ಶಿರಾ ತಾಯಿ ಮಕ್ಕಳ ಆಸ್ಪತ್ರೆಗೆ ರಾಷ್ಟ್ರೀಯ ಮಾನ್ಯತೆ

By Kannadaprabha News  |  First Published Dec 22, 2023, 10:18 AM IST

ಲಕ್ಷ್ಯ ಕಾರ್ಯಕ್ರಮದ ರಾಷ್ಟ್ರೀಯ ಮೌಲ್ಯಮಾಪನದಲ್ಲಿ ಶಿರಾ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಶೇ. ೯೬ ರಷ್ಟು ಅಂಕಗಳನ್ನು ಪಡೆದು ರಾಷ್ಟ್ರೀಯ ಮಾನ್ಯತೆ ಪಡೆದಿದೆ ಎಂದು ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಆಡಳಿತ ವೈದ್ಯಾಕಾರಿ ಡಾ.ಡಿ.ಎಂ. ಗೌಡ ಹೇಳಿದರು.


 ಶಿರಾ :  ಲಕ್ಷ್ಯ ಕಾರ್ಯಕ್ರಮದ ರಾಷ್ಟ್ರೀಯ ಮೌಲ್ಯಮಾಪನದಲ್ಲಿ ಶಿರಾ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಶೇ. 96  ರಷ್ಟು ಅಂಕಗಳನ್ನು ಪಡೆದು ರಾಷ್ಟ್ರೀಯ ಮಾನ್ಯತೆ ಪಡೆದಿದೆ ಎಂದು ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಆಡಳಿತ ವೈದ್ಯಾಕಾರಿ ಡಾ.ಡಿ.ಎಂ. ಗೌಡ ಹೇಳಿದರು.

ಅವರು ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಶಿರಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಹೆರಿಗೆ ಕೊಠಡಿ ಮತ್ತು ಹೆರಿಗೆ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ಲಭ್ಯವಿರುವ ಆಧುನಿಕ ಚಿಕಿತ್ಸಾ ಸೌಲಭ್ಯಗಳು/ಯಂತ್ರೋಪಕರಣಗಳು, ಚಿಕಿತ್ಸಾ ಗುಣಮಟ್ಟ, ದಾಖಲಾತಿಗಳ ನಿರ್ವಹಣೆ, ಸ್ವಚ್ಛತೆ, ಘನತ್ಯಾಜ್ಯ ವಿಲೇವಾರಿ, ರೋಗಿಗಳೊಂದಿಗೆ ನಡವಳಿಕೆ, ನಿರ್ವಹಿಸಿದ ಹೆರಿಗೆಗಳ ಸಂಖ್ಯೆ ಈ ವಿಚಾರವಾಗಿ ನಡೆದ ಲಕ್ಷ್ಯ ಕಾರ್ಯಕ್ರಮದ ರಾಷ್ಟ್ರಮಟ್ಟದ ಮೌಲ್ಯಮಾಪನದ ಫಲಿತಾಂಶದಲ್ಲಿ ರಾಜ್ಯದಲ್ಲಿಯೇ ಶಿರಾ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಅತಿ ಹೆಚ್ಚು ಶೇ. 96 ರಷ್ಟು ಅಂಕಗಳನ್ನು ಪಡೆದು, ರಾಷ್ಟ್ರೀಯ ಮಾನ್ಯತೆ ಗಳಿಸಿದೆ. ಇದಕ್ಕೆ ಶ್ರಮಿಸಿದ ಆಸ್ಪತ್ರೆಯ ಎಲ್ಲಾ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರಿಗೆ, ಮಾರ್ಗದರ್ಶಕ ತಂಡಕ್ಕೆ, ಜಿಲ್ಲಾ ಮತ್ತು ರಾಜ್ಯಮಟ್ಟದ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳಿಗೆ, ಧನ್ಯವಾದ ತಿಳಿಸುತ್ತೇನೆ ಎಂದರು.

Latest Videos

undefined

ಸಾರಿಗೆ ಬಸ್ನಲ್ಲಿ ಮಗುವಿಗೆ ಜನ್ಮ ನೀಡಿದ ತಾಯಿ

ಶಹಾಪುರ(ಡಿ.16):  ಬಸ್ಸಿನಲ್ಲಿ‌ ಪ್ರಯಾಣಿಸುತ್ತಿದ್ದ ಗರ್ಭಿಣಿಗೆ ಏಕಾಏಕಿ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಮಾರ್ಗ ಮಧ್ಯೆದಲ್ಲಿಯೇ ಬಸ್ಸಿನಲ್ಲಿದ್ದ ಮಹಿಳಾ‌ ಪ್ರಯಾಣಿಕರೆ ಹೆರಿಗೆ ಮಾಡಿಸಿದ್ದಾರೆ. ಸದ್ಯ ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ. ಬಸ್ಸಿನ ಚಾಲಕ ಮತ್ತು ನಿರ್ವಾಹಕರು ಬಸ್ಸಿನಲ್ಲಿರುವ ಪುರುಷರ ಪ್ರಯಾಣಿಕರನ್ನು ಕೆಳಗಿಳಿಸಿ ಹೆರಿಗೆಗೆ ಸಹಕರಿಸಿದ್ದಾರೆ. ಇವರ ಕಾರ್ಯಕ್ಕೆ ಸಾರ್ವಜನಿಕರು ಅಭಿನಂದಿಸಿದ್ದಾರೆ.

ಪ್ರಯಾಣಿಕರನ್ನು ಕೆಳಗಿಳಿಸಿ ಹೆರಿಗೆ:

ಗರ್ಭಿಣಿಗೆ ಹೆರಿಗೆ ನೋವು ಕಾಣಿಸಿಕೊಂಡ ತಕ್ಷಣ ಚಾಲಕ ಹಾಗೂ ನಿರ್ವಾಹಕ ವಾಹನವನ್ನು ರಸ್ತೆ ಪಕ್ಕಕ್ಕೆ ನಿಲ್ಲಿಸಿ, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲಾ ಪುರುಷ ಪ್ರಯಾಣಿಕರನ್ನು ಕೆಳಗೆ ಇಳಿಸಿ, ಮಹಿಳಾ ಪ್ರಯಾಣಿಕರು ಬಸ್ಸಿನಲ್ಲಿಯೇ ಹೆರಿಗೆಯನ್ನು ಮಾಡಿಸಿದ್ದಾರೆ.

ಯಾದಗಿರಿ: ಅಕ್ಕಿ ಅಕ್ರಮದಲ್ಲಿ ಬಡಪಾಯಿಗಳು ಬಲಿಪಶು?

ಈ ಸಮಯದಲ್ಲಿ ಬಾಣಂತಿಯ ಹತ್ತಿರ ಯಾವುದೇ ಬಟ್ಟೆಗಳು ಇಲ್ಲದ ಕಾರಣ ಪುರುಷ ಪ್ರಯಾಣಿಕರೋಬ್ಬರು ತಮ್ಮ ಹೊಸ ಟಾವೆಲ್ ಕೊಟ್ಟು ಮಾನವೀಯತೆ ಮೆರೆದಿದ್ದಾರೆ. ತಕ್ಷಣ ಬಾಣಂತಿ- ಮಗುವನ್ನು ಶಹಪೂರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಣಂತಿ ಹಾಗೂ ಹೆಣ್ಣು ಮಗು ಆರೋಗ್ಯವಾಗಿದ್ದಾರೆ. ಉತ್ತರ ಪ್ರದೇಶ ಮೂಲದ, ಬಲೂನ್‌ ಮಾರಾಟಗಾರರಾದ ಅಜಯ್‌ ಹಾಗೂ ಪಿಂಕಿ ದಂಪತಿಗೆ ಈ ಮಗು ಜನಿಸಿದೆ.

ತಕ್ಷಣ ಚಾಲಕ ನೀಲಕಂಠ ಸ್ವಾಮಿ, ಕಂಡಕ್ಟರ್ ಖೆಮುನಾಯಕ್ ಪ್ರಯಾಣಿಕರಿಗೆ ಬೇರೆ ಬಸ್ಸಿನ ವ್ಯವಸ್ಥೆ ಮಾಡಿ ಕಳಿಸಿ ಬಾಣಂತಿ ಮತ್ತು ಮಗುವನ್ನು ಸರ್ಕಾರಿ ಆಸ್ಪತ್ರೆಗೆ ಬಸ್ಸಿನಲ್ಲಿ ಕರೆ ತಂದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆರಿಗೆ ವಿಷಯ ನನ್ನ ಗಮನಕ್ಕೆ ಬಂದ ತಕ್ಷಣ ಪ್ರಯಾಣಿಕರಿಗೆ ಬೇರೆ ಬಸ್ಸಿನ ವ್ಯವಸ್ಥೆ ಮಾಡಿ ಕಳಿಸಿ ತಾಯಿ ಮತ್ತು ಮಗುವನ್ನು ಸುರಕ್ಷಿತವಾಗಿ ಆಸ್ಪತ್ರೆಗೆ ದಾಖಲಿಸುವಂತೆ ತಿಳಿಸಿದ್ದೇನೆ. ಹೆರಿಗೆಗೆ ಸಹಕರಿಸಿ ಮಾನವೀಯತೆ ಮೆರೆದ ಚಾಲಕ ಮತ್ತು ನಿರ್ವಾಹಕರಿಗೆ ಹಾಗೂ ಹೆರಿಗೆ ಮಾಡಿಸಿದ ಮಹಿಳೆಯರಿಗೆ ಅಭಿನಂದನೆಗಳು ಎಂದು ಡಿಪೋ ಮ್ಯಾನೇಜರ್ ಅಕ್ಬರ್ ಹೊಟಗಿ ಹೇಳಿದರು.

ನನ್ನ ಹೆಂಡತಿಗೆ ಹೆರಿಗೆ ಬ್ಯಾನಿಯಿಂದ ನರಳುತ್ತಿದ್ದನ್ನು ನೋಡಿ ಗಾಬರಿಯಾಗಿದ್ದೆ, ಆದರೆ ಬಸ್ ಡ್ರೈವರ್ ಕಂಡಕ್ಟರ್ ಹಾಗೂ ಬಸ್ಸಿನಲ್ಲಿರುವ ಮಹಿಳೆಯರು ನನ್ನ ಹೆಂಡತಿಗೆ ಸುರಕ್ಷಿತ ಬಾಣಂತನ ಮಾಡಿದ್ದಾರೆ ಅವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಬಸ್ಸಿನಲ್ಲಿ ಹೆರಿಗೆಯಾದ ಬಾಣಂತಿ ಪಿಂಕಿಯ ಗಂಡ ಅಜಯ ತಿಳಿಸಿದರು.

click me!