Namma Metro Guidelines ನಮ್ಮ ಮೆಟ್ರೋ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ ಬಿಡುಗಡೆ

By Suvarna News  |  First Published Jan 12, 2022, 6:38 PM IST

*ಬೆಂಗಳೂರಿನಿಲ್ಲಿ ಕೊರೋನಾ ಸೋಂಕು ತೀವ್ರ ಹೆಚ್ಚಳ
* ಮೆಟ್ರೋ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ ಬಿಡುಗಡೆ
* ಕೋವಿಡ್ ಹರಡುವಿಕೆಯನ್ನು ನಿಯಂತ್ರಿಸಲು ಕೆಲ ಕ್ರಮಕೈಗೊಂಡ ನಮ್ಮ ಮೆಟ್ರೋ


ಬೆಂಗಳೂರು, (ಜ.12): ಸಿಲಿಕಾನ್ ಸಿಟಿ ಬೆಂಗಳೂರಿನಿಲ್ಲಿ(Bengaluru) ಕೊರೋನಾ ಸೋಂಕು (Coroanvirus) ತೀವ್ರ ಹೆಚ್ಚಳವಾಗುತ್ತಿರುವುದುರಿಂದ ನಮ್ಮ ಮೆಟ್ರೋ (Namma Metro) ರೈಲು ನಿಗಮ ನಿಯಮಿತವು ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ಕೊರೋನಾ ಭೀತಿ ಹಿನ್ನೆಲೆ ಕರ್ನಾಟಕ ಸರ್ಕಾರವು(Karnataka Government) ಕೋವಿಡ್ ಹರಡುವಿಕೆಯನ್ನು ನಿಯಂತ್ರಿಸಲು ಹೊರಡಿಸಿರುವ ಮಾರ್ಗ ಸೂಚಿಗಳ ಪ್ರಕಾರ ಇದನ್ನು ಬಿಡುಗಡೆಗೊಳಿಸಲಾಗಿದ್ದು, ಮೆಟ್ರೋ ಯಾಣಿಕರಿಗೆ ಹೊಸ ಮಾರ್ಗಸೂಚಿ ಈ ಕೆಳಗಿನಂತಿವೆ.

Latest Videos

Coronavirus ಬೆಂಗಳೂರಿನಲ್ಲಿ ಶಾಲೆಗಳ ರಜೆ ಅವಧಿ ವಿಸ್ತರಣೆ, ಶಿಕ್ಷಣ ಇಲಾಖೆ ಆದೇಶ

* ಮೆಟ್ರೋ ರೈಲುಗಳಲ್ಲಿ ನಿಂತು ಪ್ರಯಾಣಿಸುವಂತಿಲ್ಲ. 
* ಸೀಟು ಸಾಮರ್ಥ್ಯಕ್ಕೆ ತಕ್ಕಂತೆ ಪ್ರಯಾಣಿಸಬೇಕು
*  ಸೀಟು ಭರ್ತಿಯಾದರೆ ನಂತರ ಮುಂದಿನ ರೈಲಿನಲ್ಲಿ ಪ್ರಯಾಣಿಸಬೇಕು. 
* ವೀಕೆಂಡ್‌ನಲ್ಲಿ ಪ್ರತಿ 30 ನಿಮಿಷಕ್ಕೊಂದು ರೈಲು ಪ್ರಯಾಣ ಇರಲಿದೆ. ಈ ಹಿಂದೆ ಪ್ರತಿ 20 ನಿಮಿಷಕ್ಕೊಂದು ರೈಲು ತೆರಳುತ್ತಿತ್ತು. 

ಬೆಂಗಳೂರಿನಲ್ಲಿ ಶಾಲೆ ರಜೆ ಅವಧಿ ವಿಸ್ತರಣೆ
ಕೊರೋನಾ 3ನೇ ಅಲೆ ವ್ಯಾಪಕವಾಗಿ (Corona Third wave) ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ(Bengaluru) ಜನವರಿ 31ರವರೆಗೆ ಶಾಲೆಗಳಿಗೆ ರಜೆ ವಿಸ್ತರಿಸಿ ಕರ್ನಾಟಕ ಶಿಕ್ಷಣ ಇಲಾಖೆ(Karnataka Education Department) ಆದೇಶ ಹೊರಡಿಸಿದೆ. 

ಈ ಮೊದಲು ಜನವರಿ 19ರವರೆಗೆ ಮಾತ್ರ ಶಾಲೆಗಳಿಗೆ ರಜೆ (Schools holiday) ನೀಡಲಾಗಿತ್ತು. ಆದ್ರೆ, ದಿನದಿಂದ ದಿನಕ್ಕೆ ಕೊರೋನಾ ಸೋಂಕಿನ ಪ್ರಮಾಣ ವ್ಯಾಪಕವಾಗಿ ಹೆಚ್ಚಳವಾಗುತ್ತಿದೆ. ಅದರಲ್ಲೂ ಸಿಲಿಕಾನ್ ಸಿಟಿಯಲ್ಲಿ ಸೋಂಕು ಮಿತಿ ಮೀರುತ್ತಿದೆ. ಈ ಹಿನ್ನೆಲೆಯಲ್ಲಿ ಶಾಲೆಗಳ ರಜೆ ವಿಸ್ತರಣೆ ಮಾಡಲಾಗಿದೆ.

ಇನ್ನು ಈ  ಬಗ್ಗೆ ಇಂದು(ಬುಧವಾರ) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಿಕ್ಷಣ ಸಚಿವ ನಾಗೇಶ್, ಬೆಂಗಳೂರಿನಲ್ಲಿ ಜ.31ರವರೆಗೆ 1ರಿಂದ 9ನೇ ತರಗತಿವರೆಗೆ ರಜೆ ಘೋಷಿಸಲಾಗಿದೆ. ಪ್ರಸ್ತುತ ಬೆಂಗಳೂರಿನಲ್ಲಿ 10, 11, 12ನೇ ತರಗತಿ ನಡೆಸುತ್ತಿದ್ದೇವೆ. ಗ್ರಾಮಾಂತರ ಪ್ರದೇಶದಲ್ಲಿ ಕೊರೋನಾ ಸೋಂಕು ಕಡಿಮೆಯಿದೆ. ಮಕ್ಕಳ ಶಿಕ್ಷಣದ ಮೇಲೆ ಪರಿಣಾಮ ಬೀರದಂತೆ ಸೂಕ್ತ ಕ್ರಮ ತೆಗೆದುಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು. 

ಸಂಕ್ರಾಂತಿ, ವೈಕುಂಠ ಏಕಾದಶಿ ಆಚರಣೆಗೆ ಮಾರ್ಗಸೂಚಿ ಪ್ರಕ
ಸಂಕ್ರಾಂತಿ ಮತ್ತು ವೈಕುಂಠ ಏಕಾದಶಿಗೆ ಸಂಬಂಧಪಟ್ಟಂತೆ ಸರ್ಕಾರದಿಂದ ಕಠಿಣ ನಿಯಮಗಳನ್ನು ಸೂಚಿಸಲಾಗಿದೆ. ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದಿಂದ ವಿಶೇಷ ಮಾರ್ಗಸೂಚಿ ಹೊರಡಿಸಲಾಗಿದೆ. ಅದರಂತೆ, ದೇವಾಲಯದ ಒಳ ಆವರಣದಲ್ಲಿ ಮಾತ್ರ ದೈನಂದಿನ ಪೂಜಾ ಕೈಂಕರ್ಯ ನಡೆಸಲು‌ ಅವಕಾಶ ನೀಡಲಾಗಿದೆ.

ವೈಕುಂಠ ಏಕಾದಶಿ ದಿನದಂದು ಎರಡೂ ಡೋಸ್ ಲಸಿಕೆ ಪಡೆದ 50 ಜನರಿಗೆ ಮಾತ್ರ ಒಂದು ಬಾರಿ ದೇವರ ದರ್ಶನಕ್ಕೆ ಅವಕಾಶ ನೀಡಲಾಗುವುದು. ಯಾವುದೇ ಸೇವೆ ಇತ್ಯಾದಿಗಳಿಗೆ ಅವಕಾಶವಿಲ್ಲ. ಯಾವುದೇ ಮೆರವಣಿಗೆ, ಮನರಂಜನಾ ಕಾರ್ಯಕ್ರಮ ಆಯೋಜಿಸುವಂತಿಲ್ಲ. ಬೆಂಗಳೂರಿನಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತರು, ಜಿಲ್ಲೆಗಳಲ್ಲಿ ಡಿಸಿಗಳು ಪರಿಸ್ಥಿತಿ ಅವಲೋಕಿಸಿ ಇನ್ನೂ ಹೆಚ್ಚಿನ ನಿರ್ಬಂಧ ವಿಧಿಸಬಹುದು ಎಂದು ಹೇಳಲಾಗಿದೆ.

ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ
ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಜನವರಿ 31ರ ವರೆಗೆ ಕೊವಿಡ್ ಮಾರ್ಗಸೂಚಿ ವಿಸ್ತರಣೆ ಮಾಡಲಾಗಿದೆ. ಸರ್ಕಾರ ಈ ಮೊದಲು ವಿಧಿಸಿದ್ದ ಕೊರೊನಾ ಮಾರ್ಗಸೂಚಿ ವಿಸ್ತರಣೆ ಮಾಡಿ ಆದೇಶ ನೀಡಿದೆ. ಜನವರಿ 31ರ ವರೆಗೂ ಪ್ರತಿಭಟನೆಗಳು, ಮೆರವಣಿಗೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ಶಾಲೆಗಳಿಗೆ ರಜೆ ಬಗ್ಗೆ ಆಯಾ ಜಿಲ್ಲಾಧಿಕಾರಿಗಳಿಗೆ ಹೊಣೆ ನೀಡಲಾಗಿದೆ.

click me!