ಎರಡನೇ ಬಾರಿ ದೇಶದ ಪ್ರಧಾನಿಯಾಗಿ ಆಯ್ಕೆಯಾಗಿರುವ ನರೇಂದ್ರ ಮೋದಿ ಅವರು ಮತ್ತೆ 2029ರವರೆಗೆ ದೇಶದ ಪ್ರಧಾನಿಯಾಗಲಿದ್ದಾರೆಯೇ..?
ಮೈಸೂರು (ಸೆ.18): ಪ್ರಧಾನಿ ನರೇಂದ್ರ ಮೋದಿ ಅವರು 2024ಕ್ಕೆ ಮತ್ತೊಮ್ಮೆ ಈ ದೇಶದ ಪ್ರಧಾನಿಯಾಗಿ ಆಯ್ಕೆಯಾಗಬೇಕು ಎಂದು ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಎಸ್.ಎಲ್.ಭೈರಪ್ಪ ಆಶಯ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಗುರುವಾರ ಶಾಸಕ ಎಸ್.ಎ.ರಾಮದಾಸ್ ಆಯೋಜಿಸಿದ್ದ ಪ್ರಧಾನಿ ನರೇಂದ್ರಮೋದಿ ಅವರ 70ನೇ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ವೆಬ್‌ಸೈಟ್‌ಗೆ ಚಾಲನೆ ನೀಡಿ ಮಾತನಾಡಿದ ಅವರು, ಈಗಾಗಲೇ ಎರಡು ಬಾರಿ ದೇಶದ ಪ್ರಧಾನಿಯಾಗಿ ಆಯ್ಕೆಯಾಗಿರುವ ನರೇಂದ್ರಮೋದಿ ಅವರು 2024ಕ್ಕೂ ಆಯ್ಕೆಯಾಗಬೇಕು. 2029ರ ವೇಳೆಗೆ ಮತ್ತೊಬ್ಬರನ್ನು ಪ್ರಧಾನಿಯನ್ನಾಗಿ ರೂಪಿಸಬೇಕು ಎಂದು ಅಭಿಪ್ರಾಯಪಟ್ಟರು.
ಕುಸಿದ ಆರ್ಥಿಕತೆ ಮೇಲೆತ್ತಲು ಮೋದಿ ಮಾಸ್ಟರ್ ಪ್ಲಾನ್, ವರ್ಕೌಟ್ ಆದ್ರೆ ಭಾರತ ನಂಬರ್ 1..!
ಸ್ವತಂತ್ರ ಭಾರತದಲ್ಲಿ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದವರು ಮಾತ್ರ ಪ್ರಧಾನಿಗಳಾಗಿದ್ದಾರೆ. ಅದು ಅವರ ಪಕ್ಷದ ತೀರ್ಮಾನವೇ ಹೊರತು ಜನರ ತೀರ್ಮಾನವಲ್ಲ. ಆದರೆ, ಜನರ ಮೂಲಕ ಆಯ್ಕೆಯಾಗಿ ಬಂದ ಮೊದಲ ಪ್ರಧಾನಿ ನರೇಂದ್ರ ಮೋದಿ. ನೇರವಾಗಿ ಜನರ ಬಳಿ ಮತ ಯಾಚಿಸಿ ತಮ್ಮ ಕೆಲಸದ ಆಧಾರದ ಮೇಲೆ ಪ್ರಧಾನಿಯಾಗಿದ್ದಾರೆ ಎಂದು ಕೊಂಡಾಡಿದರು.
ದಿಲ್ಲಿಯಲ್ಲಿ ಈಗ ಸಂಪುಟ ಸರ್ಕಸ್; ಹಲವರು ಪರೋಕ್ಷವಾಗಿ ಲಾಬಿ..! .
ಮೋದಿ ಅಧಿಕಾರ ವಹಿಸಿಕೊಂಡಾಗ ಭಾರತ ಯಾವ ಸ್ಥಿತಿಯಲ್ಲಿತ್ತು. ಈಗ ಯಾವ ಸ್ಥಿತಿಯಲ್ಲಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಆರ್ಟಿಕಲ್ 370 ಕಾಯ್ದೆ ರದ್ದು ಮಾಡಲು ಕಾರಣವೇನು ಎಂಬುದನ್ನು ಮನಗಾಣಬೇಕು. ಕೇಂದ್ರ ರಾಜ್ಯಕ್ಕೆ ಜಿಎಸ್ಟಿಪಾಲು ನೀಡಿಲ್ಲ ಎಂಬ ವಿಚಾರದ ಬಗ್ಗೆ ಮಾತನಾಡುವ ಮೊದಲು ಮೋದಿ ಬೇರೆ ರೀತಿಯಲ್ಲಿ ರಾಜ್ಯಕ್ಕೆ ಸಾಕಷ್ಟುಸಹಾಯ ಮಾಡಿದ್ದಾರೆ ಎಂಬುದನ್ನು ತಿಳಿಯಬೇಕು ಎಂದರು.