ರಾಮನಗರ ಜಿಲ್ಲೆ ಬದಲಾವಣೆ ಹಿಂದೆ ತಷ್ಟೀಕರಣ ಅಜೆಂಡಾ: ನಿಖಿಲ್ ಕುಮಾರಸ್ವಾಮಿ

By Kannadaprabha News  |  First Published Jul 10, 2024, 4:30 AM IST

ಪುರಾಣ ಪ್ರಸಿದ್ಧ ರಾಮನಗರ ಹೆಸರನ್ನು ಕಿತ್ತುಹಾಕಿ, ಅದನ್ನು ಬೆಂಗಳೂರು ದಕ್ಷಿಣ ಎಂದು ಮಾಡುವುದರಲ್ಲಿ ಯಾವ ಹಿಡೆನ್ ಅಜೆಂಡಾ ಅಡಗಿದೆಯೋ ಗೊತ್ತಿಲ್ಲ. ಆದರೆ, ಯಾರನ್ನು ಓಲೈಸಲು ರಾಮನಗರ ಹೆಸರಿಗೆ ಗೇಟ್ ಪಾಸ್ ನೀಡಲಾಗುತ್ತಿದೆ ಎನ್ನುವ ಒಳಗುಟ್ಟು ಮಾತ್ರ ರಟ್ಟಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಬದಲಿಸುವುದಕ್ಕೆ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ 
 


ರಾಮನಗರ(ಜು.10): ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಹೆಸರು ಬದಲಿಸುವುದಕ್ಕೆ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ.  ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ಕೇವಲ ಕೆಲವರನ್ನು ತುಷ್ಟೀಕರಣ ಮಾಡಲಿಕ್ಕೆ ಮಾತ್ರ ರಾಮನಗರ ಹೆಸರನ್ನು ಬದಲಾವಣೆ ಮಾಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಪುರಾಣ ಪ್ರಸಿದ್ಧ ರಾಮನಗರ ಹೆಸರನ್ನು ಕಿತ್ತುಹಾಕಿ, ಅದನ್ನು ಬೆಂಗಳೂರು ದಕ್ಷಿಣ ಎಂದು ಮಾಡುವುದರಲ್ಲಿ ಯಾವ ಹಿಡೆನ್ ಅಜೆಂಡಾ ಅಡಗಿದೆಯೋ ಗೊತ್ತಿಲ್ಲ. ಆದರೆ, ಯಾರನ್ನು ಓಲೈಸಲು ರಾಮನಗರ ಹೆಸರಿಗೆ ಗೇಟ್ ಪಾಸ್ನೀ ಡಲಾಗುತ್ತಿದೆ ಎನ್ನುವ ಒಳಗುಟ್ಟು ಮಾತ್ರ ರಟ್ಟಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

Tap to resize

Latest Videos

ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ; ಡಿಕೆಶಿ ನಿಯೋಗದಿಂದ ಸಿಎಂಗೆ ಪತ್ರ

ರಿಯಲ್ ಎಸ್ಟೇಟ್ ದಂಧೆಕೋರರಿಗೆ ಜಿಲ್ಲೆಯನ್ನು ಸ್ವರ್ಗವನ್ನಾಗಿ ಮಾಡುವುದು ಈ ಷಡ್ಯಂತ್ರ್ಯದ ಕರಾಳಮುಖ. ಕೆಲವರ ತುಷ್ಟೀಕರಣ ಮತ್ತೊಂದು ಮುಖ. ರಾಜಕೀಯವಾಗಿ ಬಹಳ ಎತ್ತರದ ಸ್ಥಾನದಲ್ಲಿರುವ ರಾಮನಗರ ಜಿಲ್ಲೆಯ ಹೆಗ್ಗುರುತನ್ನೇ ಸರ್ವನಾಶ ಮಾಡುವ ಹುನ್ನಾರ ನಡೆದಿದೆ ಎಂದು ಕಟುವಾಗಿ ಟೀಕಿಸಿದ್ದಾರೆ. 

ವಿಧಾನಸೌಧದ ಶಿಲ್ಪಿ ಕೆಂಗಲ್ ಹನುಮಂತಯ್ಯನವರು, ಈ ದೇಶದ ಪ್ರಧಾನಿಗಳಾಗಿದ್ದ ಎಚ್.ಡಿ.ದೇವೇಗೌಡರು, ಎರಡು ಬಾರಿ ರಾಜ್ಯ ಮುಖ್ಯಮಂತ್ರಿಗಳಾಗಿದ್ದ ಕುಮಾರಸ್ವಾಮಿ ಅವರು ರಾಮನಗರ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದರು. ಜಿಲ್ಲೆಯ ಹೆಸರು ಬದಲಿಸಲು ಹೊರಟವರು ಮೊದಲು ಈ ಇತಿಹಾಸ ಅರಿತರೆ ಒಳ್ಳೆಯದು. ನಮ್ಮ ರಾಮನಗರ ನಮ್ಮ ಹೆಮ್ಮೆ ಎಂದು ನಿಖಿಲ್ ಹೇಳಿದ್ದಾರೆ.

click me!