ಬಿಜೆಪಿಯಲ್ಲಿ ಭಿನ್ನಮತ, ಬಂಡಾಯ ಇಲ್ಲ: ರೇಣುಕಾಚಾರ್ಯ

By Kannadaprabha News  |  First Published Feb 7, 2020, 9:13 AM IST

ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಬಿಜೆಪಿಯಲ್ಲಿ ಭಿನ್ನಮತ-ಬಂಡಾಯ ಇಲ್ಲ. ಮಾತುಕತೆಗೆ ಅವಕಾಶ ಸಿಕ್ಕಾಗ ಮಾತನಾಡಿದ್ದೇವೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.


ಬೆಂಗಳೂರು(ಫೆ.07): ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಬಿಜೆಪಿಯಲ್ಲಿ ಭಿನ್ನಮತ-ಬಂಡಾಯ ಇಲ್ಲ. ಮಾತುಕತೆಗೆ ಅವಕಾಶ ಸಿಕ್ಕಾಗ ಮಾತನಾಡಿದ್ದೇವೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.

"

Tap to resize

Latest Videos

ರಾಜಭವನದ ಬಳಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ ಭಿನ್ನಮತ-ಬಂಡಾಯ ಏನೂ ಇಲ್ಲ. ನಾವುಗಳು ಎಲ್ಲೂ ಸಭೆ ಸೇರಿ ಚರ್ಚಿಸಿಲ್ಲ. ಹೋಟೆಲ್‌ ಅಥವಾ ರೆಸಾರ್ಟ್‌ಗೆ ಹೋಗಿಲ್ಲ. ಶಾಸಕರು ಪಕ್ಷದ ಕಚೇರಿ, ಶಾಸಕರ ಭವನದ ಕೊಠಡಿಯಲ್ಲಿ ಒಂದೆಡೆ ಸೇರಿದಾಗ ಪರಸ್ಪರ ಮಾತನಾಡಿದ್ದೇವೆ. ಇದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದರು.

ಆಟೋ ಮಿನಿಮಮ್ ಚಾರ್ಜ್‌ ಹೆಚ್ಚಳ, ಮೀಟರ್ ಕಡ್ಡಾಯ

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಕಾಂಗ್ರೆಸ್‌-ಜೆಡಿಎಸ್‌ನಿಂದ ಬಿಜೆಪಿಗೆ ಬಂದ 10 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿರುವುದರಿಂದ ಸಂತೋಷವಾಗಿದೆ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನಾಡಿನ ಜನರ ಅಪೇಕ್ಷೆಯಂತೆ ಕೆಲಸ ಮಾಡುತ್ತಿದ್ದಾರೆ. ನಮ್ಮ ನಾಯಕರು ನನ್ನನ್ನು ಬೆಳೆಸಿದ್ದಾರೆ. ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ನನ್ನ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಮುಖ್ಯಮಂತ್ರಿ ಏನು ಸೂಚನೆ ಕೊಡುತ್ತಾರೋ ಅದನ್ನು ಪಾಲಿಸುವುದು ತಮ್ಮ ಕರ್ತವ್ಯ ಎಂದು ತಿಳಿಸಿದ್ದಾರೆ.

click me!