ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ಮಂಗಳವಾರ ತಾಲೂಕಿನ ಹಲವೆಡೆ ನಮೋ ಬ್ರಿಗೇಡ್ ವತಿಯಿಂದ ಬೈಕ್ ರ್‍ಯಾಲಿ ನಡೆಸಲಾಯಿತು.
ಅಂಕೋಲಾ (ಅ.04): ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ಮಂಗಳವಾರ ತಾಲೂಕಿನ ಹಲವೆಡೆ ನಮೋ ಬ್ರಿಗೇಡ್ ವತಿಯಿಂದ ಬೈಕ್ ರ್‍ಯಾಲಿ ನಡೆಸಲಾಯಿತು. ಬೈಕ್ ರ್‍ಯಾಲಿಯಲ್ಲಿ ಆಗಮಿಸಿದ ಚಕ್ರವರ್ತಿ ಸೂಲಿಬೆಲೆ ಅವರನ್ನು ನಮೋ ಬ್ರಿಗೇಡ್ ಕಾರ್ಯಕರ್ತರು ಹಿಚ್ಕಡ ರಸ್ತೆ ಕ್ರಾಸ್ ಬಳಿ ಸ್ವಾಗತಿಸಿದರು. ಬೆಳಂಬಾರದಲ್ಲಿ ಮುಕ್ತ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಚಕ್ರವರ್ತಿ ಸೂಲಿಬೆಲೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶದ ಚುಕ್ಕಾಣಿ ಹಿಡಿದ ನಂತರ ಕ್ರಾಂತಿಕಾರಕ ಬದಲಾವಣೆಗಳು ಸಂಭವಿಸಿದೆ.
ಕೋವಿಡ್ ಸಂದರ್ಭದಲ್ಲಿ ಅವರು ತೆಗೆದುಕೊಂಡ ನಿರ್ಧಾರ ಮತ್ತು ವಿಜ್ಞಾನಿಗಳಿಗೆ ನೀಡಿದ ಪ್ರೋತ್ಸಾಹ ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ಮನ್ನಣೆ ದೊರಕಿಸಿಕೊಟ್ಟಿತು. ದೇಶದಲ್ಲಿ ರಾಮಮಂದಿರ ನಿರ್ಮಾಣಕ್ಕೆ 500 ವರ್ಷಗಳಿಂದ ಕಾದಿದ್ದೆವು. ಇಂದಿರಾ ಗಾಂಧಿ, ರಾಜೀವ್ ಗಾಂಧಿ ಸೇರಿದಂತೆ ಇತರ ಪ್ರಧಾನಿಗಳಿಂದ ಅದು ಸಾಧ್ಯವಾಗಿರಲಿಲ್ಲ. ಅದರ ನಿರ್ಮಾಣಕ್ಕೆ ಮೋದಿಯೇ ಬರಬೇಕಾಯಿತು. ಮಾಜಿ ಪ್ರಧಾನಿ ನೆಹರು ಅವರು ಹಿಂದೂ ದೇವಾಲಯ ವಿರೋಧಿಸುತ್ತಿದ್ದರು. ನರೇಂದ್ರ ಮೋದಿ ಅವರಿಂದಾಗಿ ಜಗತ್ತಿನಲ್ಲಿ ಅತಿ ಹೆಚ್ಚು ಡಿಜಿಟಲ್ ವ್ಯವಹಾರ ನಡೆಸುವ ರಾಷ್ಟ್ರವಾಗಿ ಭಾರತ ಗುರುತಿಸಿಕೊಂಡಿದೆ ಎಂದರು.
undefined
ರಾಜ್ಯದಲ್ಲಿ ಇಸ್ಲಾಮಿಕ್ ಮತಾಂಧರು ತಲೆ ಎತ್ತುತ್ತಿದ್ದಾರೆ: ಸರ್ಕಾರದ ವಿರುದ್ಧ ಜೋಶಿ ವಾಗ್ದಾಳಿ
ಬೆಳಂಬಾರದ ಖ್ಯಾತ ನಾಟಿ ವೈದ್ಯ ಹನುಮಂತ ಗೌಡ ಮನೆ ಮತ್ತು ಆಸ್ಪತ್ರೆಗೆ ಭೇಟಿ ನೀಡಿ ಪಾರ್ಶ್ವವಾಯು ಮತ್ತು ಇತರೆ ಚಿಕಿತ್ಸೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ನಂತರ ಮೆರವಣಿಗೆ ಮೂಲಕ ತೆಂಕಣಕೇರಿ ಮಾರ್ಗವಾಗಿ ಅಂಕೋಲಾದ ಪಿಎಂ ಪ್ರೌಢಶಾಲೆಗೆ ಭೇಟಿ ನೀಡಿ ಶಿಕ್ಷಕರೊಂದಿಗೆ ಚರ್ಚಿಸಿದರು. ಶಿಕ್ಷಣ ಸಂಸ್ಥೆ ಕಟ್ಟಿ ಬೆಳೆಸಿದ ದಿನಕರ ದೇಸಾಯಿ ಬಗ್ಗೆ ವಿವರಿಸಿದ ಶಿಕ್ಷಕರು ಶಾಲಾ ವಿದ್ಯಾರ್ಥಿಗಳಿಗೆ ಸಹಾಯ ಮಾಡುವಂತೆ ಕೇಳಿಕೊಂಡರು. ಅದಕ್ಕೆ ಪ್ರತಿಕ್ರಿಯಿಸಿದ ಸೂಲಿಬೆಲೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ವಿಶೇಷ ಕಲಿಕಾ ತಂತ್ರಾಂಶ ಒಳಗೊಂಡಿರುವ ಟ್ಯಾಬ್ ನೀಡುವ ಕುರಿತು ಶೀಘ್ರದಲ್ಲಿಯೆ ಸ್ಪಂದಿಸಲಿದ್ದೇವೆ ಎಂದು ತಿಳಿಸಿದರು.
ಶಾಮನೂರು ಹೇಳಿಕೆಯಿಂದ ಸರ್ಕಾರಕ್ಕೆ ಡ್ಯಾಮೇಜ್ ಇಲ್ಲ: ಸಚಿವ ಡಿ.ಸುಧಾಕರ್
ಬಳಿಕ ಪದ್ಮಶ್ರೀ ಸುಕ್ರೀ ಗೌಡ ಮನೆಗೆ ತೆರಳಿ ಆಶೀರ್ವಾದ ಪಡೆದರು. ಈ ವೇಳೆ ಮಾತನಾಡಿದ ಪದ್ಮಶ್ರೀ ಸುಕ್ರೀಗೌಡ, ನರೇಂದ್ರ ಮೋದಿ ದೇಶದ ಪ್ರಧಾನಿ ಆಗಬೇಕು ಎನ್ನುವುದು ನಮ್ಮೆಲ್ಲರ ಅಭಿಲಾಷೆ. ನಮ್ಮನ್ನು ನೋಡಲು ಆಗಮಿಸಿದ ಅವರು ಮತ್ತೊಮ್ಮೆ ಇಲ್ಲಿಗೆ ಭೇಟಿ ನೀಡಲಿ ಎಂದರು. ಪ್ರಮುಖರಾದ ಪ್ರವೀಣ ನಾಯ್ಕ, ಸಂದೀಪ ಗಾಂವ್ಕರ್, ಬಿಜೆಪಿ ಮಂಡಲ ಅಧ್ಯಕ್ಷ ಸಂಜಯ್ ನಾಯ್ಕ, ಮಹಾದೇವ ಗೌಡ, ಜಗದೀಶ ನಾಯಕ, ಬೆಳಂಬರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಖಾರ್ವಿ, ವಿನಾಯಕ ನಾಯ್ಕ್ ಸೇರಿದಂತೆ ಬಿಜೆಪಿ ಪ್ರಮುಖರು ಮತ್ತು ನಮೋ ಬ್ರಿಗೇಡ್ ಕಾರ್ಯಕರ್ತರು ಪಾಲ್ಗೊಂಡಿದ್ದರು.