Tumakur : ಜನರ ಆರೋಗ್ಯಕ್ಕೆ ನಮ್ಮ ಕ್ಲಿನಿಕ್‌ ಪ್ರಾರಂಭ

By Kannadaprabha News  |  First Published Dec 15, 2022, 4:43 AM IST

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಕೆ. ಸುಧಾಕರ್‌ರವರು ನಗರ ಹಾಗೂ ಪಟ್ಟಣ ಪ್ರದೇಶದ ಬಡ, ದುರ್ಬಲ ವರ್ಗದ ಜನರಿಗೆ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ನಮ್ಮ ಕ್ಲಿನಿಕ್‌ಗಳನ್ನು ರಾಜ್ಯದಾದ್ಯಂತ ಆರಂಭಿಸುವ ಮೂಲಕ ಆರೋಗ್ಯ ಕ್ಷೇತ್ರದಲ್ಲಿ ಆಮೂಲಾಗ್ರ ಸುಧಾರಣೆಗೆ ಕಾರಣವಾಗಿದ್ದಾರೆ ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್‌ ಹೇಳಿದರು.


 ತುಮಕೂರು (ಡಿ.15): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಕೆ. ಸುಧಾಕರ್‌ರವರು ನಗರ ಹಾಗೂ ಪಟ್ಟಣ ಪ್ರದೇಶದ ಬಡ, ದುರ್ಬಲ ವರ್ಗದ ಜನರಿಗೆ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ನಮ್ಮ ಕ್ಲಿನಿಕ್‌ಗಳನ್ನು ರಾಜ್ಯದಾದ್ಯಂತ ಆರಂಭಿಸುವ ಮೂಲಕ ಆರೋಗ್ಯ ಕ್ಷೇತ್ರದಲ್ಲಿ ಆಮೂಲಾಗ್ರ ಸುಧಾರಣೆಗೆ ಕಾರಣವಾಗಿದ್ದಾರೆ ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್‌ ಹೇಳಿದರು.

ಜಿಲ್ಲಾಡಳಿತ ಹಾಗೂ (Health)  ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಬುಧವಾರ ಬೆಳಗ್ಗೆ 11 ಗಂಟೆಗೆ ನಗರದ ಮೇಳೆಕೋಟೆ ಮುಖ್ಯರಸ್ತೆ ಹಾಗೂ ಮರಳೂರು ದಿಣ್ಣೆ ಮುಖ್ಯ ರಸ್ತೆಯಲ್ಲಿ ಆಯೋಜಿಸಿದ್ದ(Namma Clinic )  ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

Tap to resize

Latest Videos

ನಗರ ಪ್ರದೇಶದ ಬಡ, ದುರ್ಬಲ ವರ್ಗದ ಜನರಿಗೆ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ನಗರ ಪ್ರದೇಶದ ವ್ಯಾಪ್ತಿಯಲ್ಲಿ 438 ’ನಮ್ಮ ಕ್ಲಿನಿಕ್‌’ಗಳನ್ನು ಆರಂಭಿಸಲು ಯೋಜನೆ ರೂಪಿಸಿ, ಮೊದಲ ಹಂತದಲ್ಲಿ 114 ಕ್ಲಿನಿಕ್‌ಗಳು ಏಕ ಕಾಲಕ್ಕೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮುಖ್ಯಮಂತ್ರಿಯವರು ವರ್ಚುವಲ್‌ ಮೂಲಕ ಚಾಲನೆ ನೀಡಿದ್ದಾರೆ ಎಂದರು.

ನಮ್ಮ ಕ್ಲಿನಿಕ್‌ಗಳನ್ನು 30000 ಜನಸಂಖ್ಯೆಗೆ ಒಂದರಂತೆ ಸ್ಥಾಪಿಸಲಾಗುತ್ತಿದೆ. ಅದರಂತೆ ಜಿಲ್ಲೆಯಲ್ಲಿ 10 ನಮ್ಮ ಕ್ಲಿನಿಕ್‌ಗಳನ್ನು ಮರಳೂರು ದಿಣ್ಣೆ, ಮೇಳೆಕೋಟೆ, ಜಯಪುರ ಅಂಗನವಾಡಿ, ದೇವರಾಯನಪಟ್ಟಣದ ಸಮುದಾಯ ಭವನ, ದಿಬ್ಬೂರು ಅಂಗನವಾಡಿ, ಸತ್ಯಮಂಗಲ ಸಮುದಾಯ ಭವನ (ಒಟ್ಟು 07 ತುಮಕೂರು ನಗರದಲ್ಲಿ) ಹಾಗೂ ಮಧುಗಿರಿ, ಪಾವಗಡ, ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ತಲಾ ಒಂದು ನಮ್ಮ ಕ್ಲಿನಿಕ್‌ಗಳನ್ನು ತೆರೆಯಲಾಗುತ್ತಿದೆ. ಆರಂಭಿಕ ಹಂತದಲ್ಲಿ ಜಿಲ್ಲೆಯಲ್ಲಿ ಇಂದು 02 ಕ್ಲಿನಿಕ್‌ಗಳನ್ನು ನಗರದಲ್ಲಿ ಲೋಕಾರ್ಪಣೆ ಮಾಡಲಾಗಿದ್ದು, ಕೆಲವೇ ವಾರಗಳಲ್ಲಿ ಉಳಿದ ನಮ್ಮ ಕ್ಲಿನಿಕ್‌ಗಳು ಜನರ ಸೇವೆಗೆ ಲಭ್ಯವಿರಲಿವೆ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಮಂಜುನಾಥ್‌ ಡಿ.ಎನ್‌. ಮಾತನಾಡಿ, ನಗರ ಪ್ರದೇಶಗಳ ಬಡ ಜನತೆಗೆ ನಮ್ಮ ಕ್ಲಿನಿಕ್‌ಗಳು 12 ಆರೋಗ್ಯ ಸೇವೆಗಳ ಮೂಲಕ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಒದಗಿಸಲು, ನಿರಂತರ ಆರೈಕೆಯನ್ನು ನೀಡುವ ನಿಟ್ಟಿನಲ್ಲಿ ದ್ವಿತೀಯ ಮತ್ತು ತೃತೀಯ ಹಂತದ ಆರೋಗ್ಯ ಕೇಂದ್ರಗಳಿಗೆ ರೆಫರಲ್‌ ಸೇವೆಗಳನ್ನು ಒದಗಿಸುವ ಮೂಲಕ, ಸಾರ್ವಜನಿಕ ಆರೋಗ್ಯ ಕ್ರಮಗಳನ್ನು ಸುಧಾರಿಸಲು, ಸೂಕ್ತವಾದ ಕಾರ್ಯವಿಧಾನಗಳನ್ನು ಬಲಪಡಿಸಲು ಹಾಗೂ ಸಮುದಾಯದ ಸಹಭಾಗಿತ್ವವನ್ನು ಉತ್ತೇಜಿಸುವಲ್ಲಿ ಸಹಾಯಕಾರಿಯಾಗಲಿವೆ ಎಂದರು.

ನಮ್ಮ ಕ್ಲಿನಿಕ್‌ 1000 ಚದರ ಅಡಿ ವಿಸ್ತೀರ್ಣ ಹೊಂದಿದ್ದು, ಇಲ್ಲಿ ನಿರೀಕ್ಷಣಾ ಸ್ಥಳ, ಹೊರ ರೋಗಿಗಳ ಕೊಠಡಿ, ಚುಚ್ಚು ಮದ್ದು ನೀಡುವ ಕೊಠಡಿ, ಪ್ರಯೋಗಶಾಲೆ, ಯೋಗ ಕೂಠಡಿ, ಔಷಧಿ ದಾಸ್ತಾನು ಮತ್ತು ವಿತರಣಾ ಕೊಠಡಿ, ಆಡಳಿತ ಕಚæÜೕರಿ, ಹೀಗೆ ಪ್ರತ್ಯೇಕ ಕೊಠಡಿಗಳಿದ್ದು ಆಸ್ಪತ್ರೆ ಸಿಬ್ಬಂದಿ, ಮಹಿಳಾ ಮತ್ತು ಪುರುಷ ರೋಗಿಗಳಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಕಲ್ಪಿಸಿ ನಮ್ಮ ಕ್ಲಿನಿಕ್‌ಗೆ ಒಳಂಗಾಣ ಹಾಗೂ ಹೊರಾಂಗಾಣ ವಿನ್ಯಾಸ ಮಾಡಿಸಲಾಗಿದೆ ಎಂದರು.

ಮಹಾನಗರ ಪಾಲಿಕೆಯ ಉಪ ಮಹಾಪೌರಾದ ನರಸಿಂಹಮೂರ್ತಿ, ತಾಲೂಕು ಆರೋಗ್ಯಾಧಿಕಾರಿ ಡಾ.ಲಕ್ಷ್ಮೀಕಾಂತ್‌, ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ ಡಾ. ಕೇಶವ ರಾಜ್‌ ಜಿ. ಸೇರಿದಂತೆ ಹಿರಿಯ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಇಲಾಖಾ ಅಧಿಕಾರಿಗಳು ಮತ್ತು ಸಿಬ್ಬಂದಿ, ಸೇರಿದಂತೆ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಕ್ಲಿನಿಕ್‌ನಲ್ಲಿ ಯಾವುದೇ ಶುಲ್ಕವಿಲ್ಲ

ಇಲ್ಲಿ ಯಾವುದೇ ಶುಲ್ಕವನ್ನು ಪಡೆಯುವುದಿಲ್ಲ. ಇದು ಸಂಪೂರ್ಣ ಉಚಿತವಾದ ಕ್ಲಿನಿಕ್‌. ದೈಹಿಕ ತಪಾಸಣೆ, ರಕ್ತ ಪರೀಕ್ಷೆ, ಬಿಪಿ, ಸಕ್ಕರೆ ಕಾಯಿಲೆ ಪರೀಕ್ಷೆಗಳು ಸೇರಿ ಎಲ್ಲವೂ ಉಚಿತ. ಔಷಧಿಗಳನ್ನು ಕೂಡ ಉಚಿತವಾಗಿ ನೀಡಲಾಗುತ್ತದೆ. ಈ ಕ್ಲಿನಿಕ್‌ಗಳು ರೆಫರಲ್‌ ಕೇಂದ್ರವಾಗಿಯೂ ಕೆಲಸ ಮಾಡುತ್ತವೆ. ರೋಗಿಯನ್ನು ಮೊದಲು ವೈದ್ಯರು ತಪಾಸಣೆ ಮಾಡಿ ಚಿಕಿತ್ಸೆ ಹಾಗೂ ಅಗತ್ಯ ಔಷÜಧಿ ನೀಡುತ್ತಾರೆ. ಹೆಚ್ಚಿನ ಚಿಕಿತ್ಸೆ ಬೇಕಿದ್ದರೆ, ಮೇಲಿನ ಹಂತದ ಚಿಕಿತ್ಸೆಗೆ ಇಲ್ಲಿನ ವೈದ್ಯರೇ ಶಿಫಾರಸು ಮಾಡಿ ಬೇರೆ ಆಸ್ಪತ್ರೆಗಳಿಗೆ ಕಳುಹಿಸುತ್ತಾರೆ. ಗಣೇಶ್‌ ಇತರರಿದ್ದರು.

click me!