ನಾಳೆ ಬೆಂಗ್ಳೂರಲ್ಲಿ ಬೆಳಗ್ಗೆ 10 ರಿಂದ ರಾತ್ರಿ 10 ರವರೆಗೂ ಕರೆಂಟ್‌ ಇರಲ್ಲ!

By Girish Goudar  |  First Published Oct 19, 2024, 6:14 PM IST

66/11 ಕೆವಿ ಟೆಲಿಕಾಂ ಸ್ಟೇಷನ್‌ನಲ್ಲಿ 11 ಕೆವಿ ಬ್ಯಾಂಕ್-2 ನ ಬ್ರೇಕರ್‌ಗಳನ್ನು ಬದಲಿಸುವ ವಿಚಾರ ತುರ್ತು ನಿರ್ವಹಣಾ ಕೆಲಸ ಇರುವ ಹಿನ್ನೆಲೆಯಲ್ಲಿ ಭಾನುವಾರ ಬೆಳಿಗ್ಗೆ 10:00 ಗಂಟೆಯಿಂದ ರಾತ್ರಿ 10:00 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ತಿಳಿಸಿದ ಬೆಸ್ಕಾಂ   


ಬೆಂಗಳೂರು(ಅ.19):  66/11 ಕೆವಿ ಟೆಲಿಕಾಂ ಸ್ಟೇಷನ್‌ನಲ್ಲಿ 11 ಕೆವಿ ಬ್ಯಾಂಕ್-2 ನ ಬ್ರೇಕರ್‌ಗಳನ್ನು ಬದಲಿಸುವ ವಿಚಾರ ತುರ್ತು ನಿರ್ವಹಣಾ ಕೆಲಸ ಇರುವ ಹಿನ್ನೆಲೆಯಲ್ಲಿ ನಾಳೆ(ಭಾನುವಾರ)ಯಿಂದ ಅ.23 ರವರೆಗೆ ಬೆಳಿಗ್ಗೆ 10:00 ಗಂಟೆಯಿಂದ ರಾತ್ರಿ 10:00 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. 

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: 

Tap to resize

Latest Videos

ಓಬಳೇಶ್ ಕಾಲೋನಿ, ರ‍್ಸಸ್ ಗರ‍್ಡನ್, ರಾಯಪುರ, ಬಿನ್ನಿ ಪೇಟ್, ಪಾದರಾಯನಪುರ, ಜೆಜೆಆರ್ ನಗರ, ಗೋಪಾಲನ್ ಮಾಲ್, ಮೈಸೂರು ರಸ್ತೆ 1ನೇ, 2ನೇ, 3ನೇ ಕ್ರಾಸ್, ಮೋಮಿಂಪುರ, ಜಂಥಾ ಕಾಲೋನಿ, ಶಾಮನಾ ಗಾರ್ಡನ್‌, ರ‍್ಫತ್ ನಗರ ರಂಗನಾಥ್ ಕಾಲೋನಿ, ಹೊಸಹಳ್ಳಿ ಮುಖ್ಯರಸ್ತೆ, ಬಿನ್ನಿ ಪೇಟೆ, ಅಂಜನಪ್ಪ ಗಾರ್ಡನ್‌, ದೊರೆಸ್ವಾಮಿ ನಗರ

ಹೂವಿನ ಉದ್ಯಾನ, ಹೊಸ ಪೊಲೀಸ್ ಕ್ವಾಟ್ರಸ್, ಎಸ್‌ಡಿ ಮಠ, ಕಾಟನ್ ಪೆಟ್, ಅಕ್ಕಿಪೇಟೆ, ಬಾಲಾಜಿ ಕಾಂಪ್ಲೆಕ್ಸ್, ಮನರ‍್ತಿ ಪೆಟ್, ಸುಲ್ತಾನ್ ಪೆಟ್ ನಲ್ಬಂಡ್‌ವಾಡಿ ಎದುರು ಚಿಕ್ಕಪೇಟೆ ಮೆಟ್ರೋ ಸ್ಟೇಷನ್, ಪೊಲೀಸ್ ರಸ್ತೆ, ಗೋಪಾಲನ್ ಅಪಾರ್ಟ್‌ಮೆಂಟ್‌, ಮರಿಯಪ್ಪ ಎ. ಕೆಪಿಎಸ್ ಮಠ, ಗಂಗಪ್ಪ ಗಾರ್ಡನ್, ಭುವನೇಶ್ವರಿ ನಗರ, ಪ್ರೆಸ್ಟೀಜ್ ವುಡ್ಸ್ ಅಪಾರ್ಟ್‌ಮೆಂಟ್‌ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಸಾರ್ವಜನಿಕರಿಗೆ‌ ಮಾಹಿತಿ ನೀಡಿದೆ.  

click me!