ಕೊರೋನಾದಿಂದ ಚೇತರಿಸಿಕೊಂಡ ಮಕ್ಕಳಲ್ಲಿ ಕಾಣಿಸಿಕೊಂಡ ಹೊಸ ರೋಗ ಲಕ್ಷಣಗಳು..!

Kannadaprabha News   | Asianet News
Published : Jul 04, 2021, 02:06 PM IST
ಕೊರೋನಾದಿಂದ ಚೇತರಿಸಿಕೊಂಡ ಮಕ್ಕಳಲ್ಲಿ ಕಾಣಿಸಿಕೊಂಡ ಹೊಸ ರೋಗ ಲಕ್ಷಣಗಳು..!

ಸಾರಾಂಶ

* ಮಕ್ಕಳಲ್ಲಿ ಕಾಣಿಸಿಕೊಂಡಿದ್ದ ‘ಮಲ್ಟಿಸಿಸ್ಟಮ್‌ ಇನ್‌ಫ್ಲೆಮೆಟೋರಿ ಸಿಂಡ್ರೋಮ್‌ ಇನ್‌ ಚಿಲ್ಡ್ರನ್‌' * ಆಸ್ಪತ್ರೆಯಲ್ಲಿ ದಾಖಲಾಗಿದ್ದ 29 ಮಕ್ಕಳ ಪೈಕಿ ಓರ್ವ ಮಗು ಸಾವು * ರೋಗ ತೀವ್ರ ಉಲ್ಬಣಗೊಂಡ ಮಕ್ಕಳು ಮಾತ್ರ ಮೃತಪಡುವ ಸಾಧ್ಯತೆ

ಬಳ್ಳಾರಿ(ಜು.04): ಕೊರೋನಾ ವೈರಸ್‌ ಕಾಣಿಸಿಕೊಂಡು ಗುಣಮುಖವಾದ ಮಕ್ಕಳಲ್ಲಿ ಕಾಣಿಸಿಕೊಂಡಿದ್ದ ‘ಮಲ್ಟಿಸಿಸ್ಟಮ್‌ ಇನ್‌ಫ್ಲೆಮೆಟೋರಿ ಸಿಂಡ್ರೋಮ್‌ ಇನ್‌ ಚಿಲ್ಡ್ರನ್‌’ (mis-c) ಹಾಗೂ ANEC ಎನ್ನುವ ಕಾಯಿಲೆಯಿಂದಾಗಿ ಇಲ್ಲಿನ ವಿಮ್ಸ್‌ ಆಸ್ಪತ್ರೆಯಲ್ಲಿ ದಾಖಲಾಗಿದ್ದ 29 ಮಕ್ಕಳ ಪೈಕಿ ಓರ್ವ ಮಗು ಮೃತಪಟ್ಟಿದ್ದು, ಮೂವರು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ 25 ಮಕ್ಕಳು ಗುಣಮುಖರಾಗಿದ್ದಾರೆ.

ಜ್ವರ, ವಾಂತಿ- ಭೇದಿ, ಕೈಕಾಲು ಊತ, ಜೋರಾಗಿ ಉಸಿರಾಡುವುದು, ತುಟಿ-ನಾಲಿಗೆ ಕೆಂಪಾಗುವುದು ಈ ರೋಗದ ಲಕ್ಷಣವಾಗಿದೆ. ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು ಹೇಳುವ ಪ್ರಕಾರ ಈ ಕಾಯಿಲೆ ನಿನ್ನೆ- ಮೊನ್ನೆ ಕಾಣಿಸಿಕೊಂಡ ಕಾಯಿಲೆ ಅಲ್ಲ. ಕೊರೋನಾ ವೈರಸ್‌ನಿಂದ ಬಳಲಿ, ಗುಣಮುಖವಾದ ಅನೇಕ ಮಕ್ಕಳಲ್ಲಿ ಇದು ಕಾಣಿಸಿಕೊಂಡಿದೆ. ರಾಜ್ಯದ ಎಲ್ಲ ಕಡೆಗಳಲ್ಲೂ ಈ ಕಾಯಿಲೆ ಇದೆ.

‘ಮಿಸ್‌- ಸಿ’ ಕಾಯಿಲೆಗೆ ರಾಜ್ಯದಲ್ಲಿ ಮೊದಲ ಬಲಿ: ಕೋವಿಡ್‌ ಗೆದ್ದ ಮಕ್ಕಳನ್ನು ಕಾಡುವ ರೋಗ!

ಮಕ್ಕಳ ವೈದ್ಯರು ಇದಕ್ಕೆ ಚಿಕಿತ್ಸೆ ನೀಡಲಿದ್ದು, ಬಳಿಕ ಮಕ್ಕಳು ಚೇತರಿಸಿಕೊಳ್ಳುತ್ತಾರೆ. ರೋಗ ತೀವ್ರ ಉಲ್ಬಣಗೊಂಡ ಮಕ್ಕಳು ಮಾತ್ರ ಮೃತಪಡುವ ಸಾಧ್ಯತೆ ಇರುತ್ತದೆ ಎನ್ನುತ್ತಾರೆ ವೈದ್ಯರು.

ಜಿಲ್ಲೆಯ 29 ಮಕ್ಕಳಲ್ಲಿ (mis-c) ಹಾಗೂ ANEC ರೋಗ ಕಾಣಿಸಿಕೊಂಡಿತ್ತು. ಓರ್ವ ಮಗು ಮಾತ್ರ ಮೃತಪಟ್ಟಿದೆ. ಇದು ಹೊಸದಾಗಿ ಕಾಣಿಸಿಕೊಂಡ ಕಾಯಿಲೆ ಅಲ್ಲ. ಎಲ್ಲ ಕಡೆಯಲ್ಲೂ ಇದೆ ಎಂದು ಬಳ್ಳಾರಿ ಡಿಎಚ್‌ಒ ಡಾ. ಜನಾರ್ದನ ತಿಳಿಸಿದ್ದಾರೆ.  
 

PREV
click me!

Recommended Stories

ಡಿಕೆಸು ಹೆಸರಿನಲ್ಲಿ ಕೋಟ್ಯಂತರ ವಂಚನೆ ಪ್ರಕರಣ.. 'ಬಂಗಾರಿ' ಕೇಸ್‌ನಲ್ಲಿ ನಟ ಧರ್ಮಗೆ ಧ್ವನಿ ಪರೀಕ್ಷೆ?
ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ