ಮೆಟ್ರೋ ಕೆಲಸ: ಶಿವಾಜಿನಗರದಲ್ಲಿ 1 ತಿಂಗಳು ವಾಹನ ಸಂಚಾರ ಬಂದ್‌

By Kannadaprabha News  |  First Published Nov 10, 2024, 7:21 AM IST

ಶಿವಾಜಿನಗರ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯ ಶಿವಾಜಿ ಸರ್ಕಲ್‌ ಮತ್ತು ಜ್ಯೋತಿ ಕೆಫೆ ಬಳಿ ಬಿಎಂಆರ್‌ಸಿಎಲ್‌ ಮೆಟ್ರೋ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ 30 ದಿನ ಮಾರ್ಗದಲ್ಲಿ ವಾಹನಗಳ ಸಂಚಾರ ನಿರ್ಬಂಧಿಸಿದ್ದು, ಸುಗಮ ಸಂಚಾರಕ್ಕೆ ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ.


ಬೆಂಗಳೂರು (ನ.10): ಶಿವಾಜಿನಗರ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯ ಶಿವಾಜಿ ಸರ್ಕಲ್‌ ಮತ್ತು ಜ್ಯೋತಿ ಕೆಫೆ ಬಳಿ ಬಿಎಂಆರ್‌ಸಿಎಲ್‌ ಮೆಟ್ರೋ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ 30 ದಿನ ಮಾರ್ಗದಲ್ಲಿ ವಾಹನಗಳ ಸಂಚಾರ ನಿರ್ಬಂಧಿಸಿದ್ದು, ಸುಗಮ ಸಂಚಾರಕ್ಕೆ ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ.

ಎಲ್ಲೆಲ್ಲಿ ಸಂಚಾರ ನಿರ್ಬಂಧ?
* ಬಾಳೆಕುಂದ್ರಿ ಜಂಕ್ಷನ್‌ನಿಂದ ಶಿವಾಜಿ ಸರ್ಕಲ್ ಮೂಲಕ ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣಕ್ಕೆ ಬರುವ ಎಲ್ಲಾ ಬಿಎಂಟಿಸಿ ಬಸ್‌ಗಳು ಮತ್ತು ಎಲ್ಲಾ ಮಾದರಿಯ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.

Tap to resize

Latest Videos

undefined

ಹೆಣ ಹೂಳುವುದರಲ್ಲೂ ಬಿಜೆಪಿಗರು ಭ್ರಷ್ಟಾಚಾರ ಮಾಡಿದ್ದಾರೆ: ಸಿಎಂ ಸಿದ್ದರಾಮಯ್ಯ

* ಶಿವಾಜಿ ರಸ್ತೆಯ ಮೂಲಕ ಶಿವಾಜಿ ಸರ್ಕಲ್ ಕಡೆಯಿಂದ ಜ್ಯೋತಿ ಕೆಫೆ ಮತ್ತು ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣದ ಕಡೆಗೆ ಬರುವ ಎಲ್ಲಾ ಮಾದರಿಯ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.

ಸಂಚಾರಕ್ಕೆ ಪರ್ಯಾಯ ಮಾರ್ಗಗಳು
* ಬಾಳೆಕುಂದ್ರಿ ಜಂಕ್ಷನ್‌ನಿಂದ ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣಕ್ಕೆ ಬರುವ ಎಲ್ಲಾ ಬಸ್ ಹಾಗೂ ಎಲ್ಲಾ ಮಾದರಿಯ ವಾಹನಗಳು ಟ್ರಾಫಿಕ್ ಹೆಡ್ ಕ್ವಾರ್ಟರ್ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಇನ್‌ಫೆಂಟ್ರಿ ರಸ್ತೆಯ ಮೂಲಕ ಸೆಂಟ್ರಲ್ ಸ್ಟ್ರೀಟ್ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಸೆಂಟ್ರಲ್ ಸ್ಟ್ರೀಟ್ ರಸ್ತೆಯ ಮೂಲಕ ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣದ ಕಡೆಗೆ ಸಂಚರಿಸಬೇಕು.

ಪನ್ಸಾರೆ, ಕಲಬುರ್ಗಿ, ಗೌರಿ ಯೋಚನೆ ಕೊಲ್ಲಲು ಆಗಲ್ಲ: ನಟ ಪ್ರಕಾಶ್ ರೈ

* ಶಿವಾಜಿ ರಸ್ತೆಯಿಂದ ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣಕ್ಕೆ ಬರುವ ಎಲ್ಲಾ ಮಾದರಿಯ ವಾಹನಗಳು ಶಿವಾಜಿ ಸರ್ಕಲ್‌ನಲ್ಲಿ ಬಲ ತಿರುವು ಪಡೆದು ವೆಂಕಟಸ್ವಾಮಿ ನಾಯ್ಡು ರಸ್ತೆಯ ಮೂಲಕ ಬಾಳೆಕುಂದ್ರಿ ಜಂಕ್ಷನ್‌ ತಲುಪಿ ಬಳಿಕ ಎಡ ತಿರುವು ಪಡೆದು ಟ್ರಾಫಿಕ್ ಹೆಡ್ ಕ್ವಾರ್ಟರ್ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಇನ್‌ಫೆಂಟ್ರಿ ರಸ್ತೆಯ ಮೂಲಕ ಸೆಂಟ್ರಲ್ ಸ್ಟ್ರೀಟ್ ಜಂಕ್ಷನ್‌ಗೆ ಬಂದು ಬಳಿಕ ಎಡ ತಿರುವು ಪಡೆದು ಸೆಂಟ್ರಲ್ ಸ್ಟ್ರೀಟ್ ರಸ್ತೆಯ ಮೂಲಕ ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣದ ಕಡೆಗೆ ಸಂಚರಿಸಬೇಕು.

click me!