ಬೆಂಗಳೂರಿನಲ್ಲಿ ರಾಷ್ಟ್ರೀಯ ರೈತರ ಮಹಾ ಅಧಿವೇಶನ- ಉದ್ಯಮಿಗಳ ರೀತಿ ರೈತರ ಸಾಲ ಮನ್ನಾ ಮಾಡಲು ಆಗ್ರಹ

By Kannadaprabha NewsFirst Published Dec 3, 2023, 10:31 AM IST
Highlights

ಡಿ.23 ವಿಶ್ವ ರೈತ ದಿನದಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ರೈತರ ಮಹಾ ಅಧಿವೇಶನ ನಡೆಸಿ ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆಯ ರಾಷ್ಟ್ರೀಯ ರೈತ ಮುಖಂಡರ ಸಮ್ಮುಖದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಗಂಭೀರ ಎಚ್ಚರಿಕೆ ನೀಡಲಾಗುವುದು ಎಂದು ಸಂಯುಕ್ತ ಕಿಸಾನ್ ಮೋರ್ಚಾ ದಕ್ಷಿಣ ಭಾರತ ಸಂಚಾಲಕ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು.

ಮೈಸೂರು : ಡಿ.23 ವಿಶ್ವ ರೈತ ದಿನದಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ರೈತರ ಮಹಾ ಅಧಿವೇಶನ ನಡೆಸಿ ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆಯ ರಾಷ್ಟ್ರೀಯ ರೈತ ಮುಖಂಡರ ಸಮ್ಮುಖದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಗಂಭೀರ ಎಚ್ಚರಿಕೆ ನೀಡಲಾಗುವುದು ಎಂದು ಸಂಯುಕ್ತ ಕಿಸಾನ್ ಮೋರ್ಚಾ ದಕ್ಷಿಣ ಭಾರತ ಸಂಚಾಲಕ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು.

ಕಳೆದ ಮೂರು ವರ್ಷಗಳಿಂದ ಅತಿವೃಷ್ಟಿ ಪ್ರವಾಹ ಹಾನಿ, , ಬರಗಾಲಕ್ಕೆ ತುತ್ತಾಗಿರುವ ರಾಜ್ಯದ ಎಲ್ಲಾ ರೈತರ ಸಾಲ ಸಂಪೂರ್ಣ ಮನ್ನಾ ಮಾಡಬೇಕು. ಕೃಷಿ ಸಾಲ ಪಡೆದ ರೈತರು ಬೆಳೆ ಬೆಳೆಯಲು ಹೂಡಿಕೆ ಮಾಡಿದ್ದಾರೆ. ಬೆಳೆ ನಾಶವಾಗಿ, ರೈತ ಸಂಕಷ್ಟಕ್ಕೆ ಸಿಲುಕಿದ್ದಾನೆ. ಕೈಗಾರಿಕೆ ಉದ್ಯಮಿಗಳಿಗೆ ಸಂಕಷ್ಟದ ನೆರವು ಎಂದು 12 ಲಕ್ಷ ಕೋಟಿ ಮನ್ನಾ ಮಾಡಿರುವ ರೀತಿ ರೈತರ ಸಾಲ ಮನ್ನಾ ಆಗಬೇಕು ಎಂದು ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

Latest Videos

ಅಂತಿಮ ಎಚ್ಚರಿಕೆ

ಬಣ್ಣಾರಿ ಸಕ್ಕರೆ ಕಾರ್ಖಾನೆ ಕಳೆದ ವರ್ಷ 2953 ರೂ. ಪಾವತಿ ಮಾಡಿದ್ದೇವೆ ಎಂದು ಸುಳ್ಳು ವರದಿ ನೀಡಿ ಕಬ್ಬು ಬೆಳೆಗಾರ ರೈತರನ್ನು ವಂಚಿಸುತ್ತಿದೆ. ರಾಜ್ಯದ ಬಹುತೇಕ ಸಕ್ಕರೆ ಕಾರ್ಖಾನೆಗಳು ಸ್ವಯಂ ಪ್ರೇರಿತವಾಗಿ ಎಫ್.ಆರ್.ಪಿ ದರಕ್ಕಿಂತ ಹೆಚ್ಚುವರಿಯಾಗಿ 300 ರೂ. ನೀಡುತ್ತಿದ್ದಾರೆ. ಸಕ್ಕರೆ ಬೆಲೆ ಗಗನಕ್ಕೆ ಏರುತ್ತಿದೆ. 3- 4 ಸಭೆಗಳಾದರೂ ಕಾರ್ಖಾನೆಯವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅಂತಿಮ ಎಚ್ಚರಿಕೆ ನೀಡುತ್ತಿದ್ದೇವೆ ಎಚ್ಚೆತ್ತುಕೊಳ್ಳದಿದ್ದರೆ ಕಾರ್ಖಾನೆ ಮಾಲೀಕರಿಗೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.

ರೈತ ಮುಖಂಡರಾದ ಅತ್ತಹಳ್ಳಿ ದೇವರಾಜ್, ಬರಡನಪುರ ನಾಗರಾಜ್, ಕಿರಗಸೂರು ಶಂಕರ್, ಮೂಕಳ್ಳಿ ಮಹದೇವಸ್ವಾಮಿ ಕಮಲಮ್ಮ, ಪಟೇಲ್ ಶಿವಮೂರ್ತಿ, ಕುರುಬೂರು ಸಿದ್ದೇಶ್, ಹಂಪಾಪುರ ರಾಜೇಶ, ಕಬಿನಿ ಮಾದಪ್ಪ, ವೆಂಕಟೇಶ್, ಪ್ರದೀಪ, ಸುನಿಲ್, ರಂಗರಾಜು, ಕೆಂಡಗಣ್ಣಸ್ವಾಮಿ, ವಿಜಯೇಂದ್ರ, ಬಿ.ಪಿ. ಪರಶಿವಮೂರ್ತಿ, ಮಂಜುನಾಥ, ಸುಂದ್ರಪ್ಪ, ರೇವಣ್ಣ ಮೊದಲಾದವರು ಇದ್ದರು.

ರೈತರಿಗೆ ತಿಂಗಳಿಗೆ ಕನಿಷ್ಠ 5000 ರೂ. ಪಿಂಚಣಿ ನೀಡುವ ಯೋಜನೆ ಜಾರಿಗೆ ತರಬೇಕು. ರೈತನ ಮಗನ ಮದುವೆಯಾಗುವ ವಧುವಿಗೆ ಸರ್ಕಾರಿ ಕೆಲಸದಲ್ಲಿ ಶೇ.10 ಮೀಸಲಾತಿ ನೀಡುವ ನೀತಿ ಜಾರಿಗೆ ತರಬೇಕು. ರೈತರ ಮಕ್ಕಳನ್ನು ಅಪಾಯದಿಂದ ಪಾರು ಮಾಡಬೇಕು.

- ಕುರುಬೂರು ಶಾಂತಕುಮಾರ್, ರಾಜ್ಯಾಧ್ಯಕ್ಷ, ಕಬ್ಬು ಬೆಳೆಗಾರರ ಸಂಘ

click me!