ಬಿಜೆ​ಪಿ​ಯಲ್ಲಿ ಗುಂಪು​ಗಾ​ರಿಕೆ ಇಲ್ಲ: ನಳಿನ ಕುಮಾರ್‌ ಕಟೀಲ್‌

Kannadaprabha News   | Asianet News
Published : Dec 05, 2020, 09:30 AM IST
ಬಿಜೆ​ಪಿ​ಯಲ್ಲಿ ಗುಂಪು​ಗಾ​ರಿಕೆ ಇಲ್ಲ: ನಳಿನ ಕುಮಾರ್‌ ಕಟೀಲ್‌

ಸಾರಾಂಶ

ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಘೋಷಣೆಯಾಗಿದೆ|ನೂರಕ್ಕೆ 80ರಷ್ಟು ಪಂಚಾಯತ್‌ ಚುನಾವಣೆಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ| ನಮ್ಮ ಪಕ್ಷ ಐದಾರು ವಿಭಾಗಗಳ ಮೂಲಕ ವಿವಿಧ ಸಂಘಟನೆಗಳ ಅಡಿಯಲ್ಲಿ ಕೆಳ ಮಟ್ಟದಲ್ಲಿ ಪಕ್ಷದ ಸಂಘಟನೆ ಮಾಡಲಾಗಿದೆ| ನಮ್ಮ ಪಕ್ಷಕ್ಕೆ ಉತ್ತಮ ಗೆಲುವು ದೊರೆಯಲಿದೆ ಎಂದ ಕಟೀಲ್‌| 

ಯಲ್ಲಾಪುರ(ಡಿ.05): ನಮ್ಮ ಪಕ್ಷದಲ್ಲಿ ಯಾವುದೇ ಕಾರಣಕ್ಕೂ ಗುಂಪುಗಾರಿಕೆ ಇಲ್ಲ. ಯಾವುದೇ ಪಕ್ಷದಲ್ಲಿ ಅಭಿಪ್ರಾಯ ಬೇಧ ಇರುವುದು ಸಹಜ. ಅದನ್ನು ಹಂಚಿಕೊಳ್ಳಬಹುದು. ಈಗಾಗಲೇ ಶಾಸಕರಿಂದ ಸೇರಿ ಯಾವುದೇ ನಾಯಕರೂ ಸಾರ್ವಜನಿಕ ಹೇಳಿಕೆ ನೀಡಬಾರದು. ಪಕ್ಷದ ಚೌಕಟ್ಟಿನಲ್ಲಿ ಮಾತನಾಡಬೇಕು ಎಂದು ನಿರ್ದೇಶನ ನೀಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ್‌ ಕಟೀಲ್‌ ಹೇಳಿದ್ದಾರೆ. 

ಬೆಳಗಾವಿಯಲ್ಲಿ ನಡೆಯುವ ಬಿಜೆಪಿ ಕಾರ್ಯಕಾರಿಣಿ ಸಭೆಗೆ ತೆರಳುವ ಮಾರ್ಗದಲ್ಲಿ ಯಲ್ಲಾಪುರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಿದ್ದರು.
ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಘೋಷಣೆಯಾಗಿದೆ. ನೂರಕ್ಕೆ 80ರಷ್ಟು ಪಂಚಾಯತ್‌ ಚುನಾವಣೆಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ನಮ್ಮ ಪಕ್ಷ ಐದಾರು ವಿಭಾಗಗಳ ಮೂಲಕ ವಿವಿಧ ಸಂಘಟನೆಗಳ ಅಡಿಯಲ್ಲಿ ಕೆಳ ಮಟ್ಟದಲ್ಲಿ ಪಕ್ಷದ ಸಂಘಟನೆ ಮಾಡಲಾಗಿದೆ. ಆ ಹಿನ್ನೆಲೆಯಲ್ಲಿ ನಮ್ಮ ಪಕ್ಷಕ್ಕೆ ಉತ್ತಮ ಗೆಲುವು ದೊರೆಯಲಿದೆ ಎಂದರು.

ಹಿರಿಯ ಯಕ್ಷಗಾನ ಕಲಾವಿದ ಹಡಿನಬಾಳು ಶ್ರೀಪಾದ ಹೆಗಡೆ ಇನ್ನಿಲ್ಲ

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ, ವಿಧಾನ ಪರಿಷತ್‌ ಸದಸ್ಯ ಶಾಂತಾರಾಮ ಸಿದ್ದಿ, ಗ್ರಾಮೀಣಾಭಿವೃದ್ಧಿ ಮತ್ತು ವಿಕೇಂದ್ರೀಕರಣ ಸಮಿತಿಯ ರಾಜ್ಯ ಉಪಾಧ್ಯಕ್ಷ ಪ್ರಮೋದ ಹೆಗಡೆ, ಬಿಜೆಪಿ ತಾಲೂಕಾಧ್ಯಕ್ಷ ಗೋಪಾಲಕೃಷ್ಣ ಗಾಂವ್ಕರ್‌, ಜಿಪಂ ಸದಸ್ಯೆ ಶ್ರುತಿ ಹೆಗಡೆ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಡಾ. ರವಿ ಭಟ್ಟಬರಗದ್ದೆ, ಪ್ರಸಾದ ಹೆಗಡೆ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷ ರೇಖಾ ಹೆಗಡೆ, ಪಪಂ ಅಧ್ಯಕ್ಷೆ ಸುನಂದಾ ದಾಸ್‌, ಉಪಾಧ್ಯಕ್ಷೆ ಶ್ಯಾಮಿಲಿ ಪಾಟಣಕರ್‌ ಮತ್ತಿತರರಿದ್ದರು.
 

PREV
click me!

Recommended Stories

ವಿಧಾನಸಭೆಯಲ್ಲಿ 'ಉತ್ತರ ಕರ್ನಾಟಕ' ವಿವಾದ: ಶಿವಲಿಂಗೇಗೌಡರ ಮಾತುಗಳಿಗೆ ಗರಂ ಆದ ಯತ್ನಾಳ್, ಗ್ಯಾರಂಟಿ, ಗುಂಡಿ ವಿಚಾರಕ್ಕೆ ಜಟಾಪಟಿ!
ಕೊಡಗಿನ ಇತಿಹಾಸದಲ್ಲೇ ಮೊದಲ ಬಾರಿಗೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್! ಏನಿದು ಪ್ರಕರಣ?