ಬೆಂಗ್ಳೂರಲ್ಲಿ ಇನ್ನೂ ಎರಡು ದಿನ ಮಳೆ

Published : Jul 01, 2022, 04:30 AM IST
ಬೆಂಗ್ಳೂರಲ್ಲಿ ಇನ್ನೂ ಎರಡು ದಿನ ಮಳೆ

ಸಾರಾಂಶ

*  ಮುಂದಿನ ಎರಡು ದಿನ ಭಾಗಶಃ ಮೋಡ ಕವಿದ ವಾತಾವರಣ *  ಗುಡುಗು, ಮಿಂಚು ಸಹಿತ ಸಾಧಾರಣ ಮಳೆ *  ಗರಿಷ್ಠ ಮತ್ತು ಕನಿಷ್ಠ ಉಷ್ಣಾಂಶ ಕ್ರಮವಾಗಿ 28 ಡಿಗ್ರಿ ಸೆಲ್ಸಿಯಸ್‌ ಮತ್ತು 20 ಡಿಗ್ರಿ ಸೆಲ್ಸಿಯಸ್‌ 

ಬೆಂಗಳೂರು(ಜು.01): ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಮಳೆಯಾಗಿದ್ದು, ಮುಂದಿನ ಎರಡು ದಿನ ಮಳೆ ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ ಎರಡು ದಿನ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ. ನಗರದ ಗರಿಷ್ಠ ಮತ್ತು ಕನಿಷ್ಠ ಉಷ್ಣಾಂಶ ಕ್ರಮವಾಗಿ 28 ಡಿಗ್ರಿ ಸೆಲ್ಸಿಯಸ್‌ ಮತ್ತು 20 ಡಿಗ್ರಿ ಸೆಲ್ಸಿಯಸ್‌ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬಾರದ ಮಳೆ: ರೈತರ ಮೊಗದಲಿಲ್ಲ ಕಳೆ..!

ಗುರುವಾರ ಸಂಜೆ ನಗರದ ಮೈಸೂರು ರಸ್ತೆ, ವಿಜಯನಗರ, ಜಯನಗರ, ಸಂಪಂಗಿ ರಾಮನಗರ, ಎಂ.ಜಿ.ರಸ್ತೆ, ಮೆಜೆಸ್ಟಿಕ್‌, ಮಲ್ಲೇಶ್ವರ ಸೇರಿದಂತೆ ಹಲವೆಡೆ ಸಾಧಾರಣ ಮಳೆ ಸುರಿಯಿತು. ಇದರಿಂದ ವಾಹನ ಸಂಚಾರ ಮತ್ತು ಬೀದಿ ಬದಿ ವ್ಯಾಪಾರಿಗಳಿಗೆ ತೊಂದರೆ ಉಂಟಾಯಿತು. ಬೆಳಗ್ಗೆಯಿಂದ ನಗರದಲ್ಲಿ ಬಿಸಿಲು ಇತ್ತು. ಸಂಜೆಯಾಗುತ್ತಿದ್ದಂತೆ ಬಿಬಿಎಂಪಿ ವ್ಯಾಪ್ತಿಯ ರಾಜರಾಜೇಶ್ವರಿ ವಲಯ, ಪಶ್ಚಿಮ ವಲಯ, ಬೊಮ್ಮನಹಳ್ಳಿ ವಲಯ, ಪೂರ್ವ ವಲಯದ ಕೆಲವು ಪ್ರದೇಶಗಳು ಸೇರಿದಂತೆ ವಿವಿಧೆಡೆ ತುಂತುರು ಮಳೆ ಸುರಿಯಿತು.
 

PREV
Read more Articles on
click me!

Recommended Stories

ನನಗೆ ಎಚ್ಚರಿಕೆ ಕೊಡೋ ಮುನ್ನ ಹುಷಾರ್, ಕಾಮನ್‌ಸೆನ್ಸ್ ಇಟ್ಟುಕೊಂಡು ಡೀಲ್ ಮಾಡಿ, ಪತ್ರ ಬರೆದವನಿಗೆ ಡಿಕೆಶಿ ವಾರ್ನಿಂಗ್!
5 ಸಾವಿರ ಕೊಡ್ತೀನಿ ರೂಮ್‌ಗೆ ಬಾ ಅಂದ್ರು? ಬ್ರಹ್ಮಾನಂದ ಗುರೂಜಿಯ ವಿಡಿಯೋ ವೈರಲ್