1 ರಿಂದ 5ನೇ ತರಗತಿವರೆಗೆ ಶಾಲೆ : ಕಠಿಣ ಕ್ರಮ

Kannadaprabha News   | Asianet News
Published : Mar 13, 2021, 11:20 AM ISTUpdated : Mar 13, 2021, 11:38 AM IST
1 ರಿಂದ 5ನೇ ತರಗತಿವರೆಗೆ ಶಾಲೆ : ಕಠಿಣ ಕ್ರಮ

ಸಾರಾಂಶ

ರಾಜ್ಯದಲ್ಲಿ ಇದೀಗ ಮತ್ತೊಮ್ಮೆ ಕೊರೋನಾ ಮಹಾಮಾರಿ ಹಾವಳಿ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಶಾಲೆಗಳ ಮೇಲೆ ಮತ್ತೆ ಪರಿಣಾಮ ಉಮಟಾಗಲಿದೆಯಾ..? 1 ರಿಂದ 5ನೇ ತರಗತಿ ತೆರೆಯಲಿದೆಯಾ..? ಈ ಬಗ್ಗೆ ಶಿಕ್ಷಣ ಸಚಿವರು ಮಾಹಿತಿ ನೀಡಿದ್ದಾರೆ. 

ಮಾಲೂರು (ಮಾ.13):  ಉರು ಹೊಡೆದು ಪರೀಕ್ಷೆ ಎದುರಿಸುವಂತಹ ಶಿಕ್ಷಣ ಬದಲು ಉತ್ತಮ ನಾಗರಿಕರನ್ನಾಗಿ ತಯಾರು ಮಾಡುವ ರೀತಿಯಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಈ ನಿಟ್ಟಿನಲ್ಲಿ ಪಂಚಾಯ್ತಿ ಮಟ್ಟದಲ್ಲಿ ಸದೃಢ ಶಾಲೆ ನಿರ್ಮಿಸುವ ಚಿಂತನೆ ಇದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ಹೇಳಿದರು.

ಪಟ್ಟಣದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನ ಅವರಣದಲ್ಲಿ ನಿರ್ಮಿಸಿರುವ ಪ್ರೌಢಶಾಲಾ ವಿಭಾಗದ ನಾಲ್ಕು ಕೊಠಡಿಯನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್‌ ನಿಂದ ಈ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳು ಅನುಭವಿಸಿದ ಕಷ್ಟಯಾವ ಕಾಲದ ವಿದ್ಯಾರ್ಥಿಗಳು ಅನುಭವಿಸಿಲ್ಲ. ವಿದ್ಯಾರ್ಥಿಗಳಿಗೆ ಉತ್ತೇಜನ ನೀಡುವ ಕೆಲಸ ನಮ್ಮದಾಗಬೇಕಾಗಿದೆ ಎಂದರು.

ಕೊರೋನಾ 2ನೇ ಅಲೆ ಆತಂಕ :  ರಾಜ್ಯದಲ್ಲಿ ಹದಿನೈದು ದಿನಗಳ ಹಿಂದೆ ಇದ್ದ ಪರಿಸ್ಥಿತಿ ಈಗಿಲ್ಲ. ಪ್ರತಿ ನಿತ್ಯ ಕೊರೋನಾ ಸಂಖ್ಯೆ 350 ರಿಂದ 700 ಕ್ಕೆ ಏರಿದ್ದು, ಕೊರೋನಾ 2 ಅಲೆ ಬರುವ ಅತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ 1 ರಿಂದ 5ರ ವರೆಗಿನ ಶಾಲೆಗಳು ರಾಜ್ಯದಲ್ಲಿ ತೆರೆಯಲು ಅವಕಾಶ ನೀಡಿಲ್ಲ. ಪರಿಸ್ಥಿತಿ ಸುಧಾರಿಸಿದ ನಂತರ ಆರೋಗ್ಯ ಇಲಾಖೆ ಸಲಹೆ ಮೇರೆಗೆ ಶಾಲೆಗಳ ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುವುದು. ಖಾಸಗಿ ಶಾಲೆಗಳಲ್ಲಿ 1 ರಿಂದ 5 ರವರೆಗಿನ ತರಗತಿ ನೆಡಸುತ್ತಿರುವ ಬಗ್ಗೆ ಮಾಹಿತಿ ಬಂದಿದ್ದು, ಇಂತಹ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಇಲಾಖೆಯ ಅಧಿಕಾರಿಗಳಿಗೆ ಆದೇಶ ನೀಡಲಾಗಿದೆ ಎಂದರು.

ದ್ವಿತೀಯ ಪಿಯುಸಿ ವೇಳಾಪಟ್ಟಿಯಲ್ಲಿ ಕೊಂಚ ಬದಲಾವಣೆ: ಇಲ್ಲಿದೆ ಪರಿಷ್ಕೃತ

ಈ ಸಂಬಂಧ ಸರ್ಕಾರದ ಆದೇಶದ ವಿರುದ್ಧ ಖಾಸಗಿ ಶಾಲೆಗಳು ಹೈಕೊರ್ಟ್‌ನಲ್ಲಿ ಪ್ರಶ್ನಿಸಿದ್ದು, ಈ ತಿಂಗಳ 24 ರಂದು ವಿಚಾರಣೆ ಇದೆ. 6 ನೇ ತರಗತಿ ನಂತರ ಶಾಲೆಗಳಿಗೆ ಮಾತ್ರ ಶಿಕ್ಷಣ ನೀಡಲು ಅವಕಾಶ ನೀಡಲಾಗಿದೆ. ಕೇಂದ್ರ ಸರ್ಕಾರ ಹಸಿರು ನಿನಾಶೆ ತೋರಿಸಿದ ತಕ್ಷಣ ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ಪ್ರಾರಂಭಿಸಲಾಗುವುದು. ರಾಜ್ಯದಲ್ಲಿ ಈಗಾಗಲೇ 270 ಪಬ್ಲಿಕ್‌ ಶಾಲೆಗಳನ್ನು ತೆರೆಯಲಾಗಿದೆ ಎಂದರು.

ಗ್ರಾಮೀಣ ಶಾಲೆಗಳಿಗೆ ಒತ್ತು ನೀಡಿ :  ಶಾಸಕ ಕೆ.ವೈ.ನಂಜೇಗೌಡ ಮಾತನಾಡಿ ಸರ್ಕಾರಿ ಶಾಲೆಗಳಿಗೆ ಬಡ ಗ್ರಾಮಾಂತರ ಪ್ರದೇಶದಿಂದ ಬರುವ ವಿದ್ಯಾರ್ಥಿಗಳಾಗಿದ್ದು,ಗ್ರಾಮಾಂತರ ಪ್ರದೇಶದ ಸರ್ಕಾರಿ ಶಾಲೆಗಳಿಗೆ ರಾಜ್ಯ ಸರ್ಕಾರ ಹೆಚ್ಚಿನ ಒತ್ತು ನೀಡಬೇಕಾಗಿದೆ. ಶಾಸಕನಾಗಿ ಅಧಿಕಾರ ವಹಿಸಿಕೊಂಡ ನಂತರ ತಾಲೂಕಿನ ಶೈಕ್ಷಣಿಕ ಅಭಿವೃದ್ಧಿಗೆ ಮೊದಲ ಅದ್ಯತೆ ನೀಡಲಾಗಿದೆ. ತಾಲೂಕಿನಾದ್ಯಂತ ಇನ್ನೂ ಸುಮಾರು ನಲವತ್ತಕ್ಕೂ ಹೆಚ್ಚು ಕೊಠಡಿಗಳ ಅವಶ್ಯಕತೆ ಇದೆ ಎಂದು ಸಚಿವರಿಗೆ ಮನವಿ ಸಲ್ಲಿಸಿದರು.

PREV
click me!

Recommended Stories

ಅಂಕಣ | ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಉದ್ಯೋಗದ ನವಯುಗ!
ಜಾಸ್ತಿ ಬೇಡ ಎರಡೇ ಮಕ್ಕಳನ್ನಷ್ಟೇ ಮಾಡಿಕೊಳ್ಳಿ: ನವದಂಪತಿಗಳಿಗೆ ಸಿಎಂ ಸಲಹೆ