ಸ್ವಾಮಿ ವಿವೇಕಾನಂದರ ಜಯಂತಿ ಅಂಗವಾಗಿ ಜನವರಿ 12 ರಿಂದ ಜನವರಿ 16 ರವರೆಗೆ ಧಾರವಾಡ- ಹುಬ್ಬಳ್ಳಿ ಮಹಾನಗರದಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಂಯುಕ್ತವಾಗಿ ರಾಷ್ಟ್ರೀಯ ಯುವಜನೋತ್ಸವ ಆಯೋಜಿಸಲಾಗಿದೆ.
ವರದಿ : ಪರಮೇಶ್ವರ ಅಂಗಡಿ ಏಷ್ಯಾನೆಟ್ ಸುವರ್ಣ ನ್ಯೂಸ್
ಧಾರವಾಡ (ಜ.2): ಸ್ವಾಮಿ ವಿವೇಕಾನಂದರ ಜಯಂತಿ ಅಂಗವಾಗಿ ಜನವರಿ 12 ರಿಂದ ಜನವರಿ 16 ರವರೆಗೆ ಧಾರವಾಡ- ಹುಬ್ಬಳ್ಳಿ ಮಹಾನಗರದಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಂಯುಕ್ತವಾಗಿ ರಾಷ್ಟ್ರೀಯ ಯುವಜನೋತ್ಸವ ಆಯೋಜಸಲಾಗಿದೆ. ಭಾರತದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರು ಯುವಜನೋತ್ಸವವನ್ನು ಉದ್ಘಾಟಿಸಲಿದ್ದಾರೆ. ಜನವರಿ 12 ರಿಂದ 16 ರವರೆಗೆ ನಡೆಯಲಿರುವ ರಾಷ್ಟ್ರೀಯ ಯುವಜನೋತ್ಸವದಲ್ಲಿ ವಿವಿಧ ರಾಜ್ಯಗಳ ಸುಮಾರು 7,500 ಕ್ಕೂ ಹೆಚ್ಚು ಜನ ಪ್ರತಿನಿಧಿಗಳು, ಆಯಾ ರಾಜ್ಯಗಳ ಸಾಂಸ್ಕೃತಿಕ ರಾಯಭಾರಿಗಳು ಭಾಗವಹಿಸಿ, ತಮ್ಮ ಕಲೆ, ಸಂಸ್ಕೃತಿ ಗಳನ್ನು ಬಿಂಬಿಸಲಿದ್ದಾರೆ ರಾಷ್ಟ್ರೀಯ ಯುವಜನೋತ್ಸವದಲ್ಲಿ ಆಹಾರ ಮೇಳ ಆಯೋಜಿಸಿದ್ದು, ವಿವಿಧ ರಾಜ್ಯಗಳ ಆಹಾರ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳವೂ ನಡೆಯಲಿದೆ.
undefined
ಇದರಿಂದ ಪ್ರಧಾನಿ ಮೋದಿ ಅವರು ಧಾರವಾಡ ಜಿಲ್ಲೆಗೆ ಬರ್ತಾ ಇರೋ ಹಿನ್ನಲೆಯಿಂದ ಧಾರವಾಡದಲ್ಲಿ ಒಂದು ಕೋಟಿಗೂ ಅಧಿಕ ಹಣವನ್ನ ಖರ್ಚು ಮಾಡಿ ಎಲ್ಲೆಲ್ಲಿ ರಸ್ತೆ ಗುಂಡಿಗಳು ಬಿದ್ದಿವೆ ಅಲ್ಲಿ ರಸ್ತೆಗಳನ್ನು ತೇಪೆ ಹಚ್ಚುವ ಕೆಲಸವನ್ನ ಮಾಡುತ್ತಿದೆ ಜಿಲ್ಲಾಡಳಿತ..ಕಳೆದ ಒಂದು ವರ್ಷದಿಂದ ಗುಂಡಿಮಯ ವಾಗಿದ್ದ ರಸ್ತೆಗಳನ್ನ ಹಗಲು ರಾತ್ರಿ ಅನ್ನದೆ ರಸ್ತೆ ಸುಧಾರಣೆ ಮಾಡುವ ಕೆಲಸವನ್ನ ಮಾಡುತ್ತಿದೆ ಜಿಲ್ಲಾಡಳಿತ ಒಂದು ವರ್ಷದಿಂದ ಗುಂಡಿ ಬಿದ್ದಿದ್ರು ಮುಚ್ಚದ ಜಿಲ್ಲಾಡಳಿತ ಸದ್ಯ ಗುಂಡಿ ಮುಚ್ಚುವ ಕೆಲಸಕ್ಕೆ ಮುಂದಾಗಿದೆ...
ರಾಷ್ಟ್ರೀಯ ಯುವಜನೋತ್ಸವನ್ನು ಯಶಸ್ವಿಯಾಗಿ ಸಂಘಟಿಸಲು ಮತ್ತು ರಾಷ್ಟ್ರಕ್ಕೆ ಧಾರವಾಡದ ಕಲೆ, ಸಂಸ್ಕೃತಿ, ಸಾಹಿತ್ಯ ಮತ್ತು ಆಹಾರ ಉತ್ಪನ್ನಗಳನ್ನು ಪರಿಚಯಿಸಲು ಜಿಲ್ಲಾಡಳಿತ ಸಿದ್ದತೆ ಆರಂಭಿಸಿದೆ. ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆ, ಕಾರ್ಯಕ್ರಮ, ಚಿತ್ರಕಲೆ, ಸಂಗೀತ, ನೃತ್ಯ, ಹಾಡು, ಯುವ ಸಮಾವೇಶ ಮುಂತಾದವುಗಳ ಆಯೋಜನೆಗೆ ಧಾರವಾಡ ನಗರದಲ್ಲಿ ವಿವಿಧ ಸ್ಥಳಗಳನ್ನು ಜಿಲ್ಲಾಡಳಿತ ಗುರುತಿಸಿದೆ ಎಂದು ಸಚಿವರು ಜಿಲ್ಲಾ ಉಸ್ತುವಾರಿ ಸಚಿವ ಆಚಾರ್ಯ ಹಾಲಪ್ಪ ಹೇಳಿದ್ದಾರೆ.
ರಾಷ್ಟ್ರೀಯ ಭಾವೈಕ್ಯದ ಸಂಕೇತವಾಗಿ ಧಾರವಾಡದಲ್ಲಿ ರಾಷ್ಟ್ರೀಯ ಯುವಜನೋತ್ಸವ ಆಯೋಜನೆ
ಪ್ರತಿ ದಿನ ಸಂಜೆ 6 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಕೆಸಿಡಿ ಮುಖ್ಯಕಟ್ಟಡದ ಮುಂಭಾಗದಲ್ಲಿ ಯುವಜನೋತ್ಸವದ ನಿಮಿತ್ಯ ವಿವಿಧ ರೀತಿಯ ಸಾಂಸ್ಕೃತಿಕ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ ಹೊರ ರಾಜ್ಯಗಳಿಂದ ಆಗಮಿಸುವ ಸ್ಫರ್ಧಾಳುಗಳಿಗೆ ಕರ್ನಾಟಕ ವಿಶ್ವವಿದ್ಯಾಲಯ, ಕೃಷಿ ವಿಶ್ವವಿದ್ಯಾಲಯ ಮತ್ತು ವಿವಿಧ ವಸತಿನಿಲಯಗಳನ್ನು ವಸತಿಗಾಗಿ ಗುರುತಿಸಲಾಗಿದೆ. ಕೆಎಸ್ಆರ್ ಟಿಸಿ, ಜಿಲ್ಲಾಡಳಿತದಿಂದ ಸಮರ್ಪಕ ಸಾರಿಗೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಸಚಿವರು ಹೇಳಿದರು.
Dharwad: ಜ.12ರಂದು ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರಧಾನಿ ಮೋದಿ ಚಾಲನೆ: ಜಿಲ್ಲಾಧಿಕಾರಿ ಗುರುದತ್ತ
ರಾಜ್ಯ ಸರಕಾರದ ಮಂತ್ರಿಗಳ, ಹಿರಿಯ ಅಧಿಕಾರಿಗಳ ಮತ್ತು ಜಿಲ್ಲೆಯ ಜನಪ್ರತಿನಿಧಿಗಳ ಸಮನ್ವಯ ಮತ್ತು ಮಾರ್ಗದರ್ಶನದಲ್ಲಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರ ನೇತೃತ್ವದಲ್ಲಿ ಜಿಲ್ಲೆಯ ಹಿರಿಯ ಅಧಿಕಾರಿಗಳ ವಿವಿಧ ಸಮಿತಿಗಳನ್ನು ರಚಿಸಿ ಕಾರ್ಯ ಹಂಚಿಕೆ ಮಾಡಲಾಗಿದೆ. ವಸತಿ, ಸಾರಿಗೆ,ವೇದಿಕೆ, ಸಾಂಸ್ಕೃತಿಕ, ಸ್ವಾಗತ, ಆಹಾರ ಹೀಗೆ ಅಗತ್ಯ ಸಮಿತಿಗಳನ್ನು ಮಾಡಿಕೊಂಡು, ಅಧಿಕಾರಿಗಳು ಈಗಾಗಲೇ ಸಿದ್ದತೆ ಆರಂಭಿಸಿದ್ದಾರೆ. ಮುಂದಿನ ಎರಡುಮೂರು ದಿನಗಳಲ್ಲಿ ಕಾರ್ಯಕ್ರಮ ಉದ್ಘಾಟನೆ ಸ್ಥಳ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುವ ಸ್ಥಳ ಅಂತಿಮಗೊಳಿಸಲಾಗುವುದು.