ನೂತನ ರಾಷ್ಟ್ರೀಯ ಶಿಕ್ಷಣ ನೀತಿ, ಅನಾನುಕೂಲಗಳೇ ಹೆಚ್ಚು: ಮರಿತಿಬ್ಬೇಗೌಡ

Published : Jul 03, 2023, 09:36 AM IST
 ನೂತನ ರಾಷ್ಟ್ರೀಯ ಶಿಕ್ಷಣ ನೀತಿ, ಅನಾನುಕೂಲಗಳೇ ಹೆಚ್ಚು: ಮರಿತಿಬ್ಬೇಗೌಡ

ಸಾರಾಂಶ

ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ವಿದ್ಯಾರ್ಥಿಗಳು, ಶಿಕ್ಷಕರಿಗೆ ಭಾರಿ ತೊಂದರೆಯಾಗಿದ್ದು, ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಿಂದ ಅನಾನುಕೂಲಗಳೇ ಹೆಚ್ಚಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಮರಿತಿಬ್ಬೇಗೌಡ ತಿಳಿಸಿದರು.

 ಚಾಮರಾಜನಗರ : ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ವಿದ್ಯಾರ್ಥಿಗಳು, ಶಿಕ್ಷಕರಿಗೆ ಭಾರಿ ತೊಂದರೆಯಾಗಿದ್ದು, ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಿಂದ ಅನಾನುಕೂಲಗಳೇ ಹೆಚ್ಚಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಮರಿತಿಬ್ಬೇಗೌಡ ತಿಳಿಸಿದರು.

ನಗರದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ರಾಜ್ಯ ಜಿಲ್ಲಾ ಪ್ರೌಢಶಾಲಾ ಸಹಶಿಕ್ಷಕರ ಸಂಘದಿಂದ ನಡೆದ ಸಂವಾದದಲ್ಲಿ ಭಾಗವಹಿಸಿ, ಶಿಕ್ಷಕರ ಕುಂದುಕೊರತೆ ಆಲಿಸಿ ಮಾತನಾಡಿದರು.

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಿಂದ ಶಿಕ್ಷಣ ವ್ಯವಸ್ಥೆ ಬುಡಮೇಲಾಗುತ್ತದೆ. ಬಹಳಷ್ಟುವಿಜ್ಞಾನ ಕಾಲೇಜು ಮುಚ್ಚುತ್ತಿವೆæ. ಶಿಕ್ಷಕರು, ವಿದ್ಯಾರ್ಥಿಗಳಿಗೆ ಸಮನ್ವಯತೆ ಸಾಧಿಸಲು ಸಾಧ್ಯವಾಗುತ್ತಿಲ್ಲ. ಕೇಂದ್ರ ಸರ್ಕಾರ ಅನುದಾನ ನೀಡುತ್ತದೆ ಎಂಬ ಕಾರಣಕ್ಕೆ ಪ್ರಾಥಮಿಕ ಶಾಲೆಗಳಲ್ಲಿ 8ನೇ ತರಗತಿ ಆರಂಭಿಸಿ, ನಂತರ ಆ ವಿದ್ಯಾರ್ಥಿಗಳ ಪರಿಸ್ಥಿತಿ ಏನಾಗಿದೆ ಎಂಬುದು ಎಲ್ಲರಿಗೂ ತಿಳಿದಿದೆ. ಶೈಕ್ಷಣಿಕ ವ್ಯವಸ್ಥೆಯನ್ನು ಸುಧಾರಣೆ ಮಾಡುವಂತ ಉತ್ಸಾಹ ಹಾಗೂ ಶಿಕ್ಷಣ ಕ್ಷೇತ್ರದ ಬಗ್ಗೆ ಕಾಳಜಿ ಹೊಂದಿರುವವರು ಸಚಿವರಾದರೆ ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆ ಎಂದರು.

ಶಿಕ್ಷಣ ಕ್ಷೇತ್ರಕ್ಕೆ ಬಹಳಷ್ಟುಅನುದಾನ ಹರಿದು ಬರುತ್ತದೆ. ಸಮರ್ಪಕ ಬಳಕೆಯಿಂದ ಶಿಕ್ಷಕರ ಸ್ನೇಹಿಯಾಗಿ ಅವರ ಸಮಸ್ಯೆಗೆ ಸ್ಪಂದಿಸುವಂತಹ ಸುತ್ತೋಲೆಗಳು ಇಲಾಖೆಯಿಂದ ಬರಬೇಕಾಗಿದೆ. ಕಳೆದ 23 ವರ್ಷಗಳಿಂದ ನಿಮ್ಮೆಲ್ಲರ ಪ್ರತಿನಿಧಿಯಾಗಿ ಸದನದ ಒಳಗೆ ಹಾಗೂ ಹೊರಗೆ ಹೋರಾಟ ಮಾಡಿಕೊಂಡು ಬಂದಿದ್ದೇನೆ. ಎನ್‌ಪಿಎಸ್‌ ಹೋಗಿ ಓಪಿಎಸ್‌ ಕಾಯ್ದೆ ಮರು ಜಾರಿ ಮಾಡುವಂತೆ ಒತ್ತಡ ಹಾಕುವುದರಲ್ಲಿ ನಾನು ಮೊದಲಿಗನಾಗಿದ್ದೇನೆ ಎಂದರು.

ಶಿಕ್ಷಕರ ಸಮಸ್ಯೆಗಳ ಬಗ್ಗೆ ನೂತನ ಶಿಕ್ಷಣ ಸಚಿವರಾಗಿರುವ ಮಧು ಬಂಗಾರಪ್ಪ ಉತ್ಸಾಹಿ ಯುವಕರಾಗಿದ್ದು, ಅವರೊಂದಿಗೆ ಚರ್ಚಿಸಿ ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದರು.

ಸಂಘದ ಅಧ್ಯಕ್ಷ ವೀರಭದ್ರಸ್ವಾಮಿ, ಮಾಜಿ ಅಧ್ಯಕ್ಷ ಸಿದ್ದಮಲ್ಲಪ್ಪ ಹಾಗೂ ಶಿಕ್ಷಕರ ಸಂಘದ ಪ್ರತಿನಿಧಿಗಳು ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಂಘದ ಜಿಲ್ಲಾಧ್ಯಕ್ಷ ವೀರಭದ್ರಸ್ವಾಮಿ, ನಿಕಟಪೂರ್ವ ಅಧ್ಯಕ್ಷÜ ಸಿದ್ದಮಲ್ಲಪ್ಪ, ಜಿಲ್ಲಾ ಕಾರ್ಯದರ್ಶಿ ಕಿರಣ್‌ರಾಜ್‌, ಉಪಾಧ್ಯಕ್ಷ ಶಿವಕುಮಾರ್‌, ಸಹಕಾರ್ಯದರ್ಶಿ ಗಜೇಂದ್ರ, ಸಂಘಟನಾ ಕಾರ್ಯದರ್ಶಿ ಮಹೇಶ್‌ ಕುಮಾರ್‌, ತಾಲೂಕು ಅಧ್ಯಕ್ಷ ಮಂಜುನಾಥ್‌, ಖಜಾಂಚಿ ನಿರ್ಮಲ, ನಿರ್ದೇಶಕ ಸಿದ್ದರಾಜು, ಕ್ರೀಡಾ ಕಾರ್ಯದರ್ಶಿ ಕುಮಾರ್‌, ಬಡ್ತಿ ಶಿಕ್ಷಕರ ಸಂಘದ ಅಧ್ಯಕ್ಷÜ ದುಂಡುಮಹದೇವ್‌ ಹಾಗೂ ಡಯಟ್‌ ಉಪನ್ಯಾಸಕರಾದ ಮುರುಳಿ, ಅರಸುಶೆಟ್ಟರು, ಶಿಕ್ಷಕರಾದ ನಂಜುಂಡಸ್ವಾಮಿ, ಹರವೆ ಮಹೇಶ್‌ ಸೇರಿದಂತೆ 60 ಶಿಕ್ಷಕರು ಭಾಗವಹಿಸಿದ್ದರು.

PREV
Read more Articles on
click me!

Recommended Stories

ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಮುಗಿಸಿ ಬೈಕ್‌ನಲ್ಲಿ ತೆರಳುತ್ತಿದ್ದ ಜೋಡಿಗೆ ಲಾರಿ ಡಿಕ್ಕಿ, ಸ್ಥಳದಲ್ಲೇ ಸಾವು
ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ