ಬಿಜೆಪಿ ಸಂಸದ ಪ್ರತಾಪ್ ಸಿಂಹ ಹಾಗೂ ಸುಮಲತಾ ನಡುವಿನ ವಾರ್ ಬಗ್ಗೆ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ
ಮಂಡ್ಯ (ನ.18): ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಕೂಟಕ್ಕೆ ಶಾಸಕ ಸಿ.ಎಸ್. ಪುಟ್ಟರಾಜು ಅವರ ನೇತೃತ್ವದಲ್ಲಿ ಗೆಲುವು ಸಿಕ್ಕಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ಕುರಿತಂತೆ ಪ್ರತಿಕ್ರಿಯೆ ನೀಡಿದ ಅವರು, ಜಿಲ್ಲೆಯ ಅಭಿವೃದ್ಧಿಗಾಗಿ ಬಿಜೆಪಿ ಜೊತೆ ಜೆಡಿಎಸ್ ಕೈಜೋಡಿಸಿದೆ. ಮೈತ್ರಿಗೆ ಸಹಕರಿಸಿದ ಸಿಎಂ ಯಡಿಯೂರಪ್ಪ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ. ನಾನು ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರೆಯಲಿದೆ ಎಂದು ಹೇಳಿದರು.
ಜೆಡಿಎಸ್-ಬಿಜೆಪಿ ಮೈತ್ರಿ ಸಕ್ಸಸ್: ಫಲ ನೀಡಿದ ಕುಮಾರಸ್ವಾಮಿ, ಬಿಎಸ್‌ವೈ ಭೇಟಿ..!
ಸಂಸದೆ ಸುಮಲತಾ ಹಾಗೂ ಸಂಸದ ಪ್ರತಾಪ್ ಸಿಂಹ ನಡುವಿನ ಆರೋಪ-ಪ್ರತ್ಯಾರೋಪ ಅವರ ವೈಯಕ್ತಿಕ ವಿಚಾರ. ಇದರಲ್ಲಿ ನಾನು ಮಧ್ಯಪ್ರವೇಶಿಸುವುದಿಲ್ಲ ರಾಮನಗರದಿಂದ ಪಕ್ಷ ಸಂಘಟನೆ ಆರಂಭಿಸಿ ಎಲ್ಲಾ ಜಿಲ್ಲೆಗಳಲ್ಲೂ ಮುಂದುವರೆಸುತ್ತೇನೆ ಎಂದು ಹೇಳಿದರು.