು ಸತ್ಕರಿಸಲಾಯಿತು.
ಅಂಕೋಲಾ: ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ
ರಾಘವೇಶ್ವರ ಶ್ರೀಗಳ ಭೇಟಿ:
ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ್ ಗೋಕರ್ಣದ ಅಶೋಕೆಯ ಮಲ್ಲಿಕಾರ್ಜುನ ದೇವರ ಸನ್ನಿಧಿಯಲ್ಲಿ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಶ್ರೀಗಳು ಶಾಲು ಹೊದೆಸಿ, ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು.