ಇಂದು ಭಾರತ ಜಗತ್ತಿನಲ್ಲೇ ಗುರುತಿಸಿಕೊಂಡಿದೆ. ಪ್ರಪಂಚದ ಸಮಸ್ಯೆಗಳಿಗೆ ಭಾರತದಲ್ಲಿ ಉತ್ತರ ಸಿಗುತ್ತದೆ ಎಂದು ತಿಳಿಯುವ ಕಾಲದವರೆಗೆ ಭಾರತ ಬೆಳೆದಿದೆ. ರಾಷ್ಟ್ರ ಭಕ್ತಿ, ರಾಷ್ಟ್ರ ಪ್ರೇಮ ಯುವ ಜನತೆಯ ಧ್ಯೇಯವಾಗಿರಲಿ ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.
ಸುಬ್ರಹ್ಮಣ್ಯ (ಜ.19) : ಇಂದು ಭಾರತ ಜಗತ್ತಿನಲ್ಲೇ ಗುರುತಿಸಿಕೊಂಡಿದೆ. ಪ್ರಪಂಚದ ಸಮಸ್ಯೆಗಳಿಗೆ ಭಾರತದಲ್ಲಿ ಉತ್ತರ ಸಿಗುತ್ತದೆ ಎಂದು ತಿಳಿಯುವ ಕಾಲದವರೆಗೆ ಭಾರತ ಬೆಳೆದಿದೆ. ರಾಷ್ಟ್ರ ಭಕ್ತಿ, ರಾಷ್ಟ್ರ ಪ್ರೇಮ ಯುವ ಜನತೆಯ ಧ್ಯೇಯವಾಗಿರಲಿ ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.
ಅವರು ಬುಧವಾರ ಸುಬ್ರಹ್ಮಣ್ಯದ ವಲ್ಲೀಶಾ ಸಭಾಭವನದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿ.ಪಂ., ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದ.ಕ.ಜಿಲ್ಲೆ, ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾಲಯ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ ಮಂಗಳೂರು ವತಿಯಿಂದ ವ್ಯವಸ್ಥಾಪನಾ ಸಮಿತಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಸಹಕಾರದೊಂದಿಗೆ ಯುವ ಸಮ್ಮೇಳನ ಮತ್ತು ತರಬೇತಿ ಕಾರ್ಯಾಗಾರ ಹಾಗೂ ರಾಜ್ಯ ಯುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸರ್ಕಾರಿ ಶಾಲೆ ಉಳಿಸಿ, ಬೆಳೆಸುವ ಕೆಲಸ ಆಗಬೇಕು: ಪ್ರಿಯಾಂಕ ಉಪೇಂದ್ರ
ಅಧ್ಯಕ್ಷತೆ ವಹಿಸಿದ್ದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಮಾತನಾಡಿ, ಸಂಘ, ಸಂಘಟನೆಗಳು ತಮ್ಮ ವಿಚಾರಗಳ ಉದ್ದೇಶ ಇಟ್ಟುಕೊಂಡು ಮುಂದುವರಿದಲ್ಲಿ ಗುರಿ ಮುಟ್ಟಲು ಸಾಧ್ಯ. ಸ್ವಾಮಿ ವಿವೇಕಾನಂದರ ಜೀವನ ನಮ್ಮ ಉಳಿವಿಗೆ ಸಹಕಾರಿ ಎಂದರು.
ಪ್ರಶಸ್ತಿ ಪ್ರದಾನ:
ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಮಾಡಲಾಯಿತು. ಜಿಲ್ಲೆಗೆ ಒಂದರಂತೆ ರಾಜ್ಯದ ಎಲ್ಲ ಜಿಲ್ಲೆಗಳಿಗೆ ಯುವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಯುವಕ ಮಂಡಲಗಳಿಗೆ ಸಾಂಘಿಕ ಪ್ರಶಸ್ತಿ ಪ್ರದಾನ ಮಾಡಲಾಯಿತು.
Teacher Recruitment: ಫೆಬ್ರವರಿಯಲ್ಲಿ 2,500 ಪ್ರೌಢಶಾಲಾ ಶಿಕ್ಷಕರ ನೇಮಕಾತಿ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್
ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ರಾಜ್ಯಾಧ್ಯಕ್ಷ ಡಾ. ಎಸ್. ಬಾಲಾಜಿ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಸದಸ್ಯ ಮನೋಹರ ರೈ, ಸುಬ್ರಹ್ಮಣ್ಯ ಗ್ರಾ.ಪಂ. ಅಧ್ಯಕ್ಷೆ ಲಲಿತಾ ಗುಂಡಡ್ಕ, ಸದಸ್ಯರಾದ ರಾಜೇಶ್ ಎನ್.ಎಸ್., ಗಿರೀಶ್ ಪೈಲಾಜೆ, ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು, ಸುಬ್ರಹ್ಮಣ್ಯ ಐನೆಕಿದು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಜಯಪ್ರಕಾಶ್ ಕೂಜುಗೋಡು, ಕೆ.ಎಸ್.ಎಸ್ ಕಾಲೇಜಿನ ಪ್ರಾಂಶುಪಾಲ ದಿನೇಶ್ ಪಿ.ಟಿ., ಎಸ….ಎಸ….ಪಿ.ಯು. ಕಾಲೇಜಿನ ಪ್ರಾಂಶುಪಾಲ ಸೋಮಶೇಖರ ನಾಯಕ್, ಪ್ರಮುಖರಾದ ತೇಜಸ್ವಿ ಕಡಪಲ, ಶಿವಪ್ರಸಾದ್ ಮೈಲೇರಿ, ಸೇರಿದಂತೆ ಯುವ ಜನ ಒಕ್ಕೂಟದ ಪದಾಧಿಕಾರಿಗಳು ಹಾಜರಿದ್ದರು.