ಹೊಸ ಸುಳಿವು ನೀಡಿದ ನಿಖಿಲ್ ಕುಮಾರಸ್ವಾಮಿ

By Kannadaprabha News  |  First Published Dec 3, 2020, 1:36 PM IST

ಮುಂದಿನ ರಾಜಕೀಯದ ಬಗ್ಗೆ ಜೆಡಿಎಸ್ ಯೂತ್ ಲೀಡರ್ ನಿಖಿಲ್ ಕುಮಾರಸ್ವಾಮಿ ಹೊಸ ಸುಳಿವೊಂದನ್ನು ನೀಡಿದ್ದಾರೆ. ಏನದು ನಿಖಿಲ್ ಮುಂದಿನ ರಾಜಕೀಯ ಸುಳಿವು..? 


 ಮದ್ದೂರು (ಡಿ.03):   ಪ್ರಸಕ್ತ ಗ್ರಾಪಂ ಚುನಾವಣೆಯಲ್ಲಿ ಜೆಡಿಎಸ್‌ ಯಾವುದೇ ರಾಜಕೀಯ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳದೆ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಬುಧವಾರ ಹೇಳಿದರು.

ಪಟ್ಟಣದ ಸಂಜಯ ಚಿತ್ರಮಂದಿರದ ಬಳಿ ಜೆಡಿಎಸ್‌ ಮುಖಂಡ ದೇವರಹಳ್ಳಿ ವೆಂಕಟೇಶ್‌ ಮಾಲೀಕತ್ವದ ಶೀಮತಿ ಸಿಲ್‌್ಕ ಕೇಂದ್ರವನ್ನು ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

Latest Videos

undefined

ಗ್ರಾಪಂ ಚುನಾವಣೆ ಜೆಡಿಎಸ್‌ ಪಕ್ಷಕ್ಕೆ ಪ್ರತಿಷ್ಟೆಯ ಚುನಾವಣೆಯಾಗಿದೆ. ಇದರಿಂದ ಪಕ್ಷವನ್ನು ಬೇರುಮಟ್ಟದಿಂದ ಸದೃಢಗೊಳಿಸಲು ಸಾಧ್ಯವಾಗುತ್ತದೆ. ಹೀಗಾಗಿ ಚುನಾವಣೆಯಲ್ಲಿ ಜೆಡಿಎಸ್‌ ಕಾಂಗ್ರೆಸ್‌ ಅಥವಾ ಬಿಜೆಪಿ ಸೇರಿದಂತೆ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳದೆ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ತೀರ್ಮಾನಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

'2023ಕ್ಕೆ ಎಚ್‌ಡಿಕೆ ರಾಜ್ಯದ ಮುಖ್ಯಮಂತ್ರಿ' ...

ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದಿಂದ ಅಸಂಖ್ಯಾತ ಮಂದಿ ಆಕಾಕ್ಷಿಂತರು ಇದ್ದಾರೆ. ಇವರಲ್ಲಿ ಹೆಚ್ಚು ಮಂದಿ ಯುವಕರ ಸ್ಪರ್ಧೆಗೆ ಅವಕಾಶ ನೀಡಬೇಕೆಂಬುದು ವರಿಷ್ಠರ ಇಚ್ಚೆಯಾಗಿದೆ. ಈ ಬಗ್ಗೆ ವರಿಷ್ಠರು ಪಕ್ಷದ ಶಾಸಕರು ಹಾಗೂ ವಿವಿಧ ಘಟಕಗಳ ಅಧ್ಯಕ್ಷರು ಪದಾಧಿಕಾರಿಗಳು ಮತ್ತು ಮುಖಂಡರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.

ಚುನಾವಣೆಯಲ್ಲಿ ಸ್ಪರ್ಧಿಸಲು ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಆಕಾಂಕ್ಷಿತರೊಂದಿಗೆ ಚರ್ಚಿಸಿ ಶಾಸಕರು ಮತ್ತು ಮುಖಂಡರು ತೀರ್ಮಾನ ಕೈಗೊಂಡ ನಂತರ ಸ್ಪರ್ಧಿಗಳಿಗೆ ಶಕ್ತಿ ತುಂಬುವುದಷ್ಟೆನಮ್ಮ ಕೆಲಸವಾಗಿದೆ ಎಂದರು.

ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಜೆಡಿಎಸ್‌ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಬಗ್ಗೆ ಸ್ಥಳೀಯ ಮಟ್ಟದಲ್ಲಿ ಗೊಂದಲ ಉಂಟಾಗಿರುವುದು ಸಹಜವಾಗಿದೆ. ಜಿಲ್ಲೆಯ ಅಭಿವೃದ್ಧಿ ಮತ್ತು ರೈತರ ಹಿತದೃಷ್ಟಿಯಿಂದ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೈಗೊಂಡ ತೀರ್ಮಾನವಾಗಿದೆ. ಇದಕ್ಕೆ ಬೇರೆ ರೀತಿಯ ಅರ್ಥ ಕಲ್ಪಿಸುವುದು ಅನಗತ್ಯ ಎಂದರು.

ಇದೇ ವೇಳೆ ಶಾಸಕ ತಮ್ಮಣ್ಣ ಪುತ್ರ ಡಿ.ಟಿ.ಸಂತೋಷ್‌, ಜೆಡಿಎಸ್‌ ಜಿಲ್ಲಾಧ್ಯಕ್ಷ ಡಿ.ರಮೇಶ್‌, ತಾಲೂಕು ಅಧ್ಯಕ್ಷ ಚಿಕ್ಕತಿಮ್ಮೆಗೌಡ, ಮುಖಂಡರಾದ ಮರಿ ಮಾದೇಗೌಡ, ಪುರಸಭಾ ಉಪಾಧ್ಯಕ್ಷೆ ಸುಮಿತ್ರಾ ರಮೇಶ್‌, ಸದಸ್ಯರಾದ ವನಿತಾ, ಪ್ರಮೀಳಾ ವೆಂಕಟೇಶ್‌, ರತ್ನ ತಿಮ್ಮಯ್ಯ, ಬಸವರಾಜು, ಸೌಭಾಗ್ಯ ವೆಂಕಟೇಶ್‌, ಎಪಿಎಂಸಿ ಮಾಜಿ ನಿರ್ದೇಶಕ ಚನ್ನಸಂದ್ರ ಲಿಂಗೇಗೌಡ ಇತರರು ಇದ್ದರು.

click me!