Chikkamagaluru: ರಸ್ತೆ ಕಾಮಗಾರಿಗೆ ಅಧಿಕಾರಿಗಳ ನಿರ್ಲಕ್ಷ್ಯ: ಪ್ರತಿಭಟನೆಗೆ ಮಡ್ಡಿಕೆರೆ ಗ್ರಾಮಸ್ಥರು ಸಜ್ಜು

By Govindaraj S  |  First Published Jan 11, 2023, 11:33 PM IST

ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಡ್ಡಿಕೆರೆ ಗ್ರಾಮದ ಗ್ರಾಮಸ್ಥರು ರಸ್ತೆ ನಿರ್ಮಾಣಕ್ಕೆ ನಿರ್ಲಕ್ಷ್ಯ ವಹಿಸುತ್ತಿರುವ ಅಧಿಕಾರಿಗಳು ಮತ್ತು ಗುತ್ತಿಗೆದಾರರ ಕ್ರಮವನ್ನು ಖಂಡಿಸಿ ಪ್ರತಿಭಟನೆಗೆ ಸಜ್ಜಾಗಿದ್ದಾರೆ. 


ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು 

ಚಿಕ್ಕಮಗಳೂರು (ಜ.11): ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಡ್ಡಿಕೆರೆ ಗ್ರಾಮದ ಗ್ರಾಮಸ್ಥರು ರಸ್ತೆ ನಿರ್ಮಾಣಕ್ಕೆ ನಿರ್ಲಕ್ಷ್ಯ ವಹಿಸುತ್ತಿರುವ ಅಧಿಕಾರಿಗಳು ಮತ್ತು ಗುತ್ತಿಗೆದಾರರ ಕ್ರಮವನ್ನು ಖಂಡಿಸಿ ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಮಡ್ಡೀಕೆರೆ ಗ್ರಾಮದಲ್ಲಿ ಸುಮಾರು 80 ಕುಟುಂಬಗಳು ವಾಸವಾಗಿದ್ದು  ಸುಮಾರು 1 ಕಿ.ಮೀ. ರಸ್ತೆಯ ಕಾಂಕ್ರಿಟ್ ಕಾಮಗಾರಿಗೆ 50ಲಕ್ಷ ಅನುದಾನ ಬಿಡುಗಡೆಯಾಗಿದೆ ಆದರೆ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಕಾಮಗಾರಿ ಮುಂದುವರಿಸಲು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

Tap to resize

Latest Videos

ಅನುದಾನವಿದ್ದರೂ ಕಾಮಗಾರಿ ಇಲ್ಲ: ಮೂಡಿಗೆರೆ ಹೊಸಕೆರೆ ಮುಖ್ಯರಸ್ತೆಯಿಂದ ಮಡ್ಡಿಕೆರೆ ಗ್ರಾಮಕ್ಕೆ ತೆರಳುವ ರಸ್ತೆಯ ಡಾಂಬಾರಿಕರಣಕ್ಕೆ ಗ್ರಾಮಾಭಿವೃದ್ಧಿ ಯೋಜನೆಯಡಿ ಅನುದಾನ ಮಂಜೂರಾಗಿದ್ದು, ಸದರಿ ಕಾಮಗಾರಿಯ ಟೆಂಡರ್ ಕೂಡ ಆಗಿದೆ. ಕಳೆದ ಡಿಸೆಂಬರ್ 10ರಂದು ಕಾಮಗಾರಿಯನ್ನು ಪ್ರಾರಂಭಿಸಿ ಈಗ ಕಾಮಗಾರಿಯನ್ನು ಮಾಡಲು ಅಧಿಕಾರಿಗಳು ,ಗುತ್ತಿಗೆದಾರರು ಹಿಂದೇಟು ಹಾಕುತ್ತಿದ್ದಾರೆ. ಈ ಬಗ್ಗೆ ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯಪಾಲಕ ಅಭಿಯಂತರರು ಮತ್ತು ಕ್ಷೇತ್ರದ ಶಾಸಕರಿಗೆ ಮನವಿ ಮಾಡಿದರೂ ಕಾಮಗಾರಿ ಮುಂದುವರಿಸಲು ಕ್ರಮ ಕೈಗೊಳ್ಳುತ್ತಿಲ್ಲ. 

ಪ್ರಧಾನಿ ಮೋದಿಗಾಗಿ ವಿಶೇಷ ಕಲಾಕೃತಿ ತಯಾರಿಸಿದ ಧಾರವಾಡದ ಯುವ ಕಲಾವಿದ

ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿರುವ ಗ್ರಾಮಸ್ಥರು ಮೂಡಿಗೆರೆ ಜಿಲ್ಲಾ ಪಂಚಾಯಿತಿ ಇಂಜಿನಿಯರ್ ಕಛೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಲಿಖಿತವಾಗಿ ಮೂಡಿಗೆರೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಜಿಲ್ಲಾ ಪಂಚಾಯಿತಿ ಇಂಜಿನಿಯರಿಂಗ್ ವಿಭಾಗ, ಮೂಡಿಗೆರೆ ತಹಸೀಲ್ದಾರ್ ಮತ್ತು ಪೊಲೀಸ್ ವೃತ್ತ ನಿರೀಕ್ಷಕರಿಗೆ ಮನವಿಯನ್ನು ಸಹ ಸಲ್ಲಿಸಿ ಎರಡು ಕಾಮಗಾರಿ ಪ್ರಾರಂಭಿಸಲು ಎರಡು ದಿನಗಳ ಗಡುವು ನೀಡಿದ್ದಾರೆ. ಕಾಮಗಾರಿ ಪ್ರಾರಂಭಿಸದೇ ಇದ್ದರೆ ಜನವರಿ 13ರಂದು ಮೂಡಿಗೆರೆ ಜಿಲ್ಲಾ ಪಂಚಾಯಿತಿ ಇಂಜಿನಿಯರ್ ಕಛೇರಿ ಎದುರು ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನು ನೀಡಿದ್ದಾರೆ.

click me!