ರಾಮನಗರ : ಕೋವಿಡ್ ವಾರಿಯರ್ಸ್‌ಗೆ ನಿಖಿಲ್ ಕುಮಾರಸ್ವಾಮಿ ಆರ್ಥಿಕ ನೆರವು

Suvarna News   | Asianet News
Published : Jun 03, 2021, 04:16 PM ISTUpdated : Jun 03, 2021, 04:17 PM IST
ರಾಮನಗರ :  ಕೋವಿಡ್ ವಾರಿಯರ್ಸ್‌ಗೆ ನಿಖಿಲ್ ಕುಮಾರಸ್ವಾಮಿ ಆರ್ಥಿಕ ನೆರವು

ಸಾರಾಂಶ

ಕೊರೋನಾ ಸಂಕಷ್ಟದಲ್ಲಿ ಪ್ರಾಣ ಪಣಕ್ಕಿಟ್ಟು ದುಡಿಯುತ್ತಿರುವ ಆಶಾ ಕಾರ್ಯಕರ್ತರು ಆಶಾ ಕಾರ್ಯಕರ್ತರಿಗೆ ನಿಖಿಲ್ ಕುಮಾರಸ್ವಾಮಿ ಆರ್ಥಿಕ ನೆರವು  ನೆಬ್ಯುಲೈಝರ್ ಮಿಷಿನ್ ನೀಡಿದ ನಿಖಿಲ್ 

ರಾಮನಗರ (ಜೂ.03):  ಕೊರೋನಾ ಸಂಕಷ್ಟದಲ್ಲಿ ಪ್ರಾಣ ಪಣಕ್ಕಿಟ್ಟು ದುಡಿಯುತ್ತಿರುವ  ಕೋವಿಡ್ ವಾರಿಯರ್ಸ್‌ಗೆ ನಿಖಿಲ್ ಕುಮಾರಸ್ವಾಮಿ ಆರ್ಥಿಕ ನೆರವು ನೀಡಿದ್ದಾರೆ. 

ರಾಮನಗರ ಜಿಲ್ಲಾ ವೈದ್ಯಾಧಿಕಾರಿಗಳ ಕಚೇರಿ ಆವರಣದಲ್ಲಿಂದು ನಿಖಿಲ್ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸ್ಟಾಪ್ ನರ್ಸ್ ಗಳಿಗೆ ಆರ್ಥಿಕ ನೆರವು ನೀಡಿದ್ದಾರೆ.   ಜೊತೆಗೆ ನೆಬ್ಯುಲೈಝರ್ ಮಿಷಿನ್ ಸಹ ನೀಡಿದ್ದಾರೆ. 

ರಾಮನಗರಕ್ಕೆ ಆಂಬುಲೆನ್ಸ್ ಕೊಡುಗೆ : ಕೀ ಹಸ್ತಾಂತರಿಸಿದ ನಿಖಿಲ್ ..

ಬಳಿಕ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ತೀವ್ರವಾಗಿದೆ. ಕಳೆದ ವರ್ಷ ಹಾಗೂ ಈ ಬಾರಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಕೊರೋನಾ ವಾರಿಯರ್ಸ್ ತಮ್ಮ ಪ್ರಾಣ ಪಣಕ್ಕಿಟ್ಟು ಲಕ್ಷಾಂತರ ಜನರ ಪ್ರಾಣ ಉಳಿಸುತ್ತಿದ್ದಾರೆ.  ಇವತ್ತು ಎಲ್ಲಾ ಕೋವಿಡ್ ವಾರಿಯರ್ಸ್ ನಿಜವಾದ  ಹೀರೋಗಳು. ನಿಮಗೆ ನಮ್ಮ ಕೈಲಾದ ಸಹಾಯ ಮಾಡಬೇಕು ಅಂತಾ ತಿಂಗಳಿಂದ ಕೊರೆಯುತ್ತಿತ್ತು, ಇವತ್ತು ಕಾಲ ಕೂಡಿ ಬಂದಿದೆ ಎಂದರು.

ಈಗಾಗಲೇ 16 ಆಶಾ ಕಾರ್ಯಕರ್ತರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಸರ್ಕಾರ ಪ್ರತೀ ಕುಟುಂಬಕ್ಕೆ 50 ಲಕ್ಷ ಪರಿಹಾರ ಕೊಡುವುದಾಗಿ ಹೇಳಿದೆ. ಆದರೆ ಇಲ್ಲಿವರೆಗೆ ಒಂದೇ ಕುಟುಂಬಕ್ಕೆ ಹಣ ಸಿಕ್ಕಿದೆ ಎಂಬುದು ಗೊತ್ತಾಗಿದೆ. ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನವನ್ನೂ ನೀಡಿಲ್ಲ ಎಂದರು.  

ತಮ್ಮ ಪ್ರಾಣ ಪಣಕ್ಕಿಟ್ಟು, ನಮ್ಮ ಪ್ರಾಣ ಉಳಿಸುವ ಕೆಲಸವನ್ನ ಕೊರೋನಾ ವಾರಿಯರ್ಸ್ ಮಾಡುತ್ತಿದ್ದಾರೆ.  ಅವರನ್ನ, ಅವರ ಕುಟುಂಬವನ್ನ ಉಳಿಸುವ ಕೆಲಸವನ್ನ ನಾವು ಮಾಡಬೇಕು.  ನಮ್ಮ ಪಕ್ಷದ ಕಡೆಯಿಂದ ನಾವು ಕೈಲಾದಷ್ಟು ಆರ್ಥಿಕ ಸಹಾಯ ಮಾಡುತ್ತಿದ್ದೇವೆ. ನೆಬ್ಯುಲೈಝರ್ ಕೊಟ್ಟಿದ್ದೇವೆ, ಮುಂದಿನ ದಿನಗಳಲ್ಲಿ ಮೆಡಿಕಲ್ ಕಿಟ್ ವಿತರಣೆ ಮಾಡುತ್ತೇವೆ.  ಕುಮಾರಣ್ಣ, ಅನಿತಾ ಕುಮಾರಸ್ವಾಮಿ ನಿರಂತರವಾಗಿ ಅಧಿಕಾರಿಗಳ ಸಂಪರ್ಕದಲ್ಲಿದ್ದಾರೆ.  ರಾಮನಗರ, ಚನ್ನಪಟ್ಟಣ ಎರಡು ಕಣ್ಣುಗಳಿದ್ದಂತೆ. ಚನ್ನಪಟ್ಟಣದಲ್ಲೂ ಕೂಡ ಆಶಾ ಕಾರ್ಯಕರ್ತೆಯರಿಗೆ ಆರ್ಥಿಕ ನೆರವು ನೀಡುತ್ತೇವೆ ಎಂದರು. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

PREV
click me!

Recommended Stories

ಸಾಲುಮರದ ತಿಮ್ಮಕ್ಕ ಹೆಸರಲ್ಲಿ ಪ್ರತಿ ವರ್ಷ ಪ್ರಶಸ್ತಿ ಪ್ರದಾನ: ಸಿಎಂ ಸಿದ್ದರಾಮಯ್ಯ
ಹಿಂದೂ, ಧರ್ಮವೇ ಅಲ್ಲ, ಅದೊಂದು ಬೈಗುಳ ಶಬ್ದ : ಬಿ.ಜಿ ಕೋಳ್ಸೆ