ಮಂಗಳೂರು ನಡುರಸ್ತೆಯಲ್ಲೇ ನಮಾಜ್ ಮಾಡಿದ ಪ್ರಕರಣ ಸಂಬಂಧ ಸೂಕ್ತ ಕ್ರಮ ಜರುಗಿಸುವಂತೆ ವಿಶ್ವ ಹಿಂದೂ ಪರಿಷತ್, ಬಜರಂಗದಳದ ಕಾರ್ಯಕರ್ತರು ಇಂದು ಕದ್ರಿ ಪೊಲೀಸ್ ಠಾಣೆಗೆ ದೂರು ತೆರಳಿ ದೂರು ನೀಡಿದರು.
ಮಂಗಳೂರು (ಮೇ.28): ಮಂಗಳೂರು ನಡುರಸ್ತೆಯಲ್ಲೇ ನಮಾಜ್ ಮಾಡಿದ ಪ್ರಕರಣ ಸಂಬಂಧ ಸೂಕ್ತ ಕ್ರಮ ಜರುಗಿಸುವಂತೆ ವಿಶ್ವ ಹಿಂದೂ ಪರಿಷತ್, ಬಜರಂಗದಳದ ಕಾರ್ಯಕರ್ತರು ಇಂದು ಕದ್ರಿ ಪೊಲೀಸ್ ಠಾಣೆಗೆ ದೂರು ತೆರಳಿ ದೂರು ನೀಡಿದರು.
ದೂರು ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ವಿಶ್ವ ಹಿಂದೂ ಪರಿಷತ್ ಮುಖಂಡ ಪ್ರದೀಪ್ ಸರಿಪಲ್ಲ ಅವರು, ನಮಾಜ್ ಮಾಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲದೇ ಹೋದರೆ ನಮಾಜ್‌ಗೆ ಪ್ರತ್ಯುತ್ತರವಾಗಿ ಅದೇ ಜಾಗದಲ್ಲಿ ಅದೇ ಸಮಯದಲ್ಲಿ ಶಂಖ ಜಾಗಟೆಗಳೊಂದಿಗೆ ಸಾಮೂಹಿಕ ಹನುಮಾನ್ ಚಾಲೀಸಾ ಪಠಣ ಮಾಡುತ್ತೇವೆಂದು ಎಚ್ಚರಿಕೆ ನೀಡಿದರು.
ಶ್ರೀರಾಮನ ನಿಂದನೆ ವಿರುದ್ಧ ದ್ವನಿಯೆತ್ತಿದ್ದೇ ತಪ್ಪಾಯ್ತಾ? ದುಬೈ, ಕತಾರ್, ಸೌದಿಯಿಂದ ಪೋಷಕಿಗೆ ನಿರಂತರ ಬೆದರಿಕೆ ಕರೆ!
ಸಾರ್ವಜನಿಕ ಸ್ಥಳದಲ್ಲಿ ಅದೂ ವಾಹನಗಳು ಓಡಾಡುವ ಮುಖ್ಯರಸ್ತೆಯಲ್ಲಿ ಉದ್ದೇಶ ಪೂರ್ವಕವಾಗಿ ನಮಾಜ್ ಮಾಡಿ ಸಮಾಜದ ಶಾಂತಿಯನ್ನ ಕದಡುವ ಕೆಲಸ ನಡೆಸುತ್ತಿದ್ದಾರೆ. ಕೆಲವರು ಕೋಮು ಗಲಭೆ ಸೃಷ್ಟಿಸಲೆಂದೇ ಇಂತಹ ಕೃತ್ಯ ನಡೆಸಿದ್ದಾರೆ. ಹೀಗಾಗಿ ಕೃತ್ಯ ನಡೆಸಿದವರ ವಿರುದ್ಧ ಕದ್ರಿ ಪೊಲೀಸರು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಇಂತಹ ಕೃತ್ಯ ಮರುಕಳಿಸಿದ್ರೆ ಅದೇ ಸ್ಥಳದಲ್ಲಿ ಶಂಖ ಜಾಗಟೆಗಳೊಂದಿಗೆ ಹನುಮಾನ್ ಚಾಲೀಸಾ ಪಠಿಸುತ್ತೇವೆ ಎಂದು ಪುನಃ ಎಚ್ಚರಿಕೆ ನೀಡಿದರು.
ಮಂಗಳೂರು: ನಡುರಸ್ತೆಯಲ್ಲೇ ನಮಾಜ್‌ಗೆ ಕುಳಿತ ಯುವಕರು; ವಾಹನ ಮುಂದೆ ಸಾಗದೇ ಯೂಟರ್ನ್!
ಪಟ್ಟಣದ ಕಂಕನಾಡಿ ರಸ್ತೆಯಲ್ಲಿ ಹಗಲು ವೇಳೆಯೇ ಕೆಲ ಯುವಕರು ನಮಾಜ್‌ಗೆ ಕುಳಿತಿದ್ದರು. ಇದರಿಂದ ವಾಹನ ಓಡಾಟಕ್ಕೆ ತೊಂದರೆಯಾಗಿತ್ತು. ನಮಾಜ್ ಕುಳಿತಿರುವುದು ನೋಡಿ ಕೆಲವರು ವಾಹನ ಯೂಟರ್ನ್ ತೆಗೆದುಕೊಂಡು ವಾಪಸ್ ಹೋಗಿದ್ದಾರೆ. ಕಳೆದೆರಡು ದಿನಗಳ ಹಿಂದೆ ನಡೆದಿದ್ದ ಈ ಘಟನೆ ಸ್ಥಳೀಯರೊಬ್ಬರು ವಿಡಿಯೋ ಮಾಡಿದ್ದರು. ಇದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.