ಮುಂದಿನ ಬಾರಿ ರಾಷ್ಟ್ರವಾದಿ ವ್ಯಕ್ತಿ ಸಿಎಂ ಆಗ್ತಾರೆ: ಈಶ್ವರಪ್ಪ

Kannadaprabha News   | Asianet News
Published : Aug 06, 2021, 08:03 AM ISTUpdated : Aug 06, 2021, 08:17 AM IST
ಮುಂದಿನ ಬಾರಿ ರಾಷ್ಟ್ರವಾದಿ ವ್ಯಕ್ತಿ ಸಿಎಂ ಆಗ್ತಾರೆ: ಈಶ್ವರಪ್ಪ

ಸಾರಾಂಶ

*  ಈವರೆಗೆ ಬಿಜೆಪಿಗೆ ಸಂಪೂರ್ಣ ಬಹುಮತ ಬಂದಿಲ್ಲ *  ಹೊರಗಿನವರ ಸಹಕಾರ ಪಡೆದುಕೊಂಡು ಸರ್ಕಾರ ರಚನೆ ಮಾಡಿದ್ದೇವೆ * ನಾನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗಬೇಕೆಂದು ಬಯಸಿದ್ದ ಬೆಂಬಲಿಗರು 

ಮೈಸೂರು(ಆ.06): ಮುಂದಿನ ಬಾರಿ ಬಿಜೆಪಿಗೆ ಸಂಪೂರ್ಣ ಬಹುಮತ ಸಿಗುತ್ತದೆ. ಆಗ ರಾಷ್ಟ್ರವಾದಿ ಮುಖ್ಯಮಂತ್ರಿಯಾಗುತ್ತಾರೆ ಎಂದು ಸಚಿವ ಕೆ.ಎಸ್‌. ಈಶ್ವರಪ್ಪ ತಿಳಿಸಿದ್ದಾರೆ.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈವರೆಗೆ ಬಿಜೆಪಿಗೆ ಸಂಪೂರ್ಣ ಬಹುಮತ ಬಂದಿಲ್ಲ. ಹೊರಗಿನವರ ಸಹಕಾರ ಪಡೆದುಕೊಂಡು ಸರ್ಕಾರ ರಚನೆ ಮಾಡಿದ್ದೇವೆ. ಮುಂದಿನ ಬಾರಿ ಬಿಜೆಪಿಗೆ ಸಂಪೂರ್ಣ ಬಹುಮತ ಸಿಗುತ್ತೆ. ಆಗ ಜಾತಿ ವಿಚಾರ ಬರೋದಿಲ್ಲ. ಮುಂದಿನ ಬಾರಿ ರಾಷ್ಟ್ರವಾದಿಯನ್ನು ಬಿಜೆಪಿ ಮುಖ್ಯಮಂತ್ರಿ ಮಾಡುತ್ತೆ. ಹಿಂದುಳಿದವರೋ ದಲಿತರೋ ಯಾರೇ ಆಗಲಿ ಒಬ್ಬ ರಾಷ್ಟ್ರವಾದಿ ಸಿಎಂ ಆಗುತ್ತಾರೆ ಎಂದು ಅವರು ಹೇಳಿದ್ದಾರೆ. 

ಈಶ್ವರಪ್ಪ ರಾಜ್ಯದಲ್ಲಿ ಈ ಇಬ್ಬರನ್ನು ಮಾತ್ರ ನಂಬುತ್ತಾರಂತೆ: ಯಾರವರು?

ಇನ್ನು ನಾನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗಬೇಕೆಂದು ಬೆಂಬಲಿಗರು ಬಯಸಿದ್ದರು. ಆದರೆ ಸಚಿವನೂ ಆಗುವುದಿಲ್ಲ ಅಂತ ಬಿಂಬಿಸಲಾಗಿತ್ತು. ಹೈಕಮಾಂಡ್‌ ನನ್ನನ್ನು ಹೇಗೆ ಪರಿಗಣಿಸಿದೆ ಅಂತ ಈಗ ಎಲ್ಲರಿಗೂ ಗೊತ್ತಾಗಿದೆ ಎಂದರು.
 

PREV
click me!

Recommended Stories

ಡಿವೈಡರ್‌ನಿಂದ ಹಾರಿ KSRTC ಬಸ್‌ಗೆ ಡಿಕ್ಕಿಯಾದ ಕಾರ್, ಮೂರು ಸಾವು ಚೆಲ್ಲಾಪಿಲ್ಲಿಯಾದ ಮೃತದೇಹಗಳು
ಸರ್ಕಾರಿ ಶಾಲೆ ಟಾಯ್ಲೆಟ್‌ ಸ್ವಚ್ಛತೆಗೆ ಉದ್ಯಮಿ ನೆರವು