4 ದಿನ ವ್ಯಾಪಕ ಮಳೆ : ಹವಾಮಾನ ಇಲಾಖೆ ಸೂಚನೆ

By Kannadaprabha NewsFirst Published Aug 14, 2021, 7:08 AM IST
Highlights
  • ರಾಜ್ಯದ ಕರಾವಳಿಯಲ್ಲಿ ಆ.17ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ
  • ದಕ್ಷಿಣ ಒಳನಾಡಿನ ಬಹುತೇಕ ಕಡೆ ಮತ್ತು ಉತ್ತರ ಒಳನಾಡಿನ ಕೆಲವು ಕಡೆ ಮಳೆ

ಬೆಂಗಳೂರು (ಆ.14): ರಾಜ್ಯದ ಕರಾವಳಿಯಲ್ಲಿ ಆ.17ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಬಹುತೇಕ ಕಡೆ ಮತ್ತು ಉತ್ತರ ಒಳನಾಡಿನ ಕೆಲವು ಕಡೆ ಮಳೆಯಾಗುವ ಸಂಭವ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. 

ಶುಕ್ರವಾರ ನೈಋುತ್ಯ ಮುಂಗಾರು ಒಳನಾಡಿನಲ್ಲಿ ಸಾಮಾನ್ಯ ಹಾಗೂ ಕರಾವಳಿಯಲ್ಲಿ ದುರ್ಬಲವಾಗಿತ್ತು. ಆದರೆ ಕರಾವಳಿಯ ಬಹುತೇಕ ಕಡೆ ಮತ್ತು ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗಿದೆ. ವಿಜಯಪುರದ ತಾಳಿಕೋಟೆಯಲ್ಲಿ 4 ಸೆಂ.ಮೀ, ಉಡುಪಿಯ ಕೋಟ, ಉತ್ತರ ಕನ್ನಡದ ಶಿರಾಲಿ, ಹೊನ್ನಾವರ, ಕುಷ್ಟಗಿ, ತುಮರಿ, ಮೈಸೂರಿನ ಸರಗೂರು ಮತ್ತು ಕೊಪ್ಪಳದಲ್ಲಿ ತಲಾ 3 ಸೆಂ.ಮೀ. ಮಳೆಯಾಗಿದೆ.

ಆಗಸ್ಟ್‌ 11ಕ್ಕೆ ಕೊನೆಗೊಂಡ ವಾರದಲ್ಲಿ ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ ಮತ್ತು ಕೋಲಾರ ಜಿಲ್ಲೆಯಲ್ಲಿ ವಾಡಿಕೆಗಿಂತ ತುಂಬಾ ಹೆಚ್ಚು ಮಳೆಯಾಗಿದೆ.

ನಿರೀಕ್ಷೆಗಿಂತ ಅಧಿಕ ಮಳೆಯಾದರೂ ಬರದ ಛಾಯೆ..!

ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಬಳ್ಳಾರಿ, ಮಂಡ್ಯ ಮತ್ತು ತುಮಕೂರು ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಸುರಿದಿದೆ. ಉಡುಪಿ, ಉತ್ತರ ಕನ್ನಡ, ಯಾದಗಿರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಶಿವಮೊಗ್ಗದಲ್ಲಿ ವಾಡಿಕೆಯಷ್ಟುಮಳೆ ಸುರಿದಿದೆ. ದಕ್ಷಿಣ ಕನ್ನಡ, ರಾಮನಗರದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಈ ವರ್ಷದ ಮಾನ್ಸೂನ್‌ ಈವರೆಗಿನ ಸ್ಥಿತಿಗತಿಯ ಪ್ರಕಾರ ಉತ್ತರ ಒಳನಾಡಿನಲ್ಲಿ ವಾಡಿಕೆಗಿಂತ ಶೇ.34, ದಕ್ಷಿಣ ಒಳನಾಡಿನಲ್ಲಿ ಶೇ. 13ರಷ್ಟುಹೆಚ್ಚು ಮಳೆಯಾಗಿದ್ದು ಕರಾವಳಿ ಭಾಗದಲ್ಲಿ ಮಾತ್ರ ಶೇ.23ರಷ್ಟುಮಳೆಯ ಕೊರತೆಯಾಗಿದೆ.

click me!