ಕೋಲಾರ: ನೇಣು ಬಿಗಿದುಕೊಂಡು ನವ ದಂಪತಿ ಆತ್ಮಹತ್ಯೆ

By Suvarna News  |  First Published Jan 12, 2020, 10:03 AM IST

ದಂಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕಳೆದ 6 ತಿಂಗಳ ಹಿಂದೆಯಷ್ಟೇ ಇಬ್ಬರು ಮದುವೆಯಾಗಿದ್ದರು.


ಕೋಲಾರ(ಜ.12): ದಂಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕಳೆದ 6 ತಿಂಗಳ ಹಿಂದೆಯಷ್ಟೇ ಇಬ್ಬರು ಮದುವೆಯಾಗಿದ್ದರು. ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆಗೆ ಶರಣಾಗಿದ್ದು,

ಕೋಲಾರ ತಾಲೂಕು ‌ಕಮ್ಮಸಂದ್ರ ಗ್ರಾಮದಲ್ಲಿ ಘಟನೆ ನಡೆದಿದ್ದು, ಮೋಹನ್ ಬಾಬು(30) ಪದ್ಮ (25) ಆತ್ಮಹತ್ಯೆಗೆ ಶರಣಾದ ದಂಪತಿಗಳು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಕಳೆದ ಆರು ತಿಂಗಳ ಹಿಂದೆಯಷ್ಟೇ‌ ಮದುವೆಯಾಗಿದ್ದ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

Tap to resize

Latest Videos

2018ರಲ್ಲಿ 10 ಸಾವಿರ ವಿದ್ಯಾರ್ಥಿಗಳ ಆತ್ಮಹತ್ಯೆ!

ಪದ್ಮಾಳನ್ನು ಕುತ್ತಿಗೆ ಹಿಸುಕಿ ಕೊಂದು‌ ಮೋಹನ್ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

[ಸಮಸ್ಯೆಗಳು ಜೀವನದ ಅವಿಭಾಜ್ಯ ಅಂಗ. ಸಮಸ್ಯೆಯಿಲ್ಲದ ಮನುಷ್ಯನಿಲ್ಲ. ಯಾವುದೇ ಸಮಸ್ಯೆ ಜೀವನದ ಅಂತ್ಯವಲ್ಲ. ಆತ್ಮಹತ್ಯೆ ಆಲೋಚನೆ ಹೊಳೆದರೆ ಸರ್ಕಾರದ ಸಹಾಯವಾಣಿಗೆ ಕರೆ ಮಾಡಿ: 080 25497777 ಅಥವಾ ಆರೋಗ್ಯ ಸಹಾಯವಾಣಿ 104 ಗೆ ಕರೆ ಮಾಡಿ]

ಕಲ್ಪವೃಕ್ಷದ ಕೆಳಗೆ ಗಾಂಜಾ ಬೆಳೆ: ರೈತ ಅರೆಸ್ಟ್

click me!