ಹೆದ್ದಾರಿ ಪಕ್ಕ ಕಟ್ಟಡ ನಿರ್ಮಾಣಕ್ಕೆ ಮುಂದಾದರೆ ಜೋಕೆ! ಹೈಕೋರ್ಟ್ ಆದೇಶ ಕೇಳಿ

By Suvarna NewsFirst Published Aug 26, 2021, 12:07 AM IST
Highlights

*ರಾಷ್ಟ್ರೀಯ ಹೆದ್ದಾರಿಯ 40 ಮೀ.ಒಳಗೆ ಕಟ್ಟಡ ನಿರ್ಮಿಸುವಂತಿಲ್ಲ 
* ಜಿಲ್ಲಾ ಹೆದ್ದಾರಿಯ 25 ಮೀ. ಒಳಗೆ ಕಟ್ಟಡ ನಿರ್ಮಿಸುವಂತಿಲ್ಲ 
* ಕರ್ನಾಟಕ ಹೈ ಕೋರ್ಟ್ ಮಹತ್ವದ ಆದೇಶ

ಬೆಂಗಳೂರು(ಆ. 25)  ರಾಷ್ಟ್ರೀಯ ಹೆದ್ದಾರಿಯ 40 ಮೀ.ಒಳಗೆ ಕಟ್ಟಡ ನಿರ್ಮಿಸುವಂತಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ ಮಹತ್ವದ ಆದೇಶ ನೀಡಿದೆ. ಈ ಬಗ್ಗೆ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಎತ್ತಿ ಹಿಡಿದಿದೆ.

ರಾಷ್ಟ್ರೀಯ, ರಾಜ್ಯ ಹೆದ್ದಾರಿಯ ಮಧ್ಯಭಾಗದಿಂದ 40 ಮೀ. ಒಳಗೆ ಕಟ್ಟಡ ನಿರ್ಮಿಸುವಂತಿಲ್ಲ. ಜಿಲ್ಲಾ ಹೆದ್ದಾರಿಯ 25 ಮೀ. ಒಳಗೆ ಕಟ್ಟಡ ನಿರ್ಮಿಸುವಂತಿಲ್ಲ ಎಂದು ಈ ಹಿಂದೆ ಸರ್ಕಾರ ಸುತ್ತೋಲೆ ಹೊರಡಿಸಿತ್ತು.  ಹೆದ್ದಾರಿ ಇಕ್ಕೆಲ  ಕಟ್ಟಡ ರಹಿತ ವಲಯವಾಗಿ ಅಂತರ ಕಾಯ್ದುಕೊಳ್ಳಬೇಕು ಎಂದು 1999 ರಲ್ಲಿಯೇ  ಹೈಕೋರ್ಟ್ ವಿಭಾಗೀಯ ಪೀಠ ಹೇಳಿತ್ತು.

ಬಂಡೀಪುರಕ್ಕೆ ಹೆದ್ಆರಿ ಕಂಟಕ

ಸುತ್ತೋಲೆಯಲ್ಲಿ ಸ್ಪಷ್ಟವಾಗಿ ಹೇಳಿದ್ದರೂ ಉಡುಪಿಯ ಕಾಪು ಬಳಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66ರ ಬಳಿ ಕಟ್ಟಡ ನಿರ್ಮಾಣ ಆರಂಭವಾಗಿತ್ತು. ಕಟ್ಟಡ ನಿರ್ಮಾಣ ಪ್ರಶ್ನಿಸಿ ಸಾರ್ವಜನಿಕಾ ಹಿತಾಸಕ್ತಿ ಅರ್ಜಿ ದಾಖಲಾಗಿದ್ದು ಅದರ ವಿಚಾರಣೆ ವೇಳೆ ಮತ್ತೆ ಆದೇಶ ಮೂಲಕ ಸ್ಪಷ್ಟನೆ ನೀಡಲಾಗಿದೆ.

60 ದಿನಗಳಲ್ಲಿ ಅತಿಕ್ರಮಿತ ಕಟ್ಟಡವನ್ನು ತೆರವುಗೊಳಿಸಬೇಕೆಂದು 4 ಮಂದಿ ಪ್ರತಿವಾದಿಗಳಿಗೆ ಹೈಕೋರ್ಟ್ ಸೂಚನೆ ನೀಡಿದೆ. ಅಷ್ಟೇ ಅಲ್ಲದೇ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಿದ ಬಗ್ಗೆಯೂ 15 ದಿನಗಳಲ್ಲಿ  ತನಿಖೆ ನಡೆಸಿ ಅಧಿಕಾರಿಗಳ ವಿರುದ್ಧ ಕ್ರಮ  ತೆಗೆದುಕೊಳ್ಳಬೇಕು ಎಂದು ಸೂಚಿಸಲಾಗಿದೆ.


 

 

 

click me!