ಈ ತಿಂಗಳ ಕೊನೆವರೆಗೂ ಗೆಜ್ಜೆಗಿರಿ ಕ್ಷೇತ್ರದಲ್ಲಿ ದರ್ಶನ ನಿರ್ಬಂಧ

By Kannadaprabha NewsFirst Published Jul 4, 2020, 8:08 AM IST
Highlights

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರವಾದ ಗೆಜ್ಜೆಗಿರಿ ನಂದನ ಬಿತ್ತೆಲ್‌ನಲ್ಲಿ ಜುಲೈ 31ರ ವರೆಗೆ ಭಕ್ತರ ಪ್ರವೇಶ, ದರ್ಶನಕ್ಕೆ ನಿರ್ಬಂಧ ವಿಧಿಸಲಾಗಿದೆ.

ಪುತ್ತೂರು(ಜು.04): ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರವಾದ ಗೆಜ್ಜೆಗಿರಿ ನಂದನ ಬಿತ್ತೆಲ್‌ನಲ್ಲಿ ಜುಲೈ 31ರ ವರೆಗೆ ಭಕ್ತರ ಪ್ರವೇಶ, ದರ್ಶನಕ್ಕೆ ನಿರ್ಬಂಧ ವಿಧಿಸಲಾಗಿದೆ.

ಕೊರೋನಾ ದಿನೇ​ದಿನೇ ಏರು​ಗ​ತಿ​ಯಲ್ಲಿ ಸಾಗು​ತ್ತಿ​ರು​ವು​ದ​ರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಕ್ಷೇತ್ರದಲ್ಲಿ ಎಂದಿನಂತೆ ನಿತ್ಯ ಪೂಜೆಯು ಯಥಾಪ್ರಕಾರ ನಡೆಯಲಿದೆ. ಅಗತ್ಯ ಸಂಖ್ಯೆಯ ಪೂಜಾಕರ್ಮಿಗಳು ಮಾತ್ರ ಇದರಲ್ಲಿ ಭಾಗವಹಿಸಲಿದ್ದಾರೆ.

Latest Videos

ಉಳಿದಂತೆ ಸಾರ್ವಜನಿಕ ಭಕ್ತರಿಗೆ ಪ್ರವೇಶ ಇರುವುದಿಲ್ಲ. ಜುಲೈ 31ರವರೆಗೆ ಭಕ್ತಾದಿಗಳು ಕ್ಷೇತ್ರಕ್ಕೆ ಭೇಟಿ ನೀಡದೇ ಇರುವ ಮೂಲಕ ಸಹಕರಿಸಬೇಕು ಎಂದು ಕ್ಷೇತ್ರದ ಯಜಮಾನರಾದ ಶ್ರೀಧರ ಪೂಜಾರಿ, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಜಯಂತ ನಡುಬೈಲ್‌, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪೀತಾಂಬರ ಹೇರಾಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

click me!