ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಿಗೂ ವಿಸ್ತರಣೆಯಾದ ನೈಟ್ ಕರ್ಫ್ಯೂ| ಬಳ್ಳಾರಿ ಮಹಾನಗರ ಪಾಲಿಕೆ ಹಾಗೂ ಹೊಸಪೇಟೆ ನಗರಸಭೆ ವ್ಯಾಪ್ತಿಯಲ್ಲಿ ರಾತ್ರಿ ಕರ್ಫ್ಯೂ ಜಾರಿ| ಏ.19ರಿಂದ 30ರ ವರೆಗೆ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆ ವರೆಗೆ ಈ ಕರ್ಫ್ಯೂ ಜಾರಿ|
ಬಳ್ಳಾರಿ(ಏ.19): ಬೆಂಗಳೂರು ಸೇರಿದಂತೆ ರಾಜ್ಯದ ಒಟ್ಟು ಎಂಟು ಕಡೆ ಅನುಷ್ಠಾನದಲ್ಲಿರುವ ನೈಟ್ ಕರ್ಫ್ಯೂ ಇದೀಗ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಿಗೂ ವಿಸ್ತರಣೆಯಾಗಿದೆ. ಎರಡೂ ಜಿಲ್ಲೆಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಳ್ಳಾರಿ ಮಹಾನಗರ ಪಾಲಿಕೆ ಹಾಗೂ ಹೊಸಪೇಟೆ ನಗರಸಭೆ ವ್ಯಾಪ್ತಿಯಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಿ ಜಿಲ್ಲಾಧಿಕಾರಿ ಪವನ್‌ಕುಮಾರ್ ಮಾಲಪಾಟಿ ಅವರು ಆದೇಶ ಹೊರಡಿಸಿದ್ದಾರೆ.
ಏ.19ರಿಂದ 30ರ ವರೆಗೆ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆ ವರೆಗೆ ಈ ಕರ್ಫ್ಯೂ ಜಾರಿಯಲ್ಲಿರಲಿದೆ.
ಇನ್ನಷ್ಟು ಜಿಲ್ಲೆಗೆ ಕರ್ಫ್ಯೂ ವಿಸ್ತರಣೆ : ಸಿಎಂ
ಕರ್ಫ್ಯೂ ವೇಳೆ ವೈದ್ಯಕೀಯ ವಿಚಾರವಾಗಿ ಓಡಾಟಕ್ಕೆ ಅನುಮತಿ ಇದೆ. ರಾತ್ರಿ ಪಾಳಿಯಲ್ಲಿ ಕೆಲಸ ನಿರ್ವಹಿಸುವ ವಿವಿಧ ಕಾರ್ಖಾನೆಗಳ ಕಾರ್ಮಿಕರು ಕರ್ಫ್ಯೂ ಅವಧಿ ಮುನ್ನವೇ ಕರ್ತವ್ಯಕ್ಕೆ ಹಾಜರಾಗಬೇಕು. ವೈದ್ಯಕೀಯ ಸೇವೆ ಹಾಗೂ ತುರ್ತು ಚಟುವಟಿಕೆಗಳಿಗೆ ಮಾತ್ರ ರಾತ್ರಿ ವೇಳೆ ಕಾರ್ಯಕ್ಕೆ ಅನುಮತಿಸಿದ್ದು, ಉಳಿದಂತೆ ಎಲ್ಲ ವಾಣಿಜ್ಯ ಚಟುವಟಿಕೆ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಲಾಗಿದೆ.