ನಿಖಿಲ್‌ ಕುಮಾರಸ್ವಾಮಿಗೆ ಹೊಸ ಜವಾಬ್ದಾರಿ : ಹೆಚ್ಚಾಗುತ್ತಿದೆ ಹೊಣೆಗಾರಿಕೆ

By Kannadaprabha News  |  First Published Dec 10, 2020, 7:38 AM IST

ನಿಖಿಲ್ ಕುಮಾರಸ್ವಾಮಿಗೆ ಇದೀಗ ಹೊಸ ಜವಾಬ್ದಾರಿ ವಹಿಸಲು ಮುಖ್ಯಮಂತ್ರಿ ಕುಮಾರಸ್ವಾಮಿ ಸಜ್ಜಾಗಿದ್ದಾರೆ. 


ಕೋಲಾರ (ಡಿ.10): ಮುಂದಿನ ದಿನಗಳಲ್ಲಿ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಪಕ್ಷ ಸಂಘಟನೆಯ ಹೊಣೆಗಾರಿಕೆಯನ್ನು ಪುತ್ರ ನಿಖಿಲ್‌ ಕುಮಾರಸ್ವಾಮಿಗೆ ವಹಿಸುವುದಾಗಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ. 

ನಗರ ಹೊರವಲಯದ ಖಾಸಗಿ ಕಲ್ಯಾಣ ಮಂಟಪದಲ್ಲಿ ಗ್ರಾಪಂ ಚುನಾವಣೆ ಸಂಬಂಧ ಬುಧವಾರ ನಡೆದ ಜೆಡಿಎಸ್‌ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ ಈ ವಿಚಾರ ತಿಳಿಸಿದರು. ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿಗೆ ಈ ಭಾಗದಲ್ಲಿ ಪಕ್ಷ ಸಂಘಟನೆಯ ಜವಾಬ್ದಾರಿ ನೀಡಲಾಗುವುದು. 

Latest Videos

undefined

' ಸೋತಿರುವ ನಿಖಿಲ್‌ಗೆ ಮಂಡ್ಯದಿಂದಲೇ ಭರ್ಜರಿ ಗೆಲುವು' ..

ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಜೆಡಿಎಸ್‌ ಬಹುಮತ ಪಡೆಯುವುದು ನನ್ನ ಕೊನೇ ಆಸೆ. ಈ ನಿಟ್ಟಿನಲ್ಲಿ ತಾಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯ್ತಿ ಚುನಾವಣೆಯಲ್ಲಿ ಬಹುಮತ ಪಡೆಯಬೇಕು. ಇಡೀ ದೇಶದಲ್ಲಿ ಇನ್ಮುಂದೆ ಕಾಂಗ್ರೆಸ್‌ ಪಕ್ಷ ಸ್ವತಂತ್ರವಾಗಿ ಅಧಿಕಾರಕ್ಕೆ ಬರುವುದಿಲ್ಲ. ನಮಗೆ ಸ್ವತಂತ್ರವಾಗಿ ಅಧಿಕಾರ ನಡೆಸಲು ಬಹುಮತ ಸಿಕ್ಕರೆ ರಾಜ್ಯದಲ್ಲಿ ಸಾಕಷ್ಟುಬದಲಾವಣೆ ಆಗಲಿದೆ ಎಂದರು ತಿಳಿಸಿದರು.

click me!