ಸಿದ್ದರಾಮಯ್ಯ ಕನ್ನಡಿಯಲ್ಲಿ ಮುಖ ನೋಡಿಕೊಳ್ಳಲಿ: ನಳಿನ್‌ ಟಾಂಗ್

Kannadaprabha News   | Asianet News
Published : Jul 12, 2020, 08:20 AM IST
ಸಿದ್ದರಾಮಯ್ಯ ಕನ್ನಡಿಯಲ್ಲಿ ಮುಖ ನೋಡಿಕೊಳ್ಳಲಿ: ನಳಿನ್‌ ಟಾಂಗ್

ಸಾರಾಂಶ

ರಾಜ್ಯದಲ್ಲಿ ಮೆಡಿಕಲ್‌ ಕಿಟ್‌ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮೊದಲು ಕನ್ನಡಿಯಲ್ಲಿ ತಮ್ಮ ಮುಖ ನೋಡಿಕೊಳ್ಳಲಿ. ಈಗಾಗಲೇ ಅವರ ಆರೋಪಕ್ಕೆ ಯಡಿಯೂರಪ್ಪ ಅವರು ತಕ್ಕ ಉತ್ತರ ಕೊಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ತಿರುಗೇಟು ನೀಡಿದ್ದಾರೆ.

ಮಡಿಕೇರಿ(ಜು.12): ರಾಜ್ಯದಲ್ಲಿ ಮೆಡಿಕಲ್‌ ಕಿಟ್‌ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮೊದಲು ಕನ್ನಡಿಯಲ್ಲಿ ತಮ್ಮ ಮುಖ ನೋಡಿಕೊಳ್ಳಲಿ. ಈಗಾಗಲೇ ಅವರ ಆರೋಪಕ್ಕೆ ಯಡಿಯೂರಪ್ಪ ಅವರು ತಕ್ಕ ಉತ್ತರ ಕೊಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ತಿರುಗೇಟು ನೀಡಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದಿರಾ ಕ್ಯಾಂಟಿನ್‌ನಲ್ಲಿ ನಡೆದಿದ್ದ ಅವ್ಯವಹಾರ ಬಗ್ಗೆ ತಾವು ಸಿಎಂ ಆಗಿದ್ದಾಗ ದಾಖಲೆಗಳನ್ನು ಕೊಟ್ಟಿದ್ದಿರಾ? ಮನೆಗಳ ನಿರ್ಮಾಣದಲ್ಲಿ ನಡೆದ ಅವ್ಯವಹಾರ ಬಗ್ಗೆ ಮಾಹಿತಿ ಕೊಟ್ಟಿದ್ದೀರಾ? ನಿಮ್ಮದೇ ಪಕ್ಷದ ಅಭ್ಯರ್ಥಿಯಾಗಿದ್ದ ಈಶ್ವರ ಖಂಡ್ರೆ ಮೇಲೆ ಮನೆಗಳ ನಿರ್ಮಾಣದಲ್ಲಿ ಕೇಳಿ ಬಂದಿದ್ದ ಆರೋಪಗಳಿಗೆ ಮೊದಲು ದಾಖಲೆ ಕೊಡಿ ಎಂದು ಟಾಂಗ್‌ ನೀಡಿದರು.

ಸರ್ಕಾರದ ವಿರುದ್ಧ ‘ಲೆಕ್ಕ ಕೊಡಿ’ ಅಭಿಯಾನ: ಸಿದ್ದರಾಮಯ್ಯರಿಂದ 100 ಸೆಕೆಂಡಲ್ಲಿ 6 ಪ್ರಶ್ನೆ!

ರಾಜ್ಯದಲ್ಲಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಸರ್ಕಾರ ಸಮರ್ಥವಾಗಿ ಕೊರೋನಾ ಪರಿಸ್ಥಿತಿಯನ್ನು ನಿಭಾಯಿಸುತ್ತಿದೆ. ಪ್ರತಿನಿತ್ಯ ಸಾಕಷ್ಟುಪಾಸಿಟಿವ್‌ ವರದಿಗಳು ದಾಖಲಾಗುವಂತೆ, ಆಸ್ಪತ್ರೆಗಳಿಂದಲೂ ಗುಣಮುಖರೂ ಆಗುತ್ತಿದ್ದಾರೆ. ಎಂದು ಅವರು ಹೇಳಿದರು.

ಕೊಡಗಿನಲ್ಲಿ 2018ರಲ್ಲಿ ಸಂಭವಿಸಿದ ಪ್ರವಾಹದ ಸಂದರ್ಭದಲ್ಲಿ ಮನೆಗಳನ್ನು ಕಳೆದುಕೊಂಡ ಜಿಲ್ಲೆಯ ಹಲವೆಡೆ ಸಂತ್ರಸ್ತರಿಗೆ ಮನೆಗಳನ್ನು ಹಸ್ತಾಂತರಿಸಲಾಗಿದೆ. ಮಳೆ ಹಾಗೂ ಕೊರೋನಾ ಸರ್ಕಾರದ ಮುಂದಿರುವ ಸವಾಲುಗಳು ಎಂದರು.

ವ್ಯಕ್ತಿ ಆಧಾರಿತ ಪಕ್ಷವಲ್ಲ:

ಸ್ಥಳೀಯ ನಾಯಕರಿಗೆ ಸಚಿವ ಸ್ಥಾನ ನೀಡದೆ ವಂಚಿಸಲಾಗಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ವ್ಯಕ್ತಿ ಆಧಾರಿತ ಪಕ್ಷವಲ್ಲ. 311 ಮಂಡಲಗಳಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ನಿರ್ಧಾರ ತೆಗೆದುಕೊಳ್ಳುತ್ತೇವೆ. ಒಂದು ವೇಳೆ ಕೆಲವರಿಗೆ ಅಸಮಾಧಾನ ಇದ್ದರೆ ಮುಂದಿನ ದಿನಗಳಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇವೆ. ಪಕ್ಷದಲ್ಲಿ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇದ್ದು, ಮುಂದಿನ ದಿನಗಳಲ್ಲಿ ಸಿಎಂ ಸ್ಥಳೀಯ ನಾಯಕರಿಗೂ ಅವಕಾಶ ನೀಡಲಿದ್ದಾರೆ ಎಂದರು.

ಡ್ರಗ್ಸ್‌ ಕೊಟ್ಟು ಪುತ್ರಿ ಮೇಲೆ ಮಲತಂದೆ ರೇಪ್: ಹೇಯ ಕೃತ್ಯಕ್ಕೆ ತಾಯಿಯೂ ಸಹಕಾರ!

ಕೊರೋನಾ ಸಂಕಷ್ಟದಿಂದ ಭಾರತ ಆರ್ಥಿಕ ಮುಗ್ಗಟ್ಟು ಸಂಭವಿಸಿದ ಸಂದರ್ಭದಲ್ಲಿ ಕೇಂದ್ರ ಸರ್ಕಾರ 20 ಲಕ್ಷ ಕೋಟಿ ರು. ವಿಶೇಷ ಪ್ಯಾಕೇಜ್‌ ಘೋಷಿಸಿದೆ. ಆತ್ಮನಿರ್ಭರ ಸಂಕಲ್ಪದಡಿ ನರೆಗಾ ಯೋಜನೆ, ಸ್ವ ಉದ್ಯೋಗ, ಕೃಷಿ ಉತ್ಪಾದನೆಗೂ ಆದ್ಯತೆ ನೀಡುತ್ತಿದೆ. ದೇಶದಲ್ಲಿ 1.5 ಕೋಟಿ ಜನರಿಗೆ ಬಿಜೆಪಿ ಆಹಾರ ಪೂರೈಸಿದೆ. ಕೊರೋನಾದಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಗ್ರಾಮೀಣ ಜನತೆಯ ನೋವಿಗೆ ಸ್ಪಂದಿಸುತ್ತಿದೆ ಎಂದು ಹೇಳಿದರು.

ಸಂಸದ ಪ್ರತಾಪ ಸಿಂಹ, ಶಾಸಕರಾದ ಕೆ.ಜಿ. ಬೋಪಯ್ಯ, ಅಪ್ಪಚ್ಚು ರಂಜನ್‌, ಎಂಎಲ್‌ಸಿ ಸುನಿಲ್‌ ಸುಬ್ರಮಣಿ, ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್‌ ದೇವಯ್ಯ ಮತ್ತಿತರರು ಹಾಜರಿದ್ದರು.

PREV
click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
'ಕುಡುಕರ ಲಿವರ್‌ಗೆ ಸರ್ಕಾರದ ಗ್ಯಾರಂಟಿ ಕೊಡಿ..' ಅಬಕಾರಿ ಆದಾಯ ಹೆಚ್ಚಿಸಲು ಖತರ್ನಾಕ್‌ ಐಡಿಯಾ ಕೊಟ್ಟ ಬಿಜೆಪಿ MLC