ನಮ್ಮ ಕ್ಲಿನಿಕ್: ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದ ವೈದ್ಯಕೀಯ ಸೇವೆ: ಜಿಲ್ಲಾಧಿಕಾರಿ

By Ravi Janekal  |  First Published Dec 15, 2022, 2:03 AM IST

ದಾವಣಗೆರೆ (ಡಿ.15): ಆರೋಗ್ಯ ಕ್ಷೇತ್ರವನ್ನು ತಳಮಟ್ಟದಿಂದ ಬಲಪಡಿಸುವ ಮತ್ತು ಸುಧಾರಣೆ ತರುವ ದೃಷ್ಟಿಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಮೂಲಕ ಆರೋಗ್ಯ ಕ್ಷೇತ್ರದಲ್ಲಿ ನಮ್ಮ ಕ್ಲಿನಿಕ್ ಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿವಾನಂದ್ ಕಾಪಾಸಿ ತಿಳಿಸಿದರು.


ವರದಿ : ವರದರಾಜ್ 

ದಾವಣಗೆರೆ (ಡಿ.15): ಆರೋಗ್ಯ ಕ್ಷೇತ್ರವನ್ನು ತಳಮಟ್ಟದಿಂದ ಬಲಪಡಿಸುವ ಮತ್ತು ಸುಧಾರಣೆ ತರುವ ದೃಷ್ಟಿಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಮೂಲಕ ಆರೋಗ್ಯ ಕ್ಷೇತ್ರದಲ್ಲಿ ನಮ್ಮ ಕ್ಲಿನಿಕ್ ಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿವಾನಂದ್ ಕಾಪಾಸಿ ತಿಳಿಸಿದರು.

Latest Videos

undefined

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ದಾವಣಗೆರೆ ಮಹಾನಗರ ಪಾಲಿಕೆ ಹಾಗೂ ದಾವಣಗೆರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಅವರಗೆರೆ ಗ್ರಾಮದಲ್ಲಿ ಆಯೋಜಿಸಲಾಗಿದ್ದ ನಮ್ಮ ಕ್ಲಿನಿಕಿಗೆ ಚಾಲನೆ ನೀಡಿ ಮಾತನಾಡಿದ ಅವರು, ಆರೋಗ್ಯ ಕ್ಷೇತ್ರದ ಬಲವರ್ಧನೆಗಾಗಿ 15ನೇ ಹಣಕಾಸು ಆಯೋಗವು ರಾಜ್ಯದಲ್ಲಿನ ಸ್ಥಳೀಯ ಸಂಸ್ಥೆಗಳ ಮೂಲಕ ಆರೋಗ್ಯ ಕ್ಷೇತ್ರದ ನಿರ್ದಿಷ್ಟ ಚಟುವಟಿಕೆಗಳಿಗಾಗಿ ಅನುದಾನವನ್ನು ಶಿಫಾರಸು ಮಾಡಿದೆ.

Namma Clinic: ಕಲಬುರಗಿಯಲ್ಲಿ ಬಡವರ ಆರೋಗ್ಯ ಸಂಜೀವಿನಿ 'ನಮ್ಮ‌ ಕ್ಲಿನಿಕ್‌'ಗೆ ಚಾಲನೆ

 ಈ ನಿಟ್ಟಿನಲ್ಲಿ ನಮ್ಮ ಕ್ಲಿನಿಕ್‌ಗಳು ನಗರ ಪ್ರದೇಶದ ಸಮುದಾಯಕ್ಕೆ, ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಒದಗಿಸುವ ಸದುದ್ದೇಶ ಹೊಂದಿದೆ ಎಂದು ಹೇಳಿದರು.
ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದ ಆರೋಗ್ಯ ಸೇವೆ ಹಾಗೂ ನಿರಂತರ ಆರೋಗ್ಯ ಪಾಲನೆಯನ್ನು ಮೇಲಿನ ಹಂತದ ಸೇವೆಗಳನ್ನು ನೀಡುವ ಆಸ್ಪತ್ರೆಗಳಿಗೆ ರೆಫರಲ್‌ ಸೇವೆಗಳ ಸಂಪರ್ಕ ಕಲ್ಪಿಸುವ ಉದ್ದೇಶ ಹೊಂದಿದೆ. ನಮ್ಮ ಕ್ಲಿನಿಕ್‌ಗಳ ಸ್ಥಾಪನೆಯು ಆರೋಗ್ಯ ಸೇವೆಗಳಿಗಾಗಿ ಸಾರ್ವಜನಿಕರ ಹಣದ ಖರ್ಚನ್ನು ಕಡಿಮೆ ಮಾಡುವ ಮತ್ತು ದ್ವಿತೀಯ ಹಾಗೂ ತೃತೀಯ ಹಂತದ ಆರೋಗ್ಯ ಸಂಸ್ಥೆಗಳಲ್ಲಿ ಜನಸಂದಣಿಯನ್ನು ಕಡಿಮೆ ಮಾಡುವ ಉದ್ದೇಶ ಹೊಂದಿದೆ ಎಂದು ತಿಳಿಸಿದರು.

ನಗರ ಪ್ರದೇಶಗಳಲ್ಲಿ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ವಿಕೇಂದ್ರಿಕರಿಸುವ ಜೊತೆಗೆ ಸಾಂಕ್ರಾಮಿಕ ರೋಗಗಳ ಕಣ್ಗಾವಲು ವ್ಯವಸ್ಥೆಯನ್ನು ಬಲಪಡಿಸುತ್ತಾ, ಸಾಂಕ್ರಾಮಿಕ ರೋಗ ಉಲ್ಬಣ ಪರಿಸ್ಥಿತಿಯನ್ನು ತ್ವರಿತಗತಿಯಲ್ಲಿ ದಾಖಲಿಸುವ ವ್ಯವಸ್ಥೆ ಕೂಡ ಇದರಲ್ಲಿ ಇದೆ‌. ಆ ಮೂಲಕ ಆರೋಗ್ಯ ಸಂವರ್ಧನೆ ಹಾಗೂ ಕ್ಷೇಮ ಚಟುವಟಿಕೆಗಳ ಮೂಲಕ ಗಂಡಾಂತರಕಾರಿ ಪರಿಸ್ಥಿತಿಗಳನ್ನು ನಿವಾರಿಸುವುದಾಗಿದೆ ಎಂದು ಮಾಹಿತಿ ನೀಡಿದರು.

Namma Clinic: ಬಡವರ ಆರೋಗ್ಯ ರಕ್ಷಣೆಗೆ ನಮ್ಮ ಕ್ಲಿನಿಕ್‌: ಸಚಿವ ಸುಧಾಕರ್‌

ಆರೋಗ್ಯ ಸೇವೆಗಳು ಅತ್ಯವಶ್ಯವಿರುವ ಜನಸಂಖ್ಯೆ ಆಧಾರಿತ ಮತ್ತು ನಗರ ಪ್ರದೇಶಗಳ ಮ್ಯಾಪಿಂಗ್ ಆಧಾರದ ಮೇಲೆ ಪುಸ್ತುತ ಯಾವುದೇ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸೌಲಭ್ಯಗಳಿಲ್ಲದ ಕೊಳಗೇರಿ, ದುರ್ಬಲ ಪ್ರದೇಶಗಳಿಗೆ ಆದ್ಯತೆ ನೀಡಲಾಗುವುದು. ಅಲ್ಲದೇ ಮುಂಬರುವ ದಿನಗಳಲ್ಲಿ ಗ್ರಾಮಾಂತರ ಪ್ರದೇಶಗಳಲ್ಲಿ ನಮ್ಮ ಕ್ಲಿನಿಕ್ ಗಳನ್ನು ತೆರೆಯುವ ಉದ್ದೇಶ ಹೊಂದಲಾಗಿದೆ ಎಂದರು.ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಮೇಯರ್ ಜಯಮ್ಮ ಗೋಪಿ ನಾಯ್ಕ, ಜಿಲ್ಲಾ ಪಂಚಾಯತ್ ಸಿಇಓ ಡಾ.ಎ.ಚೆನ್ನಪ್ಪ, ಮಹಾಂತೇಶ್, ದೂಡಾ ಅಧ್ಯಕ್ಷ ಎ.ವೈ. ಪ್ರಕಾಶ್ ಇತರರು ಇದ್ದರು.

 

click me!