ಉಪ ಚುನಾವಣೆ : ಜೆಡಿಎಸ್‌ ಜೊತೆಗೆ ಬಿಜೆಪಿ ಒಳ ಒಪ್ಪಂದ..?

Kannadaprabha News   | Asianet News
Published : Oct 30, 2020, 09:26 AM ISTUpdated : Oct 30, 2020, 09:27 AM IST
ಉಪ ಚುನಾವಣೆ : ಜೆಡಿಎಸ್‌ ಜೊತೆಗೆ ಬಿಜೆಪಿ ಒಳ ಒಪ್ಪಂದ..?

ಸಾರಾಂಶ

ಜೆಡಿಎಸ್ ಹಾಗೂ ಬಿಜೆಪಿ ನಡುವೆ ಒಳ ಒಪ್ಪಂದ ನಡೆದಿದೆ ಎನ್ನುವ ಮಾತುಗಳು ಇದೀಗ ದಟ್ಟವಾಗಿವೆ. ರಾಜ್ಯದಲ್ಲಿ ಉಪ ಚುನಾವಣೆ ಅಬ್ಬರ ಜೋರಾದ ಹಿನ್ನೆಲೆಯಲ್ಲೇ ಈ ಮಾತುಗಳು ಕೇಳಿ ಬಂದಿದೆ

 ತುಮಕೂರು (ಅ.30):  ಶಿರಾ ಕ್ಷೇತ್ರದಲ್ಲಿ ಬದಲಾವಣೆಯ ಗಾಳಿ ಬೀಸಿದ್ದು, ಪಕ್ಷದ ಅಭ್ಯರ್ಥಿ ಡಾ.ರಾಜೇಶಗೌಡರನ್ನು ಜನ ಗೆಲ್ಲಿಸುತ್ತಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 ಇಲ್ಲಿ ಮಾತನಾಡಿದ ಅವರು, ಶಿರಾದಲ್ಲಿ ನಮ್ಮ ಪಕ್ಷಕ್ಕೆ ಬೇಸ್‌ ಇರಲಿಲ್ಲ ಎನ್ನುವುದು ನಿಜ. ಆದರೆ, ಅಭಿವೃದ್ಧಿಗಾಗಿ ಈ ಕ್ಷೇತ್ರದಲ್ಲಿ ಈವರೆಗಿನ ಎಲ್ಲ ದಾಖಲೆ ಮೀರಿ ಜನ ಬಿಜೆಪಿಗೆ ಮತ ಹಾಕುತ್ತಾರೆ ಎಂದರು.

ಶಿರಾ ಬೈ ಎಲೆಕ್ಷನ್: ಕೇಸರಿ ಮತಬೇಟೆ, ಟಗರು ಕ್ಯಾಂಪೇನ್, ದಳಪತಿ ಪ್ರಚಾರ .

ಬಿಜೆಪಿ ಜೆಡಿಎಸ್‌ ಜೊತೆ ಯಾವುದೇ ರೀತಿ ಒಳ ಒಪ್ಪಂದ ಮಾಡಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಕಾಂಗ್ರೆಸ್‌, ಜೆಡಿಎಸ್‌ ಸೋಲು ಒಪ್ಪಿಕೊಂಡು ಹತಾಶೆ ವ್ಯಕ್ತಪಡಿಸುತ್ತಿವೆ ಎಂದು ಟೀಕಿಸಿದರು. 

ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಬಿಜೆಪಿಗೆ ಈ ಬಾರಿ ಜನಮತ ನೀಡುತ್ತಾರೆ. ಹಣ, ಹೆಂಡ ಹಂಚುವುದು ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷದ ಸಂಸ್ಕೃತಿ. ನಮ್ಮ ಪಕ್ಷದ್ದಲ್ಲ ಎಂದು ತಿರುಗೇಟು ನೀಡಿದರು.

PREV
click me!

Recommended Stories

ದುಬಾರೆ ಶಿಬಿರದಲ್ಲಿ ಕಳೆದ 10 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ತಕ್ಷ ಹೆಸರಿನ ಆನೆ ಸಾವು
ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ