ಹಳೇ ಹುಬ್ಬಳ್ಳಿಯ ನುರಾನಿ ಪ್ಲಾಟ್‌ನಲ್ಲಿರುವ ಎಸ್‌ಡಿಪಿಐ ಮುಖಂಡ ಇಸ್ಮಾಯಿಲ್ ನಾಲಾಬಂದ್ ಮನೆ ಮೇಲೆ ಎನ್ಐಎ ದಾಳಿ
ಹುಬ್ಬಳ್ಳಿ(ನ.05): ಹುಬ್ಬಳ್ಳಿಯಲ್ಲಿ ಇಂದು(ಶನಿವಾರ) ಬೆಳ್ಳಂ ಬೆಳಗ್ಗೆ ಎನ್ಐಎ ಅಧಿಕಾರಿಳು ಎಸ್‌ಡಿಪಿಐ ಮುಖಂಡನ ಮನೆ ಮೇಲೆ ದಾಳಿ ನಡೆಸಿದ್ದಾರೆ. ಹಳೇ ಹುಬ್ಬಳ್ಳಿಯ ನುರಾನಿ ಪ್ಲಾಟ್‌ನಲ್ಲಿರುವ ಎಸ್‌ಡಿಪಿಐ ಮುಖಂಡ ಇಸ್ಮಾಯಿಲ್ ನಾಲಾಬಂದ್ ಮನೆ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಈ ಮೂಲಕ ಎಸ್‌ಡಿಪಿಐ ಮುಖಂಡ ಇಸ್ಮಾಯಿಲ್ ನಾಲಾಬಂದ್‌ಗೆ ಬೆಳ್ಳಂ ಬೆಳಗ್ಗೆ ಎನ್ಐಎ ಭರ್ಜರಿ ಶಾಕ್ ನೀಡಿದೆ. ಹಳೇ ಹುಬ್ಬಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಭಯೋತ್ಪಾದನೆ ವಿರುದ್ಧ ಮತ್ತೆ ಸಮರ ಸಾರಿದ ಕೇಂದ್ರ ಸರ್ಕಾರ; ಜಮ್ಮು ಕಾಶ್ಮೀರದಲ್ಲಿ NIA Raid
ಬೆಳಗಿನ ಜಾವ ನಾಲ್ಕು ಗಂಟೆಗೆ ಎನ್ಐಎ ಅಧಿಕಾರಿಳು ದಾಳಿ ನಡೆಸಿದ್ದಾರೆ. ಒಟ್ಟು 10 ಜನ ಅಧಿಕಾರಿಗಳ ತಂಡದಿಂದ ದಾಳಿ ನಡೆಸಲಾಗಿದೆ. ಮನೆಯಲ್ಲಿ ಸಂಪೂರ್ಣ ಪರಿಶೀಲನೆ ನಡೆಸಿದ ಬಳಿಕ ಅಧಿಕಾರಿಗಳು ಮರಳಿದ್ದಾರೆ ಅಂತ ತಿಳಿದು ಬಂದಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಮೈಸೂರಲ್ಲೂ ಎನ್‌ಐಎ ದಾಳಿ
ಇನ್ನೂ ಮೈಸೂರಿನಲ್ಲೂ ಕೂಡ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೈಸೂರಿನ ಎನ್.ಆರ್. ಮೊಹಲ್ಲಾ, ಮಂಡಿ ಮೊಹಲ್ಲಾದಲ್ಲಿರುವ ಎಸ್‌ಡಿಪಿಐ ಕೆಲ ಕಾರ್ಯಕರ್ತರ ಮನೆಗಳ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿ ತಪಾಸಣೆ ನಡೆಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.